ಶಿವಮೊಗ್ಗ : ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ದಿ ನಿಗಮದಿಂದ 2022-23 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರ ಸಾಲ ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆಗಳಲ್ಲಿ ಸಾಲ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
BIG NEWS: ವಿಜಯನಗರದಲ್ಲಿ ಭಾರೀ ಮಳೆಯಿಂದಾಗಿ ಹಳ್ಳದಲ್ಲಿ ಕೊಚ್ಚಿ ಹೋದ ರೈತ
ಅರ್ಜಿದಾರರು ಸಾಮಾನ್ಯ ವರ್ಗದಲ್ಲಿ ಆರ್ಯವೈಶ್ಯ ಸಮುದಾಯಕ್ಕೆ ಸೇರಿರಬೇಕು. ನಮೂನೆ-ಜಿ ರಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು. ರಾಜ್ಯದ ಖಾಯಂ ವಿಳಾಸವುಳ್ಳವರಾಗಿದ್ದು ಆಧಾರ್ಗೆ ಮೊಬೈಲ್ ಸಂಖ್ಯೆ ಜೋಡಣೆ ಮತ್ತು ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯಾಗಿರಬೇಕು.
ಸ್ವಯಂ ಉದ್ಯೋಗ ನೇರ ಸಾಲ ಯೋಜನೆಗೆ ದಿನಾಂಕ: 29-07-2022 ರಿಂದ 11-09-22 ರವರೆಗೆ ಕುಟುಂಬ ವಾರ್ಷಿಕ ವರಮಾನ ರೂ.3,00,000 ಮಿತಿಯೊಳಗಿನ 18 ರಿಂದ 45 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು.
ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಇಂಜಿನಿಯರಿಂಗ್, ವೈದ್ಯಕೀಯ, ದಂತ ವೈಯ್ಕೀಯ ಇತ್ಯಾದಿ ವೃತ್ತಿಪರ ಪದವಿ ಹಾಗೂ ಸ್ನಾತಕೋತ್ತರ ಪದವಿಗಳಲ್ಲಿ ಸಿಇಟಿ/ಎನ್ಇಇಟಿ ಮೂಲಕ ಆಯ್ಕೆಯಾಗಿ ಮತ್ತು ವೃತ್ತಿಪರ ಪಿಹೆಚ್ಡಿ ಕೋರ್ಸ್ನಲ್ಲಿ ವ್ಯಾಸಂಗ ಮಾಡುವವರು ದಿ: 08-08-2022 ರಿಂದ 11-09-2022 ರವರೆಗೆ ಅರ್ಜಿ ಸಲ್ಲಿಸಬಹುದು. ಕುಟುಂಬ ವಾರ್ಷಿಕ ವರಮಾನ ರೂ.6,00,000 ಮಿತಿಯೊಳಗಿನ 18 ರಿಂದ 35 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ವೆಬ್ಸೈಟ್ kacdc.karnataka.gov.in ಇಲ್ಲಿ ಸಲ್ಲಿಸಬೇಕು. ಮಹಿಳೆಯರಿಗೆ ಶೇ.33 ಹಾಗೂ ವಿಕಲಚೇತನರಿಗೆ ಶೇ.5 ರಷ್ಟು ಮೀಸಲಾತಿ ಇರುತ್ತದೆ.
Shocking: ʻಅವನೊಂದಿಗೆʼ ಸ್ಕೂಟರ್ನಲ್ಲಿ ತಿರುಗಾಡುತ್ತಿದ್ದಕ್ಕೆ ಪತಿಗೆ ನಡುರಸ್ತೆಯಲ್ಲೇ ಚಪ್ಪಲಿಯಿಂದ ಥಳಿಸಿದ ಪತ್ನಿ!
ಹೆಚ್ಚಿನ ಮಾಹಿತಿಯನ್ನು ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ದಿ ನಿಗಮ/ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ, ಭಾಗ್ಯ ನಿಲಯ, 1ನೇ ತಿರುವು, ಗಾಂಧಿನಗರ, ಶಿವಮೊಗ್ಗ ಇಲ್ಲಿ ಅಥವಾ ನಿಗಮದ ವೆಬ್ಸೈಟ್ ಹಾಗೂ ನಿಗಮದ ಸಹಾಯವಾಣಿ ಸಂಖ್ಯೆ : 94484 51111/08182-229634 ಇಲ್ಲಿ ಪಡೆಯಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.