ಬೆಂಗಳೂರು: ರಾಜ್ಯ ಸರ್ಕಾರದಿಂದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಅದೇ ರಾಜ್ಯ ಸರ್ಕಾರದಿಂದ 2 ಜೊತೆ ಸಮವಸ್ತ್ರವನ್ನು ವಿತರಿಸೋದಕ್ಕೆ ನಿರ್ಧಾರವನ್ನು ಕೈಗೊಂಡಿದೆ.
ಗುರುವಾರದಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಪ್ರತಿ ವರ್ಷ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಸಮವಸ್ತ್ರ ವಿತರಣೆಗೆ ನಿರ್ಧಾರ ಕೈಗೊಳ್ಳಲಾಗಿದೆ.
ಪ್ರತಿಯೊಬ್ಬ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಪ್ರತಿ ವರ್ಷ 02 ಸೀರೆಗಳನ್ನು ವಿತರಿಸಲಾಗುತ್ತದೆ. ಕರ್ನಾಟಕ ಕೈಮಗ್ಗ ನಿಗಮ ನಿಯಮಿತದಿಂದಲೇ ಖರೀದಿಸಬೇಕೆಂಬ ಷರತ್ತು ವಿಧಿಸಿ ಈ ಹಿಂದೆ ಸಚಿವ ಸಂಪುಟ ಅನುಮೋದನೆ ನೀಡಿತ್ತು. ಕೇಂದ್ರ ಸರ್ಕಾರದ ಅನುದಾನ ಇರುವುದರಿಂದ ಇ-ಟೆಂಡರ್ ಅಥವಾ ಜೆಮ್ ಪೋರ್ಟಲ್ ಮುಖಾಂತರ ಖರೀದಿಸುವುದು ಸೂಕ್ತವಾಗಿದೆ ಎಂದು ಪರಿಗಣಿಸಿ ಟೆಂಡರ್ ಮುಖಾಂತರ ಖರೀದಿಸಲು ಸಚಿವ ಸಂಪುಟ ನಿರ್ಣಯಿಸಿದೆ.
69,919 ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ 1,37,509 ಅಂಗನವಾಡಿ ಕಾರ್ಯಕರ್ತ ಮತ್ತು ಸಹಾಯಕಿಯರಿಗೆ ಐ.ಸಿ.ಡಿ.ಎಸ್ ಯೋಜನೆಯ ನಿಯಮಾನುಸಾರ ತಲಾ ಎರಡು ಸೀರೆಗಳಂತೆ ಒಟ್ಟು 2,75,018 ಸೀರೆಗಳನ್ನು ಕಟಿಪಿಪಿ ಪೋರ್ಟಲ್ (ಇ-ಟೆಂಡರ್ / ಜೆಮ್ ಪೋರ್ಟಲ್ ಮುಖಾಂತರ ಖರೀದಿಸಲು 2024-25 ನೇ ಸಾಲಿನ ಅನುದಾನದಿಂದ ರೂ. 13.75 ಕೋಟಿಗಳ ವೆಚ್ಚವನ್ನು ಭರಿಸಲು”ಸಚಿವ ಸಂಪುಟ ತೀರ್ಮಾನಿಸಿದೆ ಎಂದು ಕಾನುನು, ಸಂಸದೀಯ ವ್ಯವಹಾರಗಳ ಸಚಿವರು ತಿಳಿಸಿದರು.