ಮಡಿಕೇರಿ : ಕುಶಲಕರ್ಮಿಗಳಿಗೆ ಸಾಲ ಸಹಾಯಧನ ಕಾರ್ಯಕ್ರಮವನ್ನು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖಾ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿದೆ. ಕುಶಲಕರ್ಮಿಗಳು ತಮ್ಮ ವೃತ್ತಿಯನ್ನು ಮುಂದುವರೆಸಿಕೊಂಡು ಹೋಗಲು ಬ್ಯಾಂಕ್ನಿಂದ ಸಾಲ ಪಡೆದಲ್ಲಿ, ಇಲಾಖಾ ವತಿಯಿಂದ ಶೇ.30 ರಷ್ಟು ಹಾಗೂ ಗರಿಷ್ಟ ರೂ.15 ಸಾವಿರ ವರೆಗೆ ಸಹಾಯಧನ ನೀಡಲಾಗುತ್ತದೆ.
ಕುಶಲ ಕರ್ಮಿಯು 18 ವರ್ಷ ವಯಸ್ಸಾಗಿರಬೇಕು ಹಾಗೂ ಇಲಾಖೆ ನಿಗಧಿಪಡಿಸಿದ ಯಾವುದಾದರೂ ಒಂದು ವೃತ್ತಿಯಲ್ಲಿ ತೊಡಗಿಸಿಕೊಂಡಿರಬೇಕು. ವಾಣಿಜ್ಯ ಬ್ಯಾಂಕ್, ಸಹಕಾರ ಬ್ಯಾಂಕ್, ಪ್ರಾದೇಶಿಕ ಬ್ಯಾಂs ವತಿಯಿಂದ ಸಾಲ (ಅವಧಿ ಹಾಗೂ ದುಡಿಮೆ ಬಂಡವಾಳ) ಪಡೆಯಬೇಕು. ಅಭ್ಯರ್ಥಿಯು ನಿಗಧಿ ಪಡಿಸಿದ ಅರ್ಜಿಯ ಜೊತೆಗೆ ಭಾವಚಿತ್ರ, ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕ ಪ್ರತಿ, ಕುಶಲಕರ್ಮಿ ವೃತ್ತಿಯ ಬಗ್ಗೆ ಧೃಡೀಕರಣ ಪತ್ರಗಳನ್ನು ಸಲ್ಲಿಸಬೇಕು. ಅರ್ಜಿಗಳನ್ನು ಜಿಲ್ಲಾ ಕೈಗಾರಿಕಾ ಕೇಂದ್ರ, ಮಡಿಕೇರಿ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ದಾಖಲಾತಿಗಳೊಂದಿಗೆ ಫೆಬ್ರವರಿ, 10 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕೈಗಾರಿಕಾ ಕೇಂದ್ರ, ಮಡಿಕೇರಿ ಕಚೇರಿಯನ್ನು (08272-228431 / 228746) ಸಂಪರ್ಕಿಸಬಹುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ನಿಮಗೂ ‘ಬೆಳಿಗ್ಗೆ ಅನ್ನ ತಿನ್ನುವ ಅಭ್ಯಾಸ’ವಿದೆಯೇ? ಇದು ‘ಆರೋಗ್ಯಕರವೇ ,ಅಲ್ಲವೇ’ ಈ ಮಾಹಿತಿ ತಿಳಿಯಿರಿ