ಬೆಂಗಳೂರು : ರಾಜ್ಯದ ರೈತರಿಗೆ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಕಳೆದ ವರ್ಷದ ಮುಂಗಾರು ಹಂಗಾಮಿನ ಬೆಳೆ ನಷ್ಟಕ್ಕೆ ಬಾಕಿ ಉಳಿದ ಏಳು ಲಕ್ಷ ರೈತರಿಗೆ ಬರ ಪರಿಹಾರ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈ ಕುರಿತು ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದ್ದು, ಕೇಂದ್ರ ಸರ್ಕಾರ ರಾಜ್ಯಕ್ಕೆ ಬಿಡುಗಡೆ ಮಾಡಿದ್ದ 3,457 ಕೋಟಿ ರೂ. ಬರಪರಿಹಾರ ಹಣವನ್ನು 27.5ಲಕ್ಷ ರೈತರಿಗೆ ಹಂಚಿಕ ಬಳಿಕ ಉಳಿದಿರುವ 808ಕೋಟಿ ರೂ. ಹಣದಲ್ಲಿ ಹೆಚ್ಚುರಿಯಾಗಿ ಏಳು ಲಕ್ಷ ರೈತರಿಗೆ ಬರಪರಿಹಾರ ಹಂಚಿಕೆ ಮಾಡಲು ತೀರ್ಮಾನಿಸಲಾಗಿದೆ.
ಇನ್ನು ಎನ್ ಡಿಆರ್ ಎಫ್ ಅಡಿ ರಾಜ್ಯಕ್ಕೆ ಹೆಚ್ಚುರಿಯಾಗಿ ಹಂಚಿಕೆಯಾಗಿರುವ 232 ಕೋಟಿ ರೂ.ಗಳಿಗೆ ರಾಜ್ಯ ಸರ್ಕಾರ ಇನ್ನೂ 232 ಕೋಟಿ ರೂ. ಸೇರಿಸಿ 17ಲಕ್ಷ ರೈತ ಕುಟುಂಬಗಳಿಗೆ ಜೀವನೋಪಾಯ ಪರಿಹಾರವಾಗಿ 2,800 ರೂ.ನಿಂದ 3000 ರೂ. ವರೆಗೆ ಹೆಚ್ಚುವರಿ ಪರಿಹಾರ ನೀಡಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.