Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಂಬೇಡ್ಕರ್ ಜಯಂತಿ ಪ್ರತಿ ಕೇರಿಗಳಲ್ಲಿಯೂ ಆಚರಣೆಯಾಗಲಿ: ಸಾಗರ ನಗರಸಭೆ ಪೌರಾಯುಕ್ತ ಎಚ್.ಕೆ. ನಾಗಪ್ಪ

14/04/2026 10:15 PM

ಸಮ ಸಮಾಜದ ನಿರ್ಮಾಣಕ್ಕೆ ಅಂಬೇಡ್ಕರ್, ಬಾಬೂಜಿ ಕೊಡುಗೆ ಅನನ್ಯ: ಸಾಗರದಲ್ಲಿ ಜಯಂತ್ ಗುಣಗಾನ

14/04/2026 9:39 PM

ಪ್ರಧಾನಿ ಮೋದಿ-ಅಧ್ಯಕ್ಷ ಟ್ರಂಪ್ ದೂರವಾಣಿ ಸಂಭಾಷಣೆ: ಪಶ್ಚಿಮ ಏಷ್ಯಾ ಶಾಂತಿ ಮತ್ತು ದ್ವಿಪಕ್ಷೀಯ ಬಾಂಧವ್ಯ ವೃದ್ಧಿಗೆ ಒತ್ತು

14/04/2026 9:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ `ಬಗರ್ ಹುಕುಂ ಸಾಗುವಳಿ’ದಾರರಿಗೆ ಭರ್ಜರಿ ಗುಡ್ ನ್ಯೂಸ್ : 1.26 ಲಕ್ಷ ರೈತರ ‘ಸಾಗುವಳಿ ಚೀಟಿ’ಗೆ ಅರ್ಹ.!
KARNATAKA

ರಾಜ್ಯ ಸರ್ಕಾರದಿಂದ `ಬಗರ್ ಹುಕುಂ ಸಾಗುವಳಿ’ದಾರರಿಗೆ ಭರ್ಜರಿ ಗುಡ್ ನ್ಯೂಸ್ : 1.26 ಲಕ್ಷ ರೈತರ ‘ಸಾಗುವಳಿ ಚೀಟಿ’ಗೆ ಅರ್ಹ.!

By kannadanewsnow5702/12/2024 10:33 AM

ಬೆಂಗಳೂರು: ರಾಜ್ಯ ಸರ್ಕಾರದಿಂದ ಬಗರ್ ಹುಕುಂ ಸಾಗುವಳಿದಾರರಿಗೆ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದೆ. ಬರೋಬ್ಬರಿ 1.26 ಲಕ್ಷ ಅರ್ಜಿಗಳು ಸಾಗುವಳಿ ಚೀಟಿಗೆ ಅರ್ಹವಾಗಿವೆ. ಮೊದಲ ಹಂತದಲ್ಲಿ ಡಿಸೆಂಬರ್.15ರೊಳಗೆ 5,000 ರೈತರಿಗೆ ಸಾಗುವಳಿ ಚೀಟಿ ವಿತರಣೆ ಮಾಡುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಬಗರ್ ಹುಕುಂ ಅಡಿಯಲ್ಲಿ ಅರ್ಜಿ ಸಲ್ಲಿಸಿರುವ ಅರ್ಹ ಫಲಾನುಭವಿಗಳ ಪೈಕಿ ಕನಿಷ್ಟ 5,000 ಜನರ ಅರ್ಜಿಗಳನ್ನಾದರೂ “ಬಗರ್ ಹುಕುಂ” ಕಮಿಟಿಯ ಎದುರು ಮಂಡಿಸಿ ಡಿ.15ರ ಒಳಗೆ ಸಾಗುವಳಿ ಚೀಟಿ ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಭರವಸೆ ನೀಡಿದರು.

ರಾಜ್ಯಾದ್ಯಂತ ಲಕ್ಷಾಂತರ ಜನ ಬಗರ್ ಹುಕುಂ ಅಡಿಯಲ್ಲಿ ಜಮೀನು ಮಂಜೂರಾತಿಗೆ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಈ ಪೈಕಿ 1,26,000 ಅರ್ಜಿಗಳನ್ನು ಮಾತ್ರ ಅರ್ಹ ಎಂದು ಪರಿಗಣಿಸಲಾಗಿದೆ. ಕೆಲ ಜಿಲ್ಲೆಗಳಲ್ಲಿ ಅರ್ಹ ಫಲಾನುಭವಿಗಳ ಅರ್ಜಿಗಳನ್ನು ಈಗಾಗಲೇ ಬಗರ್ ಹುಕುಂ ಕಮಿಟಿ ಎದುರು ಇಡಲಾಗಿದೆ. ಆದರೆ, ಆ ಸಂಖ್ಯೆ ಸಮಾಧಾನಕರವಾಗಿಲ್ಲ. ಹೀಗಾಗಿ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರಿಗೆ ಗುರಿ ನಿಗದಿಪಡಿಸಲಾಗಿದೆ. ಡಿ.15ರ ಒಳಗೆ ರಾಜ್ಯಾದ್ಯಂತ ಕನಿಷ್ಟ 5,000 ಅರ್ಹ ಅರ್ಜಿಗಳನ್ನು ಕಮಿಟಿ ಎದುರು ಮಂಡಿಸಲು ಸೂಚಿಸಲಾಗಿದೆ.

ಮೊದಲು ಗ್ರಾಮ ಆಡಳಿತ ಅಧಿಕಾರಿ ಅರ್ಜಿದಾರರ ಸ್ಥಳ ಪರಿಶೀಲಿಸಬೇಕು. ತದನಂತರ ಕಂದಾಯ ನಿರೀಕ್ಷಕರು ಹಾಗೂ ತಹಶೀಲ್ದಾರ್ ವರದಿ ಸಲ್ಲಿಸಬೇಕು. ಈ ಎಲ್ಲಾ ಪ್ರಕ್ರಿಯೆಗಳ ನಂತರವೇ ಅರ್ಹ ಅರ್ಜಿಗಳನ್ನು ಬಗರ್ ಹುಕುಂ ಕಮಿಟಿ ಎದುರು ಮಂಡಿಸಲು ಸಾಧ್ಯ. ಈ ಕೆಲಸಗಳು ಸಮಯಾವಕಾಶ ಬೇಡುವಂತದ್ದಾಗಿದ್ದು, ಅಧಿಕಾರಿಗಳಿಗೆ ಮೊದಲ ಹಂತದಲ್ಲಿ 5,000 ಅರ್ಜಿಗಳ ಗುರಿ ನೀಡಿದ್ದು, ಜನವರಿ ವೇಳೆಗೆ ಈ ಗುರಿ 15 ರಿಂದ 20 ಸಾವಿರಕ್ಕೆ ಏರಿಕೆಯಾಗಲಿದೆ” ಎಂದರು

ಬಗರ್ ಹುಕುಂ ಯೋಜನೆಯ ಅಡಿಯಲ್ಲಿ ರೈತರಿಗೆ ಮಂಜೂರಾಗುವ ಜಮೀನಿಗೆ ಸಂಬಂಧಿಸಿದಂತೆ ಮುಂದಿನ ದಿನಗಳಲ್ಲಿ ಕಿಂಚಿತ್ತೂ ತಕರಾರು ಬರಬಾರದು, ಕಡತ ಕಳೆದು ಹೋಯ್ತು ಎಂದು ರೈತರು ಮತ್ತೆ ಸರ್ಕಾರಿ ಕಚೇರಿಗೆ ಅಲೆಯಬಾರದು ಎಂಬ ವಿಚಾರದಲ್ಲಿ ಸರ್ಕಾರ ಬದ್ದವಾಗಿದೆ. ಹೀಗಾಗಿ ಅರ್ಹ ಫಲಾನುಭವಿಗಳ ಅರ್ಜಿಗಳನ್ನು ಬಗರ್ ಹುಕುಂ ಕಮಿಟಿ ಎದುರು ಮಂಡಿಸಿ ಮಂಜೂರಾದ ಜಮೀನಿಗೆ ಪೋಡಿಯೂ ಮಾಡಿಸಿ, ಪಹಣಿಯಲ್ಲಿ ಹೆಸರನ್ನು ನಮೂದಿಸಿ ಸ್ವತಃ ತಹಶೀಲ್ದಾರರು ನೋಂದಣಿ ಕಚೇರಿಯಲ್ಲಿ ಜಮೀನಿನ ನೋಂದಣಿಯೂ ಮಾಡಿ ರೈತರಿಗೆ ಡಿಜಿಟಲ್ ಸಾಗುವಳಿ ಚೀಟಿ ನೀಡಲಾಗುವುದು” ಎಂದು ಅವರು ಮಾಹಿತಿ ನೀಡಿದರು.

