ಬೆಂಗಳೂರು: ರಾಜ್ಯ ಸರ್ಕಾರದಿಂದ ಬಗರ್ ಹುಕುಂ ರೈತರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಅದೇ ಸರ್ಕಾರಿ ಜಮೀನು ಸಾಗುವಳಿಗಾಗಿ ಅರ್ಜಿ ಸಲ್ಲಿಸಿ, ತಿರಸ್ಕೃತಗೊಂಡ ಅರ್ಜಿಯನ್ನು ಪುನರ್ ಪರಿಶೀಲಿಸುವುದಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವಂತ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು, ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವ ಬಗರ್ ಹುಕುಂ ಯೋಜನೆಯಡಿಯಲ್ಲಿ ತಿರಸ್ಕೃತಗೊಂಡಿರುವ ಅರ್ಜಿಗಳನ್ನು ಪುನರ್ ಪರಿಶೀಲಿಸುವುದಾಗಿ ತಿಳಿಸಿದ್ದಾರೆ.
ಕೆಲವರು ಬಗರ್ ಹುಕುಂ ಜಮೀನು ಮಂಜೂರಾತಿಗೆ 25ಕ್ಕೂ ಹೆಚ್ಚು ಅರ್ಜಿಗಳನ್ನು ಸಲ್ಲಿಸಿದ್ದಾರೆ. ಕಾನೂನಿನ ಪ್ರಕಾರ ಅರ್ಜಿದಾರರಿಗೆ 2005ಕ್ಕೆ ಕನಿಷ್ಠ 18 ವರ್ಷವಾಗಿರಬೇಕು. ಆದರೆ, ಈಗ 18 ವರ್ಷವಾದವರೂ ಅರ್ಜಿ ಸಲ್ಲಿಸಿದ್ದಾರೆ. ನಮೂನೆ 57ರ ಅಡಿಯಲ್ಲಿ ಒಟ್ಟಾರೆ 9,85,000 ಅರ್ಜಿಗಳು ಸಲ್ಲಿಕೆಯಾಗಿವೆ. ಈ ಎಲ್ಲರಿಗೂ ಜಮೀನು ಮಂಜೂರು ಮಾಡಬೇಕೆಂದರೆ 54 ಲಕ್ಷ ಎಕರೆ ಜಮೀನಿನ ಅಗತ್ಯವಿದೆ. ಆದರೆ, ರಾಜ್ಯದಲ್ಲಿ ಸರ್ಕಾರಿ ಜಮೀನೆ ಅಷ್ಟಿಲ್ಲ.
ಅನರ್ಹರಿಗೆ ಭೂ ಮಂಜೂರುಗೊಳಿಸಬಾರದು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಹೀಗಾಗಿ ಅನೇಕರ ಅರ್ಜಿಗಳು ಅನರ್ಹಗೊಂಡಿವೆ. ಆದರೆ, ಅರ್ಜಿಗಳನ್ನು ತಿರಸ್ಕೃತಗೊಳಿಸುವ ಸಂದರ್ಭದಲ್ಲಿ ನಿಯಮಗಳನ್ನು ತಪ್ಪಾಗಿ ಅರ್ಥೈಸಿದ್ದರೆ ಖಂಡಿತವಾಗಿ ಪುನರ್ ಪರಿಶೀಲನೆಗೆ ಒಳಪಡಿಸಲಾಗುವುದು ಎಂದರು.
ಮಾರ್ಚ್.22ರಿಂದ ‘IPL ಪಂದ್ಯಾವಳಿ’ ಆರಂಭ – ಅಧ್ಯಕ್ಷ ಅರುಣ್ ಧುಮಾಲ್ | IPL Match 2024
BREAKING: ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ‘ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ’ಗೆ ಭರ್ಜರಿ ಗೆಲುವು