ಬೆಂಗಳೂರು : ಎಪಿಎಲ್‌, ಬಿಪಿಎಲ್‌ ರೇಷನ್‌ ಕಾರ್ಡ್‌ ಗೆ ಅರ್ಜಿ ಸಲ್ಲಿಸಿರುವವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಉಳಿಕೆ ಇರುವ ಕಾರ್ಡ್ ಗಳಲ್ಲಿ ಎಪಿಲ್ ,ಬಿಪಿಎಲ್ ಕಾರ್ಡ್ ಗಳನ್ನು ಗುರುತಿಸಿ ವಿಲೇವಾರಿ ಮಾಡಲು ಸಚಿವ ಕೆ.ಹೆಚ್.‌ ಮುನಿಯಪ್ಪ ಸೂಚನೆ ನೀಡಿದ್ದಾರೆ.

ಆಹಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಇಲಾಖೆಯಲ್ಲಿ ಪಡಿತರದಾರರಿಗೆ ಸರಬರಾಜು ಆಗುತ್ತಿರುವ ಅಕ್ಕಿ,ರಾಗಿ, ಜೋಳ, ಇವು ಗುಣಮಟ್ಟದಿಂರಬೇಕು ಎಂದು ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು. ಉಗ್ರಾಣಗಳಲ್ಲಿ ಶುಚಿತ್ವವನ್ನು ಕಾಪಾಡಬೇಕು ಮತ್ತು ವಿಲೇವಾರಿ ಸಂದರ್ಭದಲ್ಲಿ ಉತ್ತಮ ಗುಣಮಟ್ಟದ ಆಹಾರ ಧಾನ್ಯ ಗಳನ್ನು ಸರಬರಾಜು ಮಾಡಬೇಕು. ಉಳಿಕೆ ಇರುವ ಕಾರ್ಡ್ ಗಳಲ್ಲಿ ಎಪಿಲ್ ,ಬಿಪಿಎಲ್ ಕಾರ್ಡ್ ಗಳನ್ನು ಗುರುತಿಸಿ ವಿಲೇವಾರಿ ಮಾಡಲು ಸೂಚನೆ ನೀಡಿದರು.

ಡಿಬಿಟಿ ಹಣವು ಪ್ರತಿ ತಿಂಗಳ ಅಂತ್ಯದ ಒಳಗೆ ಫಲಾನುಭವಿಗಳ ಖಾತೆಗೆ ಸಂದಾಯವಾಗುವಂತೆ ಕ್ರಮ ತೆಗೆದುಕೊಳ್ಳುಬೇಕು. ಇಲಾಖೆಯಲ್ಲಿನ ಲೋಪದೋಷಗಳನ್ನು ಸರಿಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಸರ್ಕಾರದ ಕಾರ್ಯದರ್ಶಿ ರಮಣದೀಪ್ ಚೌದರಿ,ಆಯುಕತ್ತರಾದ ವಾಸಿ ರೆಡ್ಡಿ ವಿಜಯ ಜೋತ್ನ, ಆಹಾರ ನಿಗಮ ನಿರ್ದೇಶಕ ಚಂದ್ರಕಾಂತ್,ಕಾನೂನು ಮಾಪನ ಇಲಾಖೆ ನಿಯಂತ್ರಕರಾದ ಅನಿತಾ ಲಕ್ಷ್ಮೀ, ಆಹಾರ ಆಯೋಗದ ಕಾರ್ಯದರ್ಶಿ ಸುಜಾತ ಹೊಸಮನಿ, ಸಚಿವರ ಆಪ್ತ ಕಾರ್ಯದರ್ಶಿ ಡಾ.ಹೆಚ್ ನಟರಾಜ್, ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Share.
Exit mobile version