ಬೆಂಗಳೂರು: ರಾಜ್ಯ ಸರ್ಕಾರದಿಂದ ಅನ್ನಭಾಗ್ಯ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ. ಅದೇ ಇನ್ಮುಂದೆ ಆಹಾರ ಕಿಟ್ ವಿತರಣೆ ಮಾಡಲು ಮುಂದಾಗಿರುವುದಾಗಿ ಆಹಾರ ಸಚಿವ ವಿ.ಮುನಿಯಪ್ಪ ಸುಳಿವು ನೀಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯ ಸರ್ಕಾರದಿಂದ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ 5 ಕೆಜಿ ಅಕ್ಕಿಯ ಬದಲಾಗಿ ಡಿಬಿಟಿ ಮೂಲಕ ಹಣವನ್ನು ಪಾವತಿ ಮಾಡಲಾಗುತ್ತಿದೆ. ಇನ್ಮುಂದೆ ಇದರ ಬದಲಿಗೆ ಎಣ್ಣೆ, ಬೇಳೆಯನ್ನು ಒಳಗೊಂಡಂತೆ ಆಹಾರ ಕಿಟ್ ವಿತರಣೆ ಮಾಡೋದಕ್ಕೆ ಚಿಂತನೆ ನಡೆಸಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.
ರಾಜ್ಯ ಸರ್ಕಾರದಿಂದ ಚುನಾವಣೆ ಪೂರ್ವದಲ್ಲಿ ಗ್ಯಾರಂಟಿ ಯೋಜನೆಯಾಗಿ ಅನ್ನಭಾಗ್ಯ ಫಲಾನುಭವಿಗಳಿಗೆ 5 ಕೆಟಿ ಜೊತೆಗೆ ಮತ್ತೆ 5 ಕೆಜಿ ಸೇರಿಸಿ 10 ಕೆಜಿ ಅಕ್ಕಿ ನೀಡುವುದಾಗಿ ಘೋಷಣೆ ಮಾಡಲಾಗಿತ್ತು. ಆದರೇ ಕೇಂದ್ರ ಸರ್ಕಾರದಿಂದ ಅದಕ್ಕೆ ಅಗತ್ಯವಿದ್ದಂತ ಅಕ್ಕಿ ನೀಡಲು ಹಿಂದೇಟು ಹಾಕಿದ ಕಾರಣ, 5 ಕೆಜಿ ಅಕ್ಕಿ ಬದಲಿಗೆ ಅದೇ ಬೆಲೆಯ ಹಣವನ್ನು ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ವರ್ಗಾವಣೆ ಮಾಡಲಾಗುತ್ತಿದೆ. ಈ ಡಿಬಿಟಿ ಮೂಲಕ ಹಣ ವರ್ಗಾವಣೆ ನಿಲ್ಲಿಸಿ, ಈಗ ಎಣ್ಣೆ, ಬೇಳೆ ಸೇರಿದಂತೆ ವಿವಿಧ ಆಹಾರ ಧಾನ್ಯಗಳನ್ನು ಒಳಗೊಂಡಂತ ಆಹಾರ ಕಿಟ್ ವಿತರಣೆಗೆ ಮುಂದಾಗಿದೆ.
ಈ ಪ್ರಸಿದ್ಧ ‘ಡೊಳ್ಳು ಕಲಾವಿದ’ನಿಗೆ ಸಿಗುವುದೇ ‘ 2024ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ’.!?