ಶಿವಮೊಗ್ಗ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಶಿವಮೊಗ್ಗ ವಿಭಾಗದಿಂದ ರಾಷ್ಟ್ರಕವಿ ಕುವೆಂಪು ವಿಮಾನ ನಿಲ್ದಾಣ/ಕಾಚಿನಕಟ್ಟೆಗೆ 2 ನಗರ ಸಾರಿಗೆ ಬಸ್‌ಗಳನ್ನು ಕಾರ್ಯಾಚರಣೆಗೊಳಿಸುತ್ತಿದೆ.
ಶಿವಮೊಗ್ಗ ಬಸ್ ನಿಲ್ದಾಣದಿಂದ ಬೆಳಗ್ಗೆ 9.45, 10.00, 12.45, 02.00, 03.00 ಮತ್ತು 3.30ಕ್ಕೆ ಅದೇ ರೀತಿ ರಾಷ್ಟ್ರಕವಿ ಕುವೆಂಪು ವಿಮಾನ ನಿಲ್ದಾಣ/ಕಾಚಿನಕಟ್ಟೆಯಿಂದ ಬೆಳಗ್ಗೆ 10.40, 11.40, 01.30, 02.45, 3.35 ಹಾಗೂ 4.05 ರ ಸಮಯದಲ್ಲಿ ಓಡಾಟ ನಡೆಸಲಾಗುತ್ತಿದ್ದು, ಸಾರ್ವಜನಿಕರು ಈ ಬಸ್‌ಗಳ ಸೌಲಭ್ಯವನ್ನು ಪಡೆದುಕೊಳ್ಳುವಂತೆ ಕರಾರಸಾನಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಅಕ್ರಮ ಗಾಂಜಾ ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಗೆ ಕಠಿಣ ಕಾರಾಗೃಹ ಶಿಕ್ಷೆ
ಭದ್ರಾವತಿ ತಾಲೂಕು ಕಲ್ಲಹಳ್ಳಿ ಗ್ರಾಮದ ಮುರುಗ ಎಲ್. ಬಿನ್ ಲಕ್ಷ್ಮಣ ಎಂಬ 34 ವರ್ಷದ ವ್ಯಕ್ತಿ 2021ರಲ್ಲಿ ಓಮಿನಿ ವ್ಯಾನ್ ಮೂಲಕ ಆಂದ್ರದ ರಾಜಮಂಡ್ರಿಯಿಂದ 50 ಕೆ.ಜಿ.430 ಗ್ರಾಂ ತೂಕದ ಒಣ ಗಾಂಜಾವನ್ನು ಕಾನೂನು ಬಾಹಿರವಾಗಿ ಸಾಕಾಣಿಕೆ ಮಾಡುವಾಗ ಸೊರಬ ವಲಯ ಅಬಕಾರಿ ನಿರೀಕ್ಷಕರ ತಂಡವು ಸೆರೆಹಿಡಿದು, ಪ್ರಕರಣ ದಾಖಲಿಸಿಕೊಂಡು ಕಲಂ: 8(ಸಿ), 20(ii)(ಸಿ), 20(ಬಿ), 25 ಎನ್.ಡಿ.ಪಿ.ಎಸ್. ಕಾಯ್ದೆ 1985 ರಡಿಯಲ್ಲಿ ಆರೋಪಿತನ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಈ ಪ್ರಕರಣವನ್ನು ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಸಾಕ್ಷಿ ಮತ್ತು ಇನ್ನಿತರೆ ಪೂರಕ ಸಾಕ್ಷ್ಯಾಧಾರಗಳಿಂದ ಹಾಗೂ ಸರ್ಕಾರದ ಪರ ಅಭಿಯೋಜಕರು ಮಂಡಿಸಿದ ವಾದವನ್ನು ಪುರಸ್ಕರಿಸಿ, ಆರೋಪಿಯ ಮೇಲಿನ ಆರೋಪವು ದೃಡಪಟ್ಟಿದೆ ಎಂದು ಈ ಅಪರಾಧಕ್ಕೆ 10 ವರ್ಷಗಳ ಕಠಿಣ ಕಾರಾಗೃಹ ವಾಸ ಸಜೆ ಮತ್ತು ರೂ. 1.00 ಲಕ್ಷ ದಂಡ, ದಂಡ ಪಾವತಿಸಲು ತಪ್ಪಿದ್ದಲ್ಲಿ 2 ವರ್ಷ ಹೆಚ್ಚುವರಿ ಸಾಧಾರಣ ಸಜೆಯನ್ನು ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ್ ನಾಯಕ್‌ರವರು ಏ.04 ರಂದು ತೀರ್ಪು ನೀಡಿ ಆದೇಶಿಸಿದ್ದಾರೆ.
ಸರ್ಕಾರದ ಪರ ಅಭಿಯೋಜಕರಾದ ಸುರೇಶ್ ಕುಮಾರ್ ಎ.ಎಂ. ವಾದ ಮಂಡಿಸಿದ್ದರು.
ಕನ್ನಡಿಗರು ಒಗ್ಗಟ್ಟು ಆಗದಿದ್ದರೆ ನೀರಿನ ನ್ಯಾಯ ಸಿಗಲ್ಲ: ನಾವು ನೀರಗಂಟಿ ಕೆಲಸ ಮಾಡುತ್ತಿದ್ದೇವೆ-HDK ಕಿಡಿ
BIG Alert: ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ನೇಮಕಾತಿ ಕುರಿತು ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ ಈ ಎಚ್ಚರಿಕೆ!