ಬೆಂಗಳೂರು: ರಾಜ್ಯ ಸರ್ಕಾರದಿದಂ ಆರ್ಯ ವೈಶ್ಯ ಸಮುದಾಯದವರಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆಗೆ ಅರ್ಜಿ ಸಲ್ಲಿಸಿದ್ದವರಿಗೆ ಡಿಬಿಟಿ ಮೂಲಕ ವರ್ಗಾವಣೆಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಚಾಲನೆ ನೀಡಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ (ನಿಯಮಿತ) ವತಿಯಿಂದ ಪ್ರತಿ ವರ್ಷ ಹಲವಾರು ಉತ್ತಮ ಕೆಲಸಗಳನ್ನು ನಿರ್ವಹಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ ನೀಡುವುದರಿಂದ, ಯುವ ಉದ್ಯಮಿಗಳಿಗೆ ಸೂಕ್ತ ಸಮಯದಲ್ಲಿ ಸಾಲ ಸೌಲಭ್ಯ ನೀಡುವವರೆಗೆ ಹಲವು ಮಹತ್ವದ ಯೋಜನೆಗಳನ್ನು ನಿಗಮದ ಅಡಿಯಲ್ಲಿ ನಿರ್ವಹಿಸಲಾಗುತ್ತಿದೆ ಎಂದಿದ್ದಾರೆ.
ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ಬ್ಯಾಂಕ್‌ಗಳ ಸಹಯೋಗದೊಂದಿಗೆ ಆರ್ಯ ವೈಶ್ಯ ಆಹಾರ ವಾಹಿನಿ/ವಾಹಿನಿ ಯೋಜನೆ, ವಾಸವಿ ಜಲಶಕ್ತಿ ಯೋಜನೆ ನಿಗಮದ ಅಡಿಯಲ್ಲಿ ಸಮಾಜದ ಜನರಿಗೆ ಸಹಾಯ ಹಸ್ತ ಚಾಚುತ್ತಿರುವ ಪ್ರಮುಖ ಯೋಜನೆಯಾಗಿದ್ದು, ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಸಾಲ ಪಡೆದು ಸಕಾಲದಲ್ಲಿ ಸಾಲ ತೀರಿಸಿದಂತಹ ಫಲಾನುಭವಿಗಳಿಗೆ ಪುನಃ ಸಾಲ ನೀಡಿ ಸಣ್ಣ ಉದ್ಯಮಿಗಳಿಗೆ ಉತ್ತೇಜನ ನೀಡಿರುವ ಏಕೈಕ ನಿಗಮವೂ ಆರ್ಯ ವೈಶ್ಯ ನಿಗಮವೇ ಆಗಿದೆ ಎಂದು ತಿಳಿಸಲು ಇಚ್ಚಿಸುತ್ತೇವೆ.
ಪ್ರಸ್ತುತ ಸಾಲಿನಲ್ಲಿ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ “ಸ್ವಯಂ ಉದ್ಯೋಗ ನೇರ ಸಾಲ” ಯೋಜನೆ ಅಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಮಾನ್ಯ ಕಂದಾಯ ಸಚಿವರು ಹಾಗೂ ನಿಗಮದ ಅಧ್ಯಕ್ಷರಾದ ಶ್ರೀ ಕೃಷ್ಣ ಬೈರೇಗೌಡ ರವರು DBT (Direct Beneficiary Transfer)
ಮಾಡಿದರು.
ಹೊಸ ಉದ್ಯಮಿಗಳಿಗೆ ವಾರ್ಷಿಕ 4ರ ಬಡ್ಡಿ ದರದಲ್ಲಿ ಸಾಲ-ಸೌಲಭ್ಯ
ನಿಗಮದಿಂದ 1 ಲಕ್ಷದ ವರೆಗೆ ಸಾಲ-ಸಹಾಯಧನ, ಈ ಪೈಕಿ 20,000 ಗಳವರೆಗೆ ಸಹಾಯಧನ (29).
