ಬೆಂಗಳೂರು : ಬೆಳೆ ವಿಮೆಗಾಗಿ ಈ ವರ್ಷ ಸುಮಾರು 25 ಲಕ್ಷ ಜನ ರೈತರು ಹೆಸರು ನೋಂದಾಯಿಸಿಕೊಂಡಿದ್ದು ಮಾರ್ಚ್ ಅಂತ್ಯದ ವೇಳೆಗೆ 13 ಲಕ್ಷ ರೈತರಿಗೆ 1,400 ಕೋಟಿ ಮೊತ್ತವನ್ನು ಬೆಳೆ ವಿಮೆ ವಿತರಿಸಲಾಗುವುದು ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ತಿಳಿಸಿದರು.
ಇಟಲಿಯಲ್ಲಿ ಪ್ರದರ್ಶನಾಲಯದಿಂದ 1.3 ಮಿಲಿಯನ್ ಡಾಲರ್ ಮೌಲ್ಯದ 49 ‘ಚಿನ್ನದ ಶಿಲ್ಪಗಳು’ ಕಳವು
ನಾಗಮಂಗಲ ತಾಲೂಕಿನ ಸವಲತ್ತು ವಿತರಣಾ ಸಮಾವೇಶ ಹಾಗೂ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬೆಳೆ ವಿಮೆಗಾಗಿ ಪ್ರಸ್ತುತ 8 ಲಕ್ಷ ರೈತರಿಗೆ 600 ಕೋಟಿ ವಿಮೆ ಹಣ ಪಾವತಿಯಾಗಿದೆ. ಉಳಿದ 800 ಕೋಟಿ ರೂ. ಅನ್ನು ಮಾರ್ಚ್ ಅಂತ್ಯದೊಳಗೆ ಪಾವತಿಸಲಾಗುವುದು ಎಂದು ಅವರು ತಿಳಿಸಿದರು.
BREAKING : ಬೆಂಗಳೂರಿನ ಯೋಗೇಶ್ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಕೊಲೆಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ ತಂದೆ
ಮಂಡ್ಯದಲ್ಲಿ ಹೊಸ ಸಕ್ಕರೆ ಕಾರ್ಖಾನೆ
ಮಂಡ್ಯದಲ್ಲಿ ಹೊಸ ಸಕ್ಕರೆ ಕಾರ್ಖಾನೆಯನ್ನು ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ. 10 ತಿಂಗಳಲ್ಲಿ ವೈದ್ಯಕೀಯ ಕಾಲೇಜು, ಕೆಎಸ್‌ಆರ್‌ಟಿಸಿ ವಿಭಾಗ, ಆರ್‌ಟಿಒ ಕಚೇರಿ, ಪೊಲೀಸ್ ಠಾಣೆ, ಮಿನಿ ವಿಧಾನಸೌಧ ಸ್ಥಾಪನೆಗೆ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.ಇದೇ ಸಂದರ್ಭದಲ್ಲಿ ನಾಗಮಂಗಲದ ಮಹಿಳಾ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು. 60 ವರ್ಷ ಮೇಲ್ಪಟ್ಟವರಿಗೆ ಕನ್ನಡಕಗಳನ್ನು ವಿತರಿಸಲಾಯಿತು ಮತ್ತು ಆಶಾ ಕಾರ್ಯಕರ್ತೆಯರಿಗೆ ಆರೋಗ್ಯ ಕಿಟ್‌ಗಳನ್ನು ನೀಡಲಾಯಿತು.
ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ‘ತ್ರಿಶೂಲವನ್ನು’ ಕೈಯಲ್ಲಿ ಹಿಡಿದ ಪ್ರಧಾನಿ ಮೋದಿ | Watch Video