ಬೆಂಗಳೂರು: ಇದೇ ಮೊದಲ ಬಾರಿಗೆ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ( Government First Grade College ) 274 ಸಹ ಪ್ರಾಧ್ಯಾಪಕರುಗಳಿಗೆ ( Associate Professor ) ಪ್ರಾಧ್ಯಾಪಕರಾಗಿ ಬಡ್ತಿ ನೀಡಲು ರಾಜ್ಯ ಸರಕಾರವು ನಿರ್ಧರಿಸಿದೆ. ಈ ಸಂಬಂಧವಾಗಿ ದಿನಾಂಕ 14-12-2022ರಂದು ಆದೇಶ ಹೊರಡಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.
ಈ ಬಗ್ಗೆ ಗುರುವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸರಕಾರದ ಈ ನಿರ್ಧಾರದಿಂದ 274 ಸಹ ಪ್ರಾಧ್ಯಾಪಕರಿಗೆ ಮುಂಬಡ್ತಿ ಸಿಗಲಿದೆ. ಉನ್ನತ ಶಿಕ್ಷಣ ಇಲಾಖೆಯ ಭಾಗವಾಗಿರುವ ವೃತ್ತಿ ಸುಧಾರಣೆ ಆಯ್ಕೆ ಸಮಿತಿಯ ತೀರ್ಮಾನದ ಮೇಲೆ ಈ ಹೆಜ್ಜೆ ಇಡಲಾಗುತ್ತಿದೆ ಎಂದಿದ್ದಾರೆ.
ನಾಳೆ ಮಂಡ್ಯದಲ್ಲಿ ‘ಬಿಜೆಪಿ ಜನಸಂಕಲ್ಪ ಯಾತ್ರೆ’: ‘ಸಿಎಂ ಸ್ವಾಗತ’ಕ್ಕೆ ಸಜ್ಜಾದ ‘ಸಕ್ಕರೆನಾಡು’
ಯುಜಿಸಿ ಸಹ ಪ್ರಾಧ್ಯಾಪಕರಿಗೆ ಪ್ರೊಫೆಸರ್ಗಳಾಗಿ ಬಡ್ತಿ ನೀಡಬಹುದೆಂದು 2010ರಲ್ಲೇ ಹೇಳಿದೆ. ಆದರೆ ಕಳೆದ 12 ವರ್ಷಗಳಿಂದ ಈ ವಿಚಾರದಲ್ಲಿ ಯಾವ ಪ್ರಗತಿಯೂ ಆಗಿರಲಿಲ್ಲ. ಈಗ ಸರಕಾರವು 274 ಅಸೋಸಿಯೇಟ್ ಪ್ರೊಫೆಸರುಗಳಿಗೆ ಬಡ್ತಿ ನೀಡಲು ಅಧಿಸೂಚನೆ ಹೊರಡಿಸಿದೆ ಎಂದು ಅವರು ತಿಳಿಸಿದ್ದಾರೆ.
BIGG NEWS : ಜೆಇಇ (ಮುಖ್ಯ) 2023 ; ಜನವರಿ ‘ಸೆಷನ್’ಗೆ ನೋಂದಣಿ ಆರಂಭ ; ಈ ರೀತಿ ಅರ್ಜಿ ಸಲ್ಲಿಸಿ |JEE (Main) 2023