ಕೋಲಾರ: ರಾಜ್ಯ ಸರ್ಕಾರದಿಂದ ಅನ್ನಭಾಗ್ಯ ಫಲಾನುಭವಿಗಳಿಗೆ ಹೆಚ್ಚುವರಿಯಾಗಿ 5 ಕೆಜಿ ಅಕ್ಕಿ ನೀಡುವುದಾಗಿ ಘೋಷಿಸಲಾಗಿತ್ತು. ಆದರೇ ಅಕ್ಕಿ ದೊರೆಯದ ಕಾರಣ, ಅಕ್ಕಿಯ ದರದಲ್ಲಿ ಹಣವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತಿದೆ. ಆದರೇ ಅನ್ನಭಾಗ್ಯ ಯೋಜನೆ ಹಣ ಜಮಾ ಆಗಿಲ್ಲ. ಇದಕ್ಕೆ ಸರ್ವರ್ ಸಮಸ್ಯೆ ಕಾರಣ, ಮುಂದಿನ ವಾರದಲ್ಲಿ ಜಮಾ ಆಗಲಿದೆ ಎಂಬುದಾಗಿ ಆಹಾರ ಸಚಿವ ವಿ.ಮುನಿಯಪ್ಪ ತಿಳಿಸುವ ಮೂಲಕ, ಗುಡ್ ನ್ಯೂಸ್ ನೀಡಿದ್ದಾರೆ.
ಇಂದು ಕೋಲಾರದ ಕಾಂಗ್ರೆಸ್ ನಗರಾಧ್ಯಕ್ಷ ಪ್ರಸಾದ್ ಬಾಬು ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಅನ್ನಭಾಗ್ಯ ಯೋಜನೆಯ ಹಣ ಈವರೆಗೆ ಬಿಡುಗಡೆಯಾಗಿಲ್ಲ. ಈ ಹಣವನ್ನು ಪ್ರತಿ ತಿಂಗಳು 10ರಂದು ಬಿಡುಗಡೆ ಮಾಡಲಾಗುತ್ತಿತ್ತು. ಸರ್ವರ್ ಸಮಸ್ಯೆಯಿಂದ ಈಗ ಬಿಡುಗಡೆ ಮಾಡಲಾಗಿಲ್ಲ. ಮುಂದಿನ ವಾರ ಬಿಡುಗಡೆಯಾಗಲಿದೆ ಎಂದು ತಿಳಿಸಿದರು.
ದಕ್ಷಿಣ ಭಾರತದಲ್ಲಿ ನಮ್ಮ ಕರ್ನಾಟಕದಲ್ಲೇ ಶೇ.80ರಷ್ಟು ಬಡತನವಿದೆ. ಬಡತನ ರೇಖೆಗಿಂತ ಕಡಿಮೆ ಇರುವವರಿಗೆ ಬಿಪಿಎಲ್ ಕಾರ್ಡ್ ವಿತರಣೆ ಮಾಡಲಾಗುತ್ತಿದೆ. ಅರ್ಹರಲ್ಲದವರೂ ಬಿಪಿಎಲ್ ಕಾರ್ಡ್ ಪಡೆದಿರುವ ಬಗ್ಗೆ ಪರಿಶೀಲಿಸಲಾಗುತ್ತಿದೆ. ಅವರ ಬಿಪಿಎಲ್ ಕಾರ್ಡ್ ರದ್ದುಗೊಳಿಸಿ, ಎಪಿಎಲ್ ಕಾರ್ಡ್ ಗೆ ವರ್ಗಾವಣೆ ಮಾಡಲಾಗುತ್ತದೆ ಎಂಬುದಾಗಿ ಹೇಳಿದರು.
SHOCKING NEWS: ಕೊಪ್ಪಳದಲ್ಲಿ ಬಾಲಕನ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ಸ್ಥಳದಲ್ಲೇ ಸಾವು
BREAKING : ಭಾರತದ ಮೊಟ್ಟ ಮೊದಲ ‘ಭಯೋತ್ಪಾದಕ’ ನಾಥೂರಾಮ್ ಗೋಡ್ಸೆ : MLC ಬಿಕೆ ಹರಿಪ್ರಸಾದ್ ಹೇಳಿಕೆ