ಬೆಂಗಳೂರು : 2025-26ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆ ಅಡಿಯಲ್ಲಿ ಆಂತರರಾಷ್ಟ್ರೀಯ ಉಪಯೋಜನೆ ಅಡಿಯಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪಂಗಡಿದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 2025-26ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ 2024ನೇ ಕ್ಯಾಲೆಂಡರ್ ವರ್ಷದಲ್ಲಿ (01.01.2024 ರಿಂದ 31.12.2024) ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿಗಳನ್ನು ಆನ್ಲೈನ್ ಮೂಲಕ ಆಹ್ವಾನಿಸಲಾಗಿದೆ.
ಅದರಂತೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಕ್ರೀಡಾಪಟುಗಳು ಅರ್ಜಿಗಳನ್ನು ಅಧಿಕೃತ ಜಾಲತಾಣ: https://sevasindhu.karnataka.gov.in . ಅರ್ಜಿಗಳನ್ನು ಸಲ್ಲಿಸಲು ದಿನಾಂಕ: 31-01-2026 ರಂದು ಕಡೆಯ ದಿನಾಂಕವಾಗಿರುತ್ತದೆ. ಈ ಬಗ್ಗೆ ತಮ್ಮ ಜಿಲ್ಲೆಯಲ್ಲಿ ಹೆಚ್ಚು ಪ್ರಚಾರದಲ್ಲಿರುವ ಸ್ಥಳೀಯ ದಿನ ಪತ್ರಿಕೆಗಳಲ್ಲಿ ವ್ಯಾಪಕ ಪ್ರಚಾರ ನೀಡಿ ಪತ್ರಿಕಾ ವರದಿ ಪ್ರತಿಯನ್ನು ಕೇಂದ್ರ ಕಛೇರಿಗೆ ಸಲ್ಲಿಸಲು ಸೂಚಿಸಿದೆ.
ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ ಅಂತರರಾಷ್ಟ್ರೀಯ /ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡೆಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡುವ ಕಾರ್ಯಕ್ರಮದ ಮಾರ್ಗಸೂಚಿಗಳು
1. ಕ್ರೀಡಾಪಟುಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಲಗತ್ತಿಸಿರಬೇಕು.
2. ಪ್ರೋತ್ಸಾಹಧನವನ್ನು ಕರ್ನಾಟಕದ ಕ್ರೀಡಾಪಟುಗಳಿಗೆ ಮಾತ್ರ ನೀಡುವುದು.
3. ಅಂತರಾಷ್ಟ್ರೀಯ/ರಾಷ್ಟ್ರೀಯ/ರಾಜ್ಯ ಮಟ್ಟದ ತಂಡಗಳನ್ನು ಪ್ರತಿನಿಧಿಸಿ ಸರ್ಕಾರದಿಂದ ಅಂಗೀಕೃತವಾದಂತಹ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ವಿಜೇತರಾಗಿರಬೇಕು.
4. ಕ್ರೀಡಾಪಟುಗಳು ಕರ್ನಾಟಕ ಮೂಲದವರಾಗಿದ್ದು, ಬೇರೆ ರಾಜ್ಯ ಅಥವಾ ಕ್ರೀಡಾತಂಡವನ್ನು (Services, Airlines, Railways) ಪ್ರತಿನಿಧಿಸುವ ಕ್ರೀಡಾಪಟುಗಳು ಈ ಪುರಸ್ಕಾರಕ್ಕೆ ಅರ್ಹರಾಗಿರುವುದಿಲ್ಲ.
5. ಸರ್ಕಾರಿ/ಅರೆ ಸರ್ಕಾರಿ ಇಲಾಖೆಗಳಲ್ಲಿ ನೇಮಕಗೊಂಡು ಸೇವೆ ಸಲ್ಲಿಸುತ್ತಿರುವವರು ಅಂತರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಹಾಗೂ ಪದಕ ಪಡೆದವರು ಮಾತ್ರ ಅರ್ಜಿಯನ್ನು ಸಲ್ಲಿಸಲು ಅರ್ಹರಿರುತ್ತಾರೆ.
6. ಕ್ರೀಡಾಪಟುಗಳು ಆಧಾರ್ ಕಾರ್ಡ್, ಪಡಿತರ ಚೀಟಿ (Ration Card), ಹಾಗೂ ಆರ್.ಡಿ. ಸಂಖ್ಯೆಯನ್ನು ಒಳಗೊಂಡ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಸಲ್ಲಿಸತಕ್ಕದ್ದು.
7. ಒಲಂಪಿಕ್/ಏಷನ್/ಕಾಮನ್ ವೆಲ್ತ್ ಕ್ರೀಡೆಗಳಲ್ಲಿ ಅಂತರಾಷ್ಟ್ರೀಯ ಸಂಸ್ಥೆ ಮತ್ತು ಯುವ ವ್ಯವಹಾರ ಮತ್ತು ಕ್ರೀಡಾ ಮಂತ್ರಾಲಯದಿಂದ ಮಾನತೆ ಪಡೆದ ಕ್ರೀಡಾ ಸಂಸ್ಥೆಗಳು ನಡೆಸುವ ಅಧಿಕೃತ ಚಾಂಪಿಯನ್ ಶಿಪ್ ಗಳಿಗೆ ಮಾತ್ರ ಪ್ರೋತ್ಸಾಹಧನ ನೀಡಲಾಗುವುದು (ಮಾನತೆ ಪಡೆಯದೇ ಇರುವ ಯಾವುದೇ ಫೆಡರೇಷನ್ ನಡೆಸುವ ಕ್ರೀಡೆಗಳಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಪ್ರೋತ್ಸಾಹಧನಕ್ಕೆ ಅರ್ಹರಾಗಿರುವುದಿಲ್ಲ).
8. 6ನೇ ತರಗತಿಯಿಂದ ವ್ಯಾಸಂಗ ಮಾಡುತ್ತಿರುವ ಕ್ರೀಡಾಪಟುಗಳು ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
9. ಅಂತರರಾಷ್ಟ್ರೀಯ ರಾಷ್ಟ್ರೀಯ ಮತ್ತು ರಾಜ್ಯ ಹಿರಿಯರ (ವಯೋಮಿತಿ ಗುಂಪು) ಕ್ರೀಡಾಕೂಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳು ಪ್ರೋತ್ಸಾಹಧನಕ್ಕೆ ಅರ್ಹರಾಗಿರುವುದಿಲ್ಲ.
10. ಬ್ಯಾಂಕ್ ಖಾತೆ ಕಡ್ಡಾಯವಾಗಿ ಕ್ರೀಡಾಪಟುವಿನ ಹೆಸರಿನಲ್ಲಿರಬೇಕು. ಬ್ಯಾಂಕ್ ಪಾಸ್ ಪುಸ್ತಕದ ಮುಖಪುಟವನ್ನು ಲಗತ್ತಿಸಬೇಕು (ಹೆಸರು, ಖಾತೆ ಸಂಖ್ಯೆ, IFSC ಸಂಖ್ಯೆ ಇರುವ ಸಂಪೂರ್ಣ ವಿವರಗಳನ್ನೊಳಗೊಂಡ ಪ್ರತಿ).
11. ಹಿಂದಿನ ಕ್ಯಾಲೆಂಡರ್ ವರ್ಷದ ಕ್ರೀಡಾ ಸಾಧನೆಯನ್ನು ಮಾತ್ರ ಪರಿಗಣಿಸಿ ಪ್ರಸಕ್ತ ಸಾಲಿನ ಪ್ರೋತ್ಸಾಹಧನವನ್ನು ಪಾವತಿಸಲಾಗುವುದು.
12. ಒಂದು ವರ್ಷದಲ್ಲಿ ಒಂದಕ್ಕಿಂತ ಹೆಚ್ಚಿನ ಯಾವುದೇ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ವಿಜೇತರಾದರೂ ಕೂಡ ಒಂದು ಅತ್ಯುನ್ನತ ಸಾಧನೆ/ಪದಕವನ್ನು ಮಾತ್ರ ಪರಿಗಣಿಸಿ ಪ್ರೋತ್ಸಾಹ ಧನವನ್ನು ನೀಡಲಾಗುವುದು.









