ಬೆಂಗಳೂರು: ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹದ ವಿಚಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗುಡ್ ನ್ಯೂಸ್ ನೀಡಿದ್ದಾರೆ. ಅದೇನು ಅಂತ ಮುಂದೆ ಓದಿ.
ಆಶಾ ಕಾರ್ಯಕರ್ತೆಯರಿಗೆ ಮಾಸಿಕ 10 ಸಾವಿರ ಪ್ರೋತ್ಸಾಹಧನ ದೊರೆಯುತ್ತಿದೆ. ರಾಜ್ಯ ಸರ್ಕಾರ 5 ಸಾವಿರ ಖಚಿತ ಪ್ರೋತ್ಸಾಹ ಧನ ನೀಡುತ್ತಿದೆ. ಕೇಂದ್ರ ಸರ್ಕಾರ ವೇತನ ಹೆಚ್ಚಳ ಮಾಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. 60:40 ರ ಅನುಪಾತದಲ್ಲಿ ರಾಜ್ಯಸರ್ಕಾರದ ಪಾಲುದಾರಿಕೆಯೊಂದಿಗೆ 1500 ಪ್ರೋತ್ಸಾಹಧನ ಹೆಚ್ವಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.
ಇದರಿಂದಾಗಿ ಆಶಾ ಕಾರ್ಯಕರ್ತೆಯರಿಗೆ ಕನಿಷ್ಠ ಖಚಿತ ಪ್ರೋತ್ಸಾಹಧನ 10 ಸಾವಿರ ದಾಟಲಿದ್ದು, ಕಾರ್ಯಕರ್ತೆಯರು ನಡೆಸುವ ಕಾರ್ಯಗಳಿಗೆ ನೀಡುವ ಇನ್ಸೆಂಟಿವ್ ಲೆಕ್ಕ ಹಾಕಿದರೆ 12 ರಿಂದ 13 ಸಾವಿರದ ವರೆಗೆ ಆಶಾ ಕಾರ್ಯಕರ್ತೆಯರಿಗೆ ವೇತನ ದೊರೆಯಲಿದೆ. ಈ ಬಗ್ಗೆ ಆಶಾ ಕಾರ್ಯಕರ್ತೆಯರಿಗೆ ತಿಳಿಹೇಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುವ ಅಗತ್ಯವಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಇದೇ ವೇಳೆ ಸ್ಪಷ್ಟಪಡಿಸಿದರು.