ಬೆಂಗಳೂರು : ರೈತರ ಜೀವನಾಡಿ ಮುಂಗಾರು ಮಳೆ ರಾಜ್ಯದ ಗಡಿ ಜಿಲ್ಲೆಗಳಿಗೆ ಪ್ರವೇಶಿಸಿದ್ದು,ನಿರೀಕ್ಷೆಗಿಂತ ಎರಡು ದಿನ ಮೊದಲೆ ರಾಜ್ಯಕ್ಕೆ ಮುಂಗಾರು ಮಳೆ ಕಾಲಿಟ್ಟಿದೆ.
ರಾಜ್ಯದ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಮೈಸೂರ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ನಿರೀಕ್ಷೆಗಿಂತ ಒಂದು ದಿನ ಮೊದಲೇ ಮೇ. 30ರಂದು ಮುಂಗಾರು ಕೇರಳವನ್ನು ಪ್ರವೇಶಿಸಿದ್ದು, ಮೇ. 31 ರಂದು ರಾಜ್ಯದ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.
ಇನ್ನು ರಾಜ್ಯದಲ್ಲಿ ಇಂದಿನಿಂದ ಮಳೆಯಾಗುವ ಸಾಧ್ಯತೆ ಇದ್ದು ಬೆಂಗಳೂರು ನಗರ, ಕೊಡಗು ಸೇರಿ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತ ಇದ್ದು, 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.