ಬೆಂಗಳೂರು: ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಸಿಹಿಸುದ್ದಿ ಎನ್ನುವಂತೆ ಏಪ್ರಿಲ್ ನಿಂದ ಪ್ರತಿ ತಿಂಗಳು 10,000 ಮುಂಗಡ ಪಾವತಿಗೆ ಸರ್ಕಾರ ನಿರ್ಧರಿಸಿದೆ.
ಇಂದು ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಬಿಜೆಪಿ ಶಾಸಕ ಹರೀಶ್ ಪುಂಜಾ ವೇದಿಕೆಯ ಮೇಲಿದ್ದ ಸಚಿವ ದಿನೇಶ್ ಗುಂಡೂರಾವ್ ಎದುರು ಎರಡು ಬೇಡಿಕೆಯನ್ನ ಮುಂದಿಟ್ಟರು. ನಾನೊಬ್ಬ ಆಶಾ ಕಾರ್ಯಕರ್ತೆಯರ ಕುಟುಂಬದಿಂದ ಬಂದವನಾಗಿದ್ದು, ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಿಸಬೇಕು. ಹಾಗೂ 70 ವರ್ಷ ಮೇಲ್ಪಟ್ಟವರಿಗೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಆಯುಷ್ಮಾನ್ ಭಾರತ್ ಯೋಜನೆಯನ್ನ ರಾಜ್ಯ ಸರ್ಕಾರ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿದರು.
ಈ ಕುರಿತು ತಮ್ಮ ಭಾಷಣದ ವೇಳೆ ಪ್ರತಿಕ್ರಿಯಿಸಿದ ಸಚಿವ ದಿನೇಶ್ ಗುಂಡೂರಾವ್ ಆಶಾ ಕಾರ್ಯಕರ್ತೆಯರಿಗೆ ಏಪ್ರಿಲ್ ತಿಂಗಳಿನಿಂದ 10 ಸಾವಿರ ಮುಂಗಡವಾಗಿ ನೀಡಲು ಈಗಾಗಲೇ ತೀರ್ಮಾನಿಸಲಾಗಿದೆ. ರಾಜ್ಯ ಸರ್ಕಾರದಿಂದ ಆಶಾ ಕಾರ್ಯಕರ್ತೆಯರಿಗೆ ಹೆಚ್ಚಿನ ಸಹಕಾರ ನೀಡಲಾಗಿದೆ. ಆದರೆ ಕೇಂದ್ರ ಸರ್ಕಾರ ಗೌರವಧನ ಹೆಚ್ಚಿಸುವ ಕಾರ್ಯ ಮಾಡಬೇಕು. ನೀವು, ನಿಮ್ಮ ಸಂಸದರು ಕೇಂದ್ರದಲ್ಲಿ ಪ್ರಭಾವ ಬಳಸಿ ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ವಿಸುವಂತೆ ಒತ್ತಾಯಿಸಿ ಎಂದು ಶಾಸಕ ಹರೀಶ್ ಪುಂಜಾ ಅವರಿಗೆ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದರು. ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ 5 ಸಾವಿರ ಗೌರವಧನ ನೀಡುತ್ತಿದೆ. ಕೇಂದ್ರ ಸರ್ಕಾರ 3 ಸಾವಿರ ನೀಡುತ್ತಿದ್ದು , ಅದರಲ್ಲೂ ಶೇ 40 ರಷ್ಟು ಪಾಲನ್ನ ರಾಜ್ಯ ಸರ್ಕಾರವೇ ಭರಿಸುತ್ತಿದೆ. ಪ್ರತಿ ಬಾರಿ ರಾಜ್ಯ ಸರ್ಕಾರ ಗೌರವಧನ ಹೆಚ್ಚಳ ಮಾಡಿಕೊಂಡು ಬರುತ್ತಿದೆ. ಆದರೆ ಕೇಂದ್ರ ಸರ್ಕಾರದಿಂದ ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಳವಾಗಿಯೇ ಇಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