ಬಗರ್ ಹುಕುಂ ಯೋಜನೆಯ ಅಡಿ ಜಮೀನು ಮಂಜೂರಾತಿಗೆ ಕೋರಿ ಅರ್ಜಿ ಸಲ್ಲಿಸಿದವರ ಪೈಕಿ 5 ರಿಂದ 6 ಲಕ್ಷ ಅರ್ಜಿಗಳನ್ನು ಅನರ್ಹ ಎಂದು ಪರಿಗಣಿಸಲಾಗಿದೆ. ಕಾನೂನು ರೀತ್ಯಾ ಅರ್ಜಿ ಸಲ್ಲಿಸಬೇಕಾದ ದಿನಕ್ಕೆ 18 ವರ್ಷ ತುಂಬದ 26,051 ಜನ ಅರ್ಜಿ ಸಲ್ಲಿಸಿದ್ದಾರೆ. ಇದಲ್ಲದೆ, ಈಗಾಗಲೇ 4.38 ಎಕರೆ ಜಮೀನು ಹೊಂದಿರುವ 26,922 ಅರ್ಜಿಗಳು, ಕೆರೆ ರಸ್ತೆ ಸೇರಿ ಬಿ-ಖರಾಬು ಪ್ರದೇಶಗಳ ಮಂಜೂರಾತಿಗೆ ಕೋರಿ 40,799 ಅರ್ಜಿಗಳು, ಅರಣ್ಯ ಪ್ರದೇಶಗಳ ಮಂಜೂರಾತಿಗೆ 1,68,119 ಅರ್ಜಿಗಳು, ನಗರ ಪರಿಮಿತಿಯೊಳಗೆ ಮಂಜೂರಾತಿ ಕೋರಿ 68,561 ಅರ್ಜಿಗಳು, ತಾಲೂಕಿನಲ್ಲೇ ವಾಸ ಇಲ್ಲದ 8,665 ಅರ್ಜಿಗಳು ಹಾಗೂ ಕೃಷಿಕರಲ್ಲ 1,00,400 ಜನ ಅರ್ಜಿ ಸಲ್ಲಿಸಿದ್ದಾರೆ. ಈ ಎಲ್ಲಾ ಅರ್ಜಿಗಳನ್ನೂ ಅನರ್ಹ ಎಂದು ಪರಿಗಣಿಸಲಾಗಿದೆ” ಎಂದು ಅವರು ಮಾಹಿತಿ ನೀಡಿದರು.

“ಅನರ್ಹ ಅರ್ಜಿಗಳನ್ನು ಅಧಿಕಾರಿಗಳ ಮಟ್ಟದಲ್ಲೇ ಪರಿಶೀಲನೆ ವೇಳೆ ವಿಲೇವಾರಿ ಮಾಡಬೇಕು. ಇಂತಹ ಅರ್ಜಿಗಳನ್ನು ಬಗರ್ ಹುಕುಂ ಕಮಿಟಿ ಎದುರು ಮಂಡಿಸಿ ಸಮಯವನ್ನು ವ್ಯರ್ಥ ಮಾಡುವ ಅಗತ್ಯವಿಲ್ಲ ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಆದರೆ, ಈ ಪರಿಶೀಲನೆಯೇ ಅಂತಿಮವಲ್ಲ. ಒಂದು ವೇಳೆ ಅಧಿಕಾರಿಗಳ ತಪ್ಪಿನಿಂದ ಅರ್ಹ ಅರ್ಜಿಯನ್ನು ವಿಸರ್ಜಿಸಲಾಗಿದ್ದರೆ ಅಂತಹ ಅರ್ಜಿಗಳನ್ನು ಮತ್ತೆ ಮರು ಪರಿಶೀಲನೆ ಒಳಪಡಿಸಲಾಗುವುದು” ಎಂದೂ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

Good news for 'Bagar Hukum cultivators' from state government: 1.26 lakh farmers eligible for 'cultivation chit' ರಾಜ್ಯ ಸರ್ಕಾರದಿಂದ `ಬಗರ್ ಹುಕುಂ’ ಸಾಗುವಳಿದಾರರಿಗೆ ಗುಡ್ ನ್ಯೂಸ್!
Share. Facebook Twitter LinkedIn WhatsApp Email

Related Posts

ಅಂಬೇಡ್ಕರ್ ಜಯಂತಿ ಪ್ರತಿ ಕೇರಿಗಳಲ್ಲಿಯೂ ಆಚರಣೆಯಾಗಲಿ: ಸಾಗರ ನಗರಸಭೆ ಪೌರಾಯುಕ್ತ ಎಚ್.ಕೆ. ನಾಗಪ್ಪ

14/04/2026 10:15 PM1 Min Read

ಸಮ ಸಮಾಜದ ನಿರ್ಮಾಣಕ್ಕೆ ಅಂಬೇಡ್ಕರ್, ಬಾಬೂಜಿ ಕೊಡುಗೆ ಅನನ್ಯ: ಸಾಗರದಲ್ಲಿ ಜಯಂತ್ ಗುಣಗಾನ

14/04/2026 9:39 PM2 Mins Read

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ತುಮಕೂರಿನ ಅಂತರಸನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ

14/04/2026 8:54 PM1 Min Read
Recent News

ಅಂಬೇಡ್ಕರ್ ಜಯಂತಿ ಪ್ರತಿ ಕೇರಿಗಳಲ್ಲಿಯೂ ಆಚರಣೆಯಾಗಲಿ: ಸಾಗರ ನಗರಸಭೆ ಪೌರಾಯುಕ್ತ ಎಚ್.ಕೆ. ನಾಗಪ್ಪ

14/04/2026 10:15 PM

ಸಮ ಸಮಾಜದ ನಿರ್ಮಾಣಕ್ಕೆ ಅಂಬೇಡ್ಕರ್, ಬಾಬೂಜಿ ಕೊಡುಗೆ ಅನನ್ಯ: ಸಾಗರದಲ್ಲಿ ಜಯಂತ್ ಗುಣಗಾನ

14/04/2026 9:39 PM

ಪ್ರಧಾನಿ ಮೋದಿ-ಅಧ್ಯಕ್ಷ ಟ್ರಂಪ್ ದೂರವಾಣಿ ಸಂಭಾಷಣೆ: ಪಶ್ಚಿಮ ಏಷ್ಯಾ ಶಾಂತಿ ಮತ್ತು ದ್ವಿಪಕ್ಷೀಯ ಬಾಂಧವ್ಯ ವೃದ್ಧಿಗೆ ಒತ್ತು

14/04/2026 9:30 PM

ಸಾವಕಾಶವಾಗಿ ಉಣ್ಣುವ ಅಭ್ಯಾಸದಿಂದ ಸಿಗಲಿದೆ 5 ಪ್ರಮುಖ ಪ್ರಯೋಜನಗಳು | Slow eating benefits

14/04/2026 9:01 PM
State News
KARNATAKA

ಅಂಬೇಡ್ಕರ್ ಜಯಂತಿ ಪ್ರತಿ ಕೇರಿಗಳಲ್ಲಿಯೂ ಆಚರಣೆಯಾಗಲಿ: ಸಾಗರ ನಗರಸಭೆ ಪೌರಾಯುಕ್ತ ಎಚ್.ಕೆ. ನಾಗಪ್ಪ

By kannadanewsnow0914/04/2026 10:15 PM KARNATAKA 1 Min Read

ಶಿವಮೊಗ್ಗ: ವಿಶ್ವದ ಶ್ರೇಷ್ಠ ಸಂವಿಧಾನ ನೀಡಿದ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಕೇವಲ ಒಂದು ವರ್ಗಕ್ಕೆ ಅಥವಾ ಸಮಾಜಕ್ಕೆ ಸೀಮಿತಗೊಳಿಸಿ…

ಸಮ ಸಮಾಜದ ನಿರ್ಮಾಣಕ್ಕೆ ಅಂಬೇಡ್ಕರ್, ಬಾಬೂಜಿ ಕೊಡುಗೆ ಅನನ್ಯ: ಸಾಗರದಲ್ಲಿ ಜಯಂತ್ ಗುಣಗಾನ

14/04/2026 9:39 PM

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ತುಮಕೂರಿನ ಅಂತರಸನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ

14/04/2026 8:54 PM

BREAKING: ಶಿವಮೊಗ್ಗದಲ್ಲಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವಾಗಿದ್ದ ನೀರಾನೆ ‘ಹಂಸಿಣಿ’ ಸಾವು

14/04/2026 8:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.