500 ಫಲಾನುಭವಿಗಳಿಗೆ 5 ಕೋಟಿ ರೂ. ಗಳಷ್ಟು ಹಣ ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆ
ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಸಾಲ ಪಡೆದು ಸಕಾಲದಲ್ಲಿ ಸಾಲ ತೀರಿಸಿದಂತಹ ಫಲಾನುಭವಿಗಳಿಗೆ ಪುನಃ ಸಾಲ ನೀಡಿ ಸಣ್ಣ ಉದ್ಯಮಿಗಳಿಗೆ ಉತ್ತೇಜನ ನೀಡಿರುವ ಏಕೈಕ ನಿಗಮ ಆರ್ಯ ವೈಶ್ಯ ನಿಗಮವಾಗಿದೆ.
ಮಾನ್ಯ ಮುಖ್ಯಮಂತ್ರಿಗಳಿಗೆ 2025-26ನೇ ಸಾಲಿಗೆ ನಿಗಮಕ್ಕೆ ರೂ.25.00 ಕೋಟಿ ಅನುದಾನದ ಬೇಡಿಕೆ.
ವಿಕಾಸಸೌಧದ ಕಛೇರಿಯಲ್ಲಿ ಆರ್ಯ ವೈಶ್ಯ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ದೀಪಶ್ರೀ.ಕೆ ಅವರೊಂದಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಆರ್ಯ ವೈಶ್ಯ ನಿಗಮದ ಸ್ವಯಂ-ಉದ್ಯೋಗ ನೇರ ಸಾಲ ಯೋಜನೆಯಡಿಯಲ್ಲಿ 500 ಫಲಾನುಭವಿಗಳಿಗೆ ರೂ.5.00ಕೋಟಿ ಸಾಲ-ಸಹಾಯಧನವನ್ನು (ಡಿಬಿಟಿ) ನೇರ ನಗದು ವರ್ಗಾವಣೆ ಮಾಡಿ ಯೋಜನೆಯನ್ನು ಯಶಸ್ವಿಗೊಳಿಸಿದರು.
ನಂತರ ಮಾತನಾಡಿದ ಸಚಿವರು, “ಹೊಸ ಉದ್ಯಮಿಗಳಿಗೆ ಹಾಗೂ ಬಡವರಿಗೆ ಸಹಾಯ ಹಸ್ತ ನೀಡುವ ನಿಟ್ಟಿನಲ್ಲಿ ಆರ್ಯ ವೈಶ್ಯ ನಿಗಮವು ಗಮನಾರ್ಹವಾದ ಕೆಲಸ ನಿರ್ವಹಿಸುತ್ತಿದೆ. ಒಂದು ಲಕ್ಷದ ವರೆಗೆ ವಾರ್ಷಿಕ 4ರ ಬಡ್ಡಿ ದರದಲ್ಲಿ ಸಾಲ-ಸಹಾಯಧನ ನೀಡಲಾಗುತ್ತಿದ್ದು, ಎಲ್ಲರೂ ಈ ಸೌಲಭ್ಯವನ್ನು ಫಲಾನುಭವಿಗಳು ವ್ಯಾಪಾರಕ್ಕಾಗಿ ಬಳಸಿಕೊಳ್ಳಬೇಕು ತಮ್ಮ ಉದ್ಯಮವನ್ನು ಬೆಳೆಸಿ ತಾವೂ ಸಮಾಜದಲ್ಲಿ ಉನ್ನತ ಮಟ್ಟಕ್ಕೆ ಏರಬೇಕು, ಆರ್ಥಿಕವಾಗಿ ಸ್ವಾವಲಂಭಿಗಳಾಗಬೇಕು” ಎಂದು ಹಾರೈಸಿದರು.
ಮಾರ್ಚ್.3ರಿಂದ ಅಧಿವೇಶನ: ಮಾರ್ಚ್.7ರಂದು ಆಯವ್ಯಯ ಮಂಡನೆ- ಸಿಎಂ ಸಿದ್ದರಾಮಯ್ಯ
ಬೆಂಗಳೂರಿನ ಎಲ್ಲಾ ಶುದ್ದ ಕುಡಿಯುವ ನೀರಿನ ಘಟಕಗಳ ಸಮೀಕ್ಷೆ ನಡೆಸಿ ವರದಿ ನೀಡಲು ತುಷಾರ್ ಗಿರಿ ನಾಥ್ ಸೂಚನೆ