ಬೆಂಗಳೂರು: ರಾಜ್ಯದ ಪ್ರಾಣಿ ಪ್ರಿಯರಿಗೆ ಗುಡ್ ನ್ಯೂಸ್ ಎನ್ನುವಂತೆ ಸರ್ಕಾರದಿಂದ ಪ್ರಾಣಿಗಳ ಆರೈಕೆ-ನಿರ್ಹಣೆಗಾಗಿ ಡಿಪ್ಲೋಮಾ ಕೋರ್ಸ್ ಆರಂಭಿಸಲಾಗಿದೆ. ಈ ಮೂಲಕ ಪ್ರಾಣಿ ಆರೈಕೆಯ ತರಬೇತಿಯನ್ನು ನೀವು ಕಲಿಯೋದಕ್ಕೆ ಅವಕಾಶ ಮಾಡಿಕೊಟ್ಟಿದೆ.
ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಪ್ರಾಣಿಗಳ ಆರೈಕೆ ಮತ್ತು ನಿರ್ವಹಣೆ ವಿಷಯ ಕುರಿತ ಡಿಪ್ಲೊಮಾ ಕೋರ್ಸ್ ಆರಂಭಿಸಲು ಅರಣ್ಯ ಸಚಿವ ಈಶ್ವರ ಖಂಡ್ರೆ ಅನುಮೋದನೆ ನೀಡಿದ್ದಾರೆ.
ಈ ಕೋರ್ಸ್ 10 ತಿಂಗಳ ಅವಧಿಯದ್ದಾಗಿರುತ್ತದೆ. ಮೃಗಾಲಯಗಳಲ್ಲಿ ವನ್ಯಜೀವಿಗಳ ಆರೈಕೆಗೆ ನುರಿತ ಸಿಬ್ಬಂದಿಯ ಅಗತ್ಯವಿದ್ದು, ಬೆಂಗಳೂರು ವಿಶ್ವವಿದ್ಯಾಲಯಗಳ ಮಾನ್ಯತೆಯೊಂದಿಗೆ ಬೆಂಗಳೂರಿನ ಲೈಫ್ ಸೈನ್ಸ್ ಎಜುಕೇಷನ್ ಟ್ರಸ್ಟ್ ಸಹಯೋಗದಲ್ಲಿ ಆರಂಭಿಸಲಾಗುವುದು ಎಂದು ಅವರು ವಿಕಾಸಸೌಧದಲ್ಲಿ ನಡೆದ ಮೃಗಾಲಯ ಪ್ರಾಧಿಕಾರದ ಸಭೆಯಲ್ಲಿ ವಿವರಿಸಿದರು.
ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಪ್ರಾಣಿಗಳ ಆರೈಕೆ ಮತ್ತು ನಿರ್ವಹಣೆ ವಿಷಯ ಕುರಿತ ಡಿಪ್ಲೊಮಾ ಕೋರ್ಸ್ ಆರಂಭಿಸಲು ಅರಣ್ಯ ಸಚಿವ ಈಶ್ವರ ಖಂಡ್ರೆ ಅನುಮೋದನೆ ನೀಡಿದ್ದಾರೆ.
ಈ ಕೋರ್ಸ್ 10 ತಿಂಗಳ ಅವಧಿಯದ್ದಾಗಿರುತ್ತದೆ. ಮೃಗಾಲಯಗಳಲ್ಲಿ ವನ್ಯಜೀವಿಗಳ ಆರೈಕೆಗೆ ನುರಿತ ಸಿಬ್ಬಂದಿಯ ಅಗತ್ಯವಿದ್ದು, ಬೆಂಗಳೂರು ವಿಶ್ವವಿದ್ಯಾಲಯಗಳ… pic.twitter.com/Cf4vtrdqVp
— DIPR Karnataka (@KarnatakaVarthe) June 11, 2024
Good News: ಸಾರಿಗೆ ಇಲಾಖೆಯ 9,000 ಹುದ್ದೆ ಭರ್ತಿಗೆ ನಿರ್ಧಾರ: ಸಚಿವ ರಾಮಲಿಂಗಾರೆಡ್ಡಿ
10 ದಿನಗಳ ‘ಯೋಗೋತ್ಸವ’ ಕಾರ್ಯಕ್ರಮಕ್ಕೆ ‘ಆರೋಗ್ಯ ಸಚಿವ ದಿನೇಶ್ ಗುಂಡೂರಾವ್’ ಚಾಲನೆ