ಬೆಂಗಳೂರು: ನಿನ್ನೆ ಒಂದೇ ದಿನ ಚಿಕ್ಕಮಗಳೂರಲ್ಲಿ ನಾಲ್ವರಿಗೆ ಮಂಗನಕಾಯಿಲೆ ಸೋಂಕು ದೃಢಪಟ್ಟಿತ್ತು. ಹೀಗಾಗಿ ರಾಜ್ಯದಲ್ಲಿ ದಿನೇ ದಿನೇ ಮಂಗನ ಕಾಯಿಲೆ ಉಲ್ಬಣಗೊಳ್ಳುತ್ತಿದೆ ಎಂಬುದಾಗಿ ವರದಿಯಾಗಿತ್ತು. ಈ ಬೆನ್ನಲ್ಲೇ ರಾಜ್ಯದ ಎಪಿಎಲ್ ಕಾರ್ಡ್ ದಾರರಿಗೂ ಕೆಎಫ್ ಡಿ ರೋಗಕ್ಕೆ ಉಚಿತ ಚಿಕಿತ್ಸೆಯನ್ನು ನೀಡಲಾಗುವುದು ಅಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಮಲೆನಾಡು ಭಾಗಗಳಲ್ಲಿ ಹೆಚ್ಚು ಕಾಡುತ್ತಿರುವ ಕ್ಯಾಸನೂರು ಫಾರೆಸ್ಟ್ ಡಿಸೀಸ್ (ಕೆಎಫ್‌ಡಿ) ನಿಯಂತ್ರಣಕ್ಕೆ ನಮ್ಮ ಸರ್ಕಾರ ಸರ್ವ ಪ್ರಯತ್ನಗಳನ್ನು ನಡೆಸುತ್ತಿದೆ. ರೋಗದಿಂದ ಬಾಧಿತರಾದವರಿಗೆ ಚಿಕಿತ್ಸೆ ಉಚಿತವಾಗಿದ್ದು, ಈ ಯೋಜನೆಯನ್ನು ಎಪಿಎಲ್ ಕುಟುಂಬಗಳಿಗೂ ವಿಸ್ತರಿಸಲಾಗಿದೆ ಎಂದಿದ್ದಾರೆ.
ರಾಜ್ಯದಲ್ಲಿ ಕೆಎಫ್‌ಡಿ ಬಾಧಿತ ಎಪಿಎಲ್ ಕುಟುಂಬದ ಸದಸ್ಯರಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಅಡಿ ನೋಂದಾಯಿಸಿಕೊಂಡಿರುವ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ದೊರೆಯಲಿದೆ. ಇದರಿಂದ ನೂರಾರು ಕುಟುಂಬಗಳಿಗೆ ಸಹಾಯವಾಗಲಿದೆ ಎಂಬುದಾಗಿ ತಿಳಿಸಿದ್ದಾರೆ.
ಈಗಾಗಲೇ ಮಂಗನ ಕಾಯಿಲೆ ವಿರುದ್ಧ ನಿರ್ಣಾಯಕ ಹೆಜ್ಜೆಯಿಟ್ಟಿರುವ ನಮ್ಮ ಸರ್ಕಾರ ಐಸಿಎಂಆರ್ ಜೊತೆಗೆ ಚರ್ಚೆ ನಡೆಸಿದ್ದು, ಪ್ರಯೋಗಗಳ ಬಳಿಕ 2026ರ ವೇಳೆಗೆ ಕೆಎಫ್‌ಡಿ ಲಸಿಕೆ ಸಿಗಲಿದೆ. ರಾಜ್ಯದ ಜನರ ಆರೋಗ್ಯ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ.
ಮಲೆನಾಡು ಭಾಗಗಳಲ್ಲಿ ಹೆಚ್ಚು ಕಾಡುತ್ತಿರುವ ಕ್ಯಾಸನೂರು ಫಾರೆಸ್ಟ್ ಡಿಸೀಸ್ (ಕೆಎಫ್‌ಡಿ) ನಿಯಂತ್ರಣಕ್ಕೆ ನಮ್ಮ ಸರ್ಕಾರ ಸರ್ವ ಪ್ರಯತ್ನಗಳನ್ನು ನಡೆಸುತ್ತಿದೆ. ರೋಗದಿಂದ ಬಾಧಿತರಾದವರಿಗೆ ಚಿಕಿತ್ಸೆ ಉಚಿತವಾಗಿದ್ದು, ಈ ಯೋಜನೆಯನ್ನು ಎಪಿಎಲ್ ಕುಟುಂಬಗಳಿಗೂ ವಿಸ್ತರಿಸಲಾಗಿದೆ.
ರಾಜ್ಯದಲ್ಲಿ ಕೆಎಫ್‌ಡಿ ಬಾಧಿತ ಎಪಿಎಲ್ ಕುಟುಂಬದ ಸದಸ್ಯರಿಗೆ… pic.twitter.com/LzfWyISQCe
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) February 15, 2025
BREAKING: ರಾಜ್ಯ ಸರ್ಕಾರದಿಂದ ಚಲನಚಿತ್ರ ಅಕಾಡೆಮಿಗೆ ದೇಶಾದ್ರಿ ಹೊಸ್ಮನೆ ಸೇರಿ 7 ಮಂದಿ ಸದಸ್ಯರನ್ನು ನೇಮಿಸಿ ಆದೇಶ
ALERT : ರಾಜ್ಯದ ಕಾರ್ಮಿಕರೇ ಎಚ್ಚರ : ಮೋಸದ ಕರೆಗಳು ಬಂದ್ರೆ ತಕ್ಷಣ ಅಧಿಕಾರಿಗಳ ಗಮನಕ್ಕೆ ತನ್ನಿ.!