ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಸಿಹಿಸುದ್ದಿ: ಗೌರವಧನ ಹೆಚ್ಚಳಕ್ಕೆ ಸಿಎಂ ತಾತ್ವಿಕ ಒಪ್ಪಿಗೆ

ಬಳ್ಳಾರಿ: ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರಿಗೆ, ಸಹಾಯಕಿಯರಿಗೆ ಸಿಹಿಸುದ್ದಿ ಎನ್ನುವಂತೆ ಸಿಎಂ ಸಿದ್ಧರಾಮಯ್ಯ ಅವರು ಗೌರವಧನ ಹೆಚ್ಚಳಕ್ಕೆ ತಾತ್ವಿಕ ಒಪ್ಪಿಗೆಯನ್ನು ನೀಡಿದ್ದಾರೆ ಎಂಬುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಬಳ್ಳಾರಿ ನಗರದ ವಾಲ್ಮೀಕಿ ಸಮುದಾಯ ಭವನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಹಿರಿಯ ನಾಗರಿಕರ ಹಾಗೂ ವಿಕಲಚೇತನರ ಸಬಲೀಕರಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ವಿವಿಧ ಪರಿಕರಗಳ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು. ಗೌರವಧನ ಹೆಚ್ಚಳಕ್ಕೆ ಮುಖ್ಯಮಂತ್ರಿಗಳು ಅಸ್ತು: … Continue reading ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಸಿಹಿಸುದ್ದಿ: ಗೌರವಧನ ಹೆಚ್ಚಳಕ್ಕೆ ಸಿಎಂ ತಾತ್ವಿಕ ಒಪ್ಪಿಗೆ