70 ವರ್ಷ ಮೇಲ್ಪಟ್ಟವರಿಗೆ ಆಯುಷ್ಮಾನ್ ಭಾರತ್ ಯೋಜನೆಯಡಿ ವಯೋ ವಂದನ ಯೋಜನೆ ಅನುಷ್ಠಾನ ವಿಚಾರದಲ್ಲಿ ರಾಜ್ಯ ಸರ್ಕಾರ ಮುಕ್ತವಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಕೆಲವು ಸ್ಪಷ್ಟನೆ ಕೇಳಿ ನವೆಂಬರ್ ತಿಂಗಳಿನಲ್ಲಿಯೇ ಪತ್ರ ಬರೆಯಲಾಗಿದೆ. ಕೇಂದ್ರದಿಂದ ಇನ್ನೂ ಉತ್ತರ ದೊರೆತಿಲ್ಲ. ಆಯುಷ್ಮಾನ್ ಭಾರತ್ ಯೋಜನೆಯ ಪ್ರಕಾರ ಶೇ 60 ರಷ್ಟು ಕೇಂದ್ರ ಹಾಗೂ ಶೇ 40 ರಷ್ಟು ರಾಜ್ಯ ಸರ್ಕಾರ ಅನುದಾನ ನೀಡಬೇಕು. ಆದರೆ ಪ್ರಸ್ತುತ ಕರ್ನಾಟಕ ರಾಜ್ಯ ಸರ್ಕಾರ ಶೇ 75 ರಷ್ಟು ಅನುದಾನದ ಪಾಲನ್ನ ಭರಿಸುತ್ತಿದ್ದು, ಶೇ 25 ರಷ್ಟು ಅನುದಾನವನ್ನು ಮಾತ್ರ ಕೇಂದ್ರ ಸರ್ಕಾರ ನೀಡುತ್ತಿದೆ. ರಾಜ್ಯ ಸರ್ಕಾರ 1 ಕೋಟಿ 20 ಲಕ್ಷ ಕುಟುಂಬಗಳಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯನ್ನ ಜೋಡಿಸಿದೆ. ಆದರೆ ಕೇಂದ್ರ ಸರ್ಕಾರ ರಾಜ್ಯದ 65 ಲಕ್ಷ ಕುಟುಂಬಗಳನ್ನ ಮಾತ್ರ ಈ ಯೋಜನೆಗೆ ಪರಿಗಣಿಸಿದೆ. ರಾಜ್ಯ ಸರ್ಕಾರ 1 ಕೋಟಿ 20 ಲಕ್ಷ ಕುಟುಂಬಗಳನ್ನ ಯೋಜನೆಯ ವ್ಯಾಪ್ತಿಗೆ ತಂದಿರುವುದರಿಂದ ಬಹುತೇಕ 70 ವರ್ಷ ಮೇಲ್ಪಟ್ಟವರು ಯೋಜನೆಯ ಲಾಭ ಪಡೆಯಬಹುದಾಗಿದೆ.. ಈ ಎಲ್ಲ ವಿಚಾರಗಳ ಕುರಿತು ಕೇಂದ್ರ ಸರ್ಕಾರದಿಂದ ಸ್ಪಷ್ಟ ಉತ್ತರ ಸಿಕ್ಕ ಬಳಿಕ ವಯೋ ವಂದನ ಯೋಜನೆಯನ್ನ ರಾಜ್ಯ ಅನುಷ್ಠಾನಗೊಳಿಸಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು.
‘BPL, APL ಕಾರ್ಡ್’ದಾರರೇ ಗಮನಿಸಿ: ಜ.31 ‘e-KYC’ಗೆ ಲಾಸ್ಟ್ ಡೇಟ್, ಮಾಡಿಸದಿದ್ರೆ ಬರಲ್ಲ ರೇಷನ್
ರಾಜ್ಯದ ‘ದ್ವಿತೀಯ PUC ವಿದ್ಯಾರ್ಥಿ’ಗಳ ಗಮನಕ್ಕೆ: ‘ಅಂಕಪಟ್ಟಿ’ಯಲ್ಲಿನ ‘ತಪ್ಪು ತಿದ್ದುಪಡಿ’ಗೆ ಅವಕಾಶ