ಬಳ್ಳಾರಿ: ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರಿಗೆ, ಸಹಾಯಕಿಯರಿಗೆ ಸಿಹಿಸುದ್ದಿ ಎನ್ನುವಂತೆ ಸಿಎಂ ಸಿದ್ಧರಾಮಯ್ಯ ಅವರು ಗೌರವಧನ ಹೆಚ್ಚಳಕ್ಕೆ ತಾತ್ವಿಕ ಒಪ್ಪಿಗೆಯನ್ನು ನೀಡಿದ್ದಾರೆ ಎಂಬುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಬಳ್ಳಾರಿ ನಗರದ ವಾಲ್ಮೀಕಿ ಸಮುದಾಯ ಭವನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಹಿರಿಯ ನಾಗರಿಕರ ಹಾಗೂ ವಿಕಲಚೇತನರ ಸಬಲೀಕರಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ವಿವಿಧ ಪರಿಕರಗಳ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು.
ಗೌರವಧನ ಹೆಚ್ಚಳಕ್ಕೆ ಮುಖ್ಯಮಂತ್ರಿಗಳು ಅಸ್ತು:
ರಾಜ್ಯದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚಿಸಲಾಗಿದ್ದು, ಮುಖ್ಯಮಂತ್ರಿಯವರು ತಾತ್ವಿಕ ಒಪ್ಪಿಗೆ ನೀಡಿದ್ದಾರೆ ಎಂದು ಹೇಳಿದರು.
ಕಳಪೆ ಆಹಾರ ಪೂರೈಕೆಯಾದಲ್ಲಿ ಗಮನಕ್ಕೆ ತನ್ನಿ:
ಅಂಗನವಾಡಿ ಕೇಂದ್ರಗಳಿಗೆ ಪೂರೈಕೆಯಾಗುವ ಆಹಾರ ಸಾಮಗ್ರಿಗಳ ಗುಣಮಟ್ಟ ಕಾಯ್ದುಕೊಳ್ಳಬೇಕು. ಆಹಾರ ಸಾಮಾಗ್ರಿಗಳು ಕಳಪೆ ಇದ್ದಲ್ಲಿ ಅಥವಾ ಯಾವುದೇ ಲೋಪದೋಷ ಕಂಡುಬಂದಲ್ಲಿ ಗಮನಕ್ಕೆ ತರಬೇಕು. ಇಲ್ಲವಾದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಪತ್ರ ಬರೆಯಬೇಕು ಎಂದು ತಿಳಿಸಿದರು.
BREAKING: ರಾಜ್ಯ ಸರ್ಕಾರದಿಂದ ‘ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ’ಗಳನ್ನು ನೇಮಿಸಿ ಆದೇಶ: ಇಲ್ಲಿದೆ ಪಟ್ಟಿ