ಬೆಂಗಳೂರು: ತಮ್ಮ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ನಿನ್ನೆಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಇಂತಹ ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ ಎನ್ನುವಂತೆ ಶೀಘ್ರವೇ ಗೌರವಧನ ಹೆಚ್ಚಳ ಮಾಡುವುದಾಗಿ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಇಂದು ವಿಧಾನಸೌಧದಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರೊಂದಿಗೆ ಕುಂದು ಕೊರತೆ ಸಭೆ ನಡೆಸಿದರು. ಈ ಸಭೆಯಲ್ಲಿ ಗ್ಯಾಚ್ಯುಟಿ ಸೌಲಭ್ಯ, ಗೌರವಧನ ಹೆಚ್ಚಳ, ಮುಂಬಡ್ತಿ, ಉಚಿತ ವೈದ್ಯಕೀಯ ಸೌಲಭ್ಯ, ಅನಾರೋಗ್ಯ ಪೀಡಿತ ಕಾರ್ಯಕರ್ತೆ, ಸಹಾಯಕಿಯರಿಗೆ ಸ್ವಯಂ ನಿವೃತ್ತಿಯಂತ ಯೋಜನೆ ಕಲ್ಪಿಸುವ ಕುರಿತಂತೆ ಚರ್ಚೆ ನಡೆಸಲಾಯಿತು.
ಈ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ಯಾವಾಗಲೂ ಅಂಗನವಾಡಿ ಕಾರ್ಯಕರ್ತೆಯರ ಪರ ಇದ್ದೇನೆ. ಇಡೀ ದೇಶಕ್ಕೆ ನಮ್ಮ ರಾಜ್ಯದಲ್ಲಿರುವಂತ ಅಂಗನವಾಡಿ ಮಾದರಿಯಾಗಿದ್ದಾವೆ. ನಿಮ್ಮ ಬೇಡಿಕೆಗಳನ್ನು ಈಡೇರಿಸುವ ಕುರಿತು ಸಿಎಂ ಸಿದ್ಧರಾಮಯ್ಯ ಜೊತೆಗೆ ಚರ್ಚಿಸುವುದಾಗಿ ತಿಳಿಸಿದರು. ಅಲ್ಲದೇ ಗೌರವಧನ ಹೆಚ್ಚಿಸೋ ಸಂಬಂಧವೂ ಚರ್ಚಿಸುವುದಾಗಿ ಹೇಳಿದರು.
ಮುಂಬೈನಲ್ಲಿ ಮೊದಲ HMPV ವೈರಸ್ ಕೇಸ್ ಪತ್ತೆ: ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 3ಕ್ಕೆ ಏರಿಕೆ | HMPV Case