ಬೆಂಗಳೂರು : ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ವತಿಯಿಂದ 2025-26ನೇ ಸಾಲಿನಲ್ಲಿ ಸ್ವಯಂ-ಉದ್ಯೋಗ ನೇರಸಾಲ ಯೋಜನೆ, ಬ್ಯಾಂಕ್ ಗಳ ಸಹಯೋಗದೊಂದಿಗೆ ಆರ್ಯ ವೈಶ್ಯ ಆಹಾರ ವಾಹಿನಿ ಯೋಜನೆ, ವಾಸವಿ ಜಲಶಕ್ತಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ CET ಹಾಗೂ NEET ಕೌನ್ಸಿಲಿಂಗ್ ಮುಗಿದ ನಂತರ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಭ್ಯರ್ಥಿಯು ಸಾಮಾನ್ಯ ವರ್ಗದಲ್ಲಿನ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದವರಾಗಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹೊಂದಿರಬೇಕು. ಆಸಕ್ತ ಅಭ್ಯರ್ಥಿಯು ವೈಬ್ ಸೈಟ್ https://kacdc.karnataka.gov.in ನಲ್ಲಿ ಅರ್ಜಿಗಳನ್ನು ಜುಲೈ 31,2025 ರೊಳಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಆರ್ಯ ವೈಶ್ಯt ಸಮುದಾಯ ಅಭಿವೃದ್ಧಿ ನಿಗಮ (ನಿ), ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಬೆಂಗಳೂರು ದಕ್ಷಿಣ ಜಿಲ್ಲೆ, ನಂ.123/1037.1ನೇ ಮಹಡಿ, 20ನೇ ಮುಖ್ಯ ರಸ್ತೆ, 5ನೇ ಬ್ಲಾಕ್, ವೆಸ್ಟ್ ಆಫ್ ಕಾರ್ಡ್ ರೋಡ್, ರಾಜಾಜಿನಗರ, ಬೆಂಗಳೂರು-560001 ಅಥವಾ ನಿಗಮದ ಸಹಾಯವಾಣಿ ಸಂಖ್ಯೆ : 080 23156006 ಅಥವಾ ಎಲ್ಲಾ ವಿವರಗಳನ್ನು kacdc.karnatak.gov.in ಇಲ್ಲಿ ತಿಳಿಯಬಹುದಾಗಿದೆ ಎಂದು ಬೆಂಗಳೂರು ದಕ್ಷಿಣ ಜಿಲ್ಲೆ, ಕರ್ನಾಟಕ ಆರ್ಯ ವೈಶ್ಯ. ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.