‘ಅಂಗನವಾಡಿ ಕಾರ್ಯಕರ್ತೆ’ಯರಿಗೆ ಗುಡ್ ನ್ಯೂಸ್: ಶೀಘ್ರವೇ ‘2000 ವೇತನ’ ಹೆಚ್ಚಳ- ಸಿಎಂ ಭರವಸೆ

ಬೆಂಗಳೂರು : ಅಂಗನವಾಡಿ ಕಾರ್ಯಕರ್ತರಿಗೆ ಕನಿಷ್ಠ ಎರಡು ಸಾವಿರ ರೂಪಾಯಿ ವೇತನ ಹೆಚ್ಚಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು. ವಿಧಾನಸೌಧದಲ್ಲಿ ಸೋಮವಾರ ನಡೆದ ಅಂಗನವಾಡಿ ಕಾರ್ಯಕರ್ತರ ಹಾಗೂ ವಿಕಲ ಚೇತನರ ಸಂಘಟನೆಗಳ ನಿಯೋಗದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಸಚಿವರು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು ಅನುಭವಿಸುತ್ತಿರುವ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ವಿಕಲಚೇತನರು, ಅಂಗನವಾಡಿ ಕಾರ್ಯಕರ್ತರ ಸಮಸ್ಯೆಗಳಿಗೆ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ … Continue reading ‘ಅಂಗನವಾಡಿ ಕಾರ್ಯಕರ್ತೆ’ಯರಿಗೆ ಗುಡ್ ನ್ಯೂಸ್: ಶೀಘ್ರವೇ ‘2000 ವೇತನ’ ಹೆಚ್ಚಳ- ಸಿಎಂ ಭರವಸೆ