ಬೆಳಗಾವಿ : ಬಗರ್ ಹುಕುಂ ಸಾಗುವಳಿ ಸಕ್ರಮಗೊಳಿಸಲು ನಮೂನೆ 50, 53, 57 ರಲ್ಲಿ ಸಲ್ಲಿಕೆಯಾದ ಅರ್ಜಿಗಳನ್ನು ನಿಯಮಾನುಸಾರ ವಿಲೇವಾರಿ ಮಾಡಲಾಗುತ್ತಿದೆ ಎಂದು ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ.
ಬೆಳಗಾವಿಯ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವರು, ನಮೂನೆ 57ರ ಅಡಿ ಸಲ್ಲಿಕೆಯಾದ ಒಟ್ಟು 2.23 ಲಕ್ಷಕ್ಕೂ ಅಧಿಕ ಅರ್ಜಿಗಳನ್ನು ರಾಜ್ಯಾದ್ಯಂತ ತಿರಸ್ಕೃತಗೊಳಿಸಲಾಗಿದೆ. ಒಂದು ವೇಳೆ ರೈತರು ಇದರಿಂದ ಬಾಧಿತರಾಗಿದ್ದರೆ, ಉಪವಿಭಾಗಾಧಿಕಾರಿಗೆ ಮೇಲ್ಮನವಿ ಸಲ್ಲಿಸಬಹುದು. ಪ್ರಕರಣಗಳನ್ನು ಮರು ಪರಿಶೀಲಿಸುವಂತೆ ಉಪವಿಭಾಗಾಧಿಕಾರಿಗಳು ಸೂಚಿಸಿದರೆ, ಬಗರ್ ಹುಕುಂ ಸಮಿತಿಗಳಲ್ಲಿ ತಿರಸ್ಕೃತಗೊಂಡ ನಮೂನೆ 57ರ ಅರ್ಜಿಗಳನ್ನು ಪುನರ್ ಪರಿಶೀಲನೆಗೆ ಪರಿಗಣಿಸಲಾಗುವುದು.
ಬಗರ್ ಹುಕುಂ ಸಾಗುವಳಿ ಸಕ್ರಮಗೊಳಿಸಲು ನಮೂನೆ 50, 53, 57 ರಲ್ಲಿ ಸಲ್ಲಿಕೆಯಾದ ಅರ್ಜಿಗಳನ್ನು ನಿಯಮಾನುಸಾರ ವಿಲೇವಾರಿ ಮಾಡಲಾಗುತ್ತಿದೆ. ನಮೂನೆ 57ರ ಅಡಿ ಸಲ್ಲಿಕೆಯಾದ ಒಟ್ಟು 2.23 ಲಕ್ಷಕ್ಕೂ ಅಧಿಕ ಅರ್ಜಿಗಳನ್ನು ರಾಜ್ಯಾದ್ಯಂತ ತಿರಸ್ಕೃತಗೊಳಿಸಲಾಗಿದೆ. ಒಂದು ವೇಳೆ ರೈತರು ಇದರಿಂದ ಬಾಧಿತರಾಗಿದ್ದರೆ, ಉಪವಿಭಾಗಾಧಿಕಾರಿಗೆ ಮೇಲ್ಮನವಿ… pic.twitter.com/ArWRH7ZwFf
— DIPR Karnataka (@KarnatakaVarthe) December 10, 2024
ಬಗರ್ ಹುಕುಂ ಅಡಿ ಅರ್ಜಿ ಸಲ್ಲಿಸಲು ಕನಿಷ್ಟ 18 ವರ್ಷವಾಗಿರಬೇಕು. ಆದರೆ, 7000 ಅರ್ಜಿದಾರರಿಗೆ 18 ವರ್ಷ ಆಗೇ ಇಲ್ಲ. 3273 ಜನ ಅರ್ಜಿದಾರರು ಕೃಷಿಕರೇ ಅಲ್ಲ. ಸ್ಮಶಾನ, ರಸ್ತೆ, ಕೆರೆ, ಗುಂಡುತೋಪು ಮಂಜೂರಾತಿ ಕೋರಿ 27,452 ಜನ ಅರ್ಜಿ ಸಲ್ಲಿಸಿದ್ದಾರೆ. ನಗರ ವ್ಯಾಪ್ತಿಯಲ್ಲಿ 33,000 ಜನ ಅರ್ಜಿ ಸಲ್ಲಿಸಿದ್ದರೆ, 12,283 ಅರ್ಜಿಗಳು ಸಲ್ಲಿಕೆಯಾಗಿವೆ. ಇನ್ನೂ ಕುಟುಂಬದಲ್ಲಿ 5 ಜಮೀನು ಇದ್ದರೂ ಸಹ ಸಾವಿರಾರು ಜನ ಅರ್ಜಿ ಸಲ್ಲಿಸಿದ್ದಾರೆ.
ಇಂತಹ ಅರ್ಜಿಯನ್ನಷ್ಟೇ ತಿರಸ್ಕೃತಗೊಳಿಸಲಾಗಿದೆಯೇ ವಿನಃ ಕಾನೂನು ರೀತ್ಯಾ ಅರ್ಹ ಅರ್ಜಿಗಳನ್ನು ತಿರಸ್ಕೃತಗೊಳಿಸಲಾಗಿಲ್ಲ. ಒಂದು ವೇಳೆ ಕಣ್ತಪ್ಪಿನಿಂದ ಹಾಗೆ ಆದಲ್ಲಿ ಉಪ ವಿಭಾಗಾಧಿಕಾರಿಗಳ ಕೋರ್ಟ್‌ನಲ್ಲಿ ದಾವೆ ಹೂಡಬಹುದು. ಅಥವಾ ನನ್ನ ಗಮನಕ್ಕೆ ತಂದರೆ ಕೂಡಲೇ ಕ್ರಮವಹಿಸಲಾಗುವುದು” ಎಂದು ಅವರು ಆಶ್ವಾಸನೆ ನೀಡಿದರು.
ಇಂದು ಎಂದಿನಂತೆ ‘ನಮ್ಮ ಮೆಟ್ರೋ ರೈಲು’ ಸಂಚಾರ: ಕೇವಲ ಕಚೇರಿಗೆ ಮಾತ್ರವೇ ರಜೆ- BMRCL ಸ್ಪಷ್ಟನೆ | Namma Metro Train
Good News: ಇನ್ಮುಂದೆ ‘CUET UG’ನಲ್ಲಿ ಯಾವ ವಿಷಯ ಬೇಕಾದ್ರು ಆಯ್ಕೆಗೆ ಅವಕಾಶ: ‘UGC’ ಮಹತ್ವದ ಘೋಷಣೆ