Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಸಿ ಎಐಸಿಸಿ ಆದೇಶ | Ex CM Siddaramaiah

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ `ಬಗರ್ ಹುಕುಂ’ ಸಾಗುವಳಿದಾರರಿಗೆ ಗುಡ್ ನ್ಯೂಸ್!
KARNATAKA

ರಾಜ್ಯ ಸರ್ಕಾರದಿಂದ `ಬಗರ್ ಹುಕುಂ’ ಸಾಗುವಳಿದಾರರಿಗೆ ಗುಡ್ ನ್ಯೂಸ್!

By kannadanewsnow57

ಶಿವಮೊಗ್ಗ : ಕಾನು ಸೊಪ್ಪಿನ ಬೆಟ್ಟ ಹುಲ್ಲು ಚಾಡಿ ಪ್ರದೇಶಗಳಲ್ಲಿ ಹಲವು ದಶಕಗಳಿಂದ ಪಾರಂಪರಿಕವಾಗಿ ಸಾಗುವಳಿ ಮಾಡಿಕೊಂಡು ಜೀವನ ನಿರ್ವಹಿಸುತ್ತಿರುವ ಕೃಷಿ ಕಾರ್ಮಿಕರನ್ನು ಒಕ್ಕಲಿಸುವುದು ಸರಿಯಲ್ಲ. ಅಧಿಕಾರಿಗಳು ಮಾನವೀಯ ನೆಲೆಯಲ್ಲಿ ಕಾರ್ಯ ನಿರ್ವಹಿಸುವಂತೆ ರಾಜ್ಯ ಶಾಲಾ ಶಿಕ್ಷಣ ಮತ್ತು ಶಾಸಕರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಅವರು ಹೇಳಿದರು.

ಸೊರಬ ಪಟ್ಟಣದ ತಾಲೂಕು ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಬಗರ್ ಹುಕುಂ ಸಮಿತಿಯ ಮೊದಲ ಸಭೆಯಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು. ಬಗರ್ ಹುಕುಂ ಸಾಗುವಳಿದಾರರ ಸಮಸ್ಯೆಯು ಬಹು ದಿನಗಳಿಂದ ಇತ್ತು. ಈ ಸಮಸ್ಯೆಯ ಕುರಿತು ರಾಜ್ಯದ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಹಲವು ದಶಕಗಳಿಂದ ಸಾಗುವಳಿ ಮಾಡಿಕೊಂಡು ಬರುತ್ತಿರುವ ರೈತರನ್ನು ಒಮ್ಮೆಲೇ ಒಕ್ಕಲೆಬ್ಬಿಸುವುದರಿಂದ ಅನೇಕ ಕುಟುಂಬಗಳ ಬದುಕು ಶೋಚನೀಯವಾಗಲಿದೆ ಆದ್ದರಿಂದ ಅಧಿಕಾರಿಗಳು ಮಾನವೀಯ ನೆಲೆಯಲ್ಲಿ ಹಾಗೂ ಕಾನೂನಿನ ಚೌಕಟ್ಟಿನೊಳಗೆ ಕಾರ್ಯನಿರ್ವಹಿಸುವಂತೆ ಸಲಹೆ ನೀಡಿದರು.

ಬಗರ್ ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸುವ ವಿಷಯದಲ್ಲಿ ಕ್ರಮ ಕೈಗೊಳ್ಳುವ ಅಧಿಕಾರಿಗಳ ದುರ್ವರ್ತನೆಯನ್ನು ಸಹಿಸಿಕೊಳ್ಳಲಾಗುವುದಿಲ್ಲ. ಅಂತಹವರ ವಿರುದ್ಧ ಕಠಿಣ ಕ್ರಮ ಅನಿವಾರ್ಯವಾಗಲಿದೆ ಎಂದವರು ಎಚ್ಚರಿಸಿದರು. ಅರಣ್ಯ ಮತ್ತು ಕಂದಾಯ ಭೂಮಿಗೆ ಸಂಬಂಧಿಸಿದಂತೆ ಹಲವು ದಶಕಗಳಿಂದ ಅನೇಕ ಸಮಸ್ಯೆಗಳು ಇತ್ಯರ್ಥಗೊಳ್ಳದೆ ಹಾಗೆಯೇ ಬಾಕಿ ಉಳಿದಿದೆ. ಅವುಗಳನ್ನು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಇತ್ಯರ್ಥಪಡಿಸಲಾಗುವುದು ಎಂದವರು ನುಡಿದರು.

ಅರಣ್ಯ ಇಲಾಖೆಯ ಅರಣ್ಯ ರಕ್ಷಕರು ಅಥವಾ ವನಪಾಲಕರು ಬಗರ್ ಹುಕುಂ ಸಾಗುವಳಿದಾರರ ವಿರುದ್ಧ ಮಾನವೀಯತೆ ಮರೆತು ವರ್ತಿಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬರುತ್ತಿವೆ. ಇಲಾಖೆಯ ಜವಾಬ್ದಾರಿಯುತ ಅಧಿಕಾರಿಗಳು ಮುಂದಿನ ದಿನಗಳಲ್ಲಿ ದೂರುಗಳು ಬರದಂತೆ ಗಮನ ಹರಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಬಗುರ್ ಹುಕುಂ ಸಾಗುವಳಿ ಜಮೀನು ಮಂಜೂರಾತಿಗೆ ಸಂಬಂಧಿಸಿದಂತೆ ಬಗರ್ ಹುಕುಂ ಸಮಿತಿಯಲ್ಲಿ ಅರ್ಜಿಗಳನ್ನು ತಿರಸ್ಕರಿಸುವ ಮುನ್ನ ಸಚಿವರ ಗಮನಕ್ಕೆ ತರುವಂತೆ ಸೂಚಿಸಿದವರು. ಕೆಲವು ಸಂದರ್ಭಗಳಲ್ಲಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಾರ್ವಜನಿಕರೊಂದಿಗೆ ಪಕ್ಷಾತೀತವಾಗಿ ಚರ್ಚಿಸಿ ಪರಿಶೀಲಿಸಿದ ನಂತರ ಕ್ರಮ ಕೈಗೊಳ್ಳುವಂತೆ ಅವರು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ತಹಸಿಲ್ದಾರ್ ಮಂಜುಳಾ ಹೆಗಡಾಳ ಅವರು ಮಾತನಾಡಿ ಬಗರ್ ಹುಕುಂ ಜಮೀನು ಮಂಜುರಾತಿಗೆ ಸಂಬಂಧಿಸಿದಂತೆ ಈಗಾಗಲೇ ಆನ್ಲೈನ್ ಮೂಲಕ 5113 ಅರ್ಜಿಗಳು ದಾಖಲಾಗಿದ್ದು, ಅವುಗಳನ್ನು ಶೀಘ್ರದಲ್ಲಿ ಬಗರ್ ಹುಕುಂ ಸಮಿತಿಗೆ ಮಂಡಿಸಲಾಗುವುದು. 91 ಅರ್ಜಿದಾರರಿಗೆ ಹಕ್ಕುಪತ್ರ ವಿತರಣೆ, 166 ಜನರಿಗೆ ನೋಂದಣಿ ಮಾಡಿಸಿಕೊಡಬೇಕಾದ ಕಾರ್ಯ ಪ್ರಗತಿಯಲ್ಲಿದೆ ಎಂದ ಅವರು ನೂತನ ಸಮಿತಿ ಸದಸ್ಯರು ಇ-ಕೆವೈಸಿ ಮಾಡಿಸಿದ ನಂತರ ಸಾಗುವಳಿದಾರರ ಅರ್ಜಿಗಳನ್ನು ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.

ಸಭೆಯಲ್ಲಿ ಬಗರ್ ಹುಕುಂ ಸಮಿತಿಯ ನೂತನ ಅಧ್ಯಕ್ಷ ಎಂ. ಡಿ. ಶೇಖರ್ ಸೇರಿದಂತೆ ಸಮಿತಿಯ ನೂತನ ಸದಸ್ಯರು ಹಾಗೂ ಅರಣ್ಯಾಧಿಕಾರಿಗಳು ಉಪಸ್ಥಿತರಿದ್ದರು.

Good news for 'Bagar Hukum' cultivators from state government! ರಾಜ್ಯ ಸರ್ಕಾರದಿಂದ `ಬಗರ್ ಹುಕುಂ’ ಸಾಗುವಳಿದಾರರಿಗೆ ಗುಡ್ ನ್ಯೂಸ್!
Share. Facebook Twitter LinkedIn WhatsApp Email

Related Posts

ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಸಿ ಎಐಸಿಸಿ ಆದೇಶ | Ex CM Siddaramaiah

1 Min Read

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

1 Min Read

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

2 Mins Read
Recent News

ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಸಿ ಎಐಸಿಸಿ ಆದೇಶ | Ex CM Siddaramaiah

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

ಕಿಡ್ನಿ ಸ್ಟೋನ್ ಅಪಾಯ ತಡೆಯುತ್ತೆ ‘ಪೊಟ್ಯಾಸಿಯಂ’: ಮೂತ್ರಪಿಂಡದ ಆರೋಗ್ಯಕ್ಕೆ ಇಲ್ಲಿದೆ ತಜ್ಞರ ಮಾಹಿತಿ!

State News
KARNATAKA

ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಸಿ ಎಐಸಿಸಿ ಆದೇಶ | Ex CM Siddaramaiah

By ವಸಂತ ಬಿ ಈಶ್ವರಗೆರೆ KARNATAKA 1 Min Read

ನವದೆಹಲಿ: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ರಚನೆಯ ಚಟುವಟಿಕೆಗಳು ಬಿರುಸಿನಿಂದ ಸಾಗುತ್ತಿರುವ ಬೆನ್ನಲ್ಲೇ, ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ನಿರ್ಧಾರವೊಂದನ್ನು…

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ನಾಳೆಯಿಂದ ‘ಯೆಲ್ಲೋ ಲೈನ್’ಗೆ ಹೆಚ್ಚುವರಿ ರೈಲುಗಳ ಸೇರ್ಪಡೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.