ಬೆಂಗಳೂರು : ಅಂಗನವಾಡಿ ಕಾರ್ಯಕರ್ತೆಯರಿಗೆ ಕೇಂದ್ರ ಸಚಿವ ವಿ.ಸೋಮಣ್ಣ ಭರ್ಜರಿ ಸಿಹಿಸುದ್ದಿ ನೀಡಿದ್ದು, ಗ್ರಾಚುಯಿಟಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಬಗ್ಗೆ ಚರ್ಚಿಸಲು ಕೇಂದ್ರಕ್ಕೆ ನಿಯೋಗವನ್ನು ಕರೆದೊಯ್ಯುತ್ತೇನೆ ಎಂದು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ನಗರದ ಶಿಕ್ಷಕರ ಸದನದಲ್ಲಿ ನಡೆದ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಅಂಗನವಾಡಿ ಕಾರ್ಯಕರ್ತೆಯರ ಬಗ್ಗೆ ನನಗೆ ಅಪಾರ ಹೆಮ್ಮೆ, ಗೌರವ ಇದೆ. ಗ್ರಾಚುಯಿಟಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಬಗ್ಗೆ ಚರ್ಚಿಸಲು 3 ತಿಂಗಳಲ್ಲಿ ನಿಯೋಗವನ್ನು ತೆಗೆದುಕೊಂಡು ಹೋಗುತ್ತೇನೆ ಎಂದು ಹೇಳಿದ್ದಾರೆ.