ಬೆಂಗಳೂರು: ಬೆಂಗಳೂರಿಗರಿಗೆ ನಮ್ಮ ಮೆಟ್ರೋ ಸಿಹಿಸುದ್ದಿಯೊಂದು ನೀಡಿದ್ದು, ಸಂಚಾರ ದಟ್ಟನೆ ನಿಯಂತ್ರಣಕ್ಕಾಗಿ ಇದೀಗ ನಮ್ಮ ಮೆಟ್ರೋ ಹಸಿರು ಕಾರಿಡಾರ್ ವಿಸ್ತರಿತ ನಾಗಸಂದ್ರ ಮಾದಾವರ ಮಾರ್ಗದಲ್ಲಿ ಗುರುವಾರ ಮೆಟ್ರೋ ರೈಲು ಸುರಕ್ಷತಾ ಆಯುಕ್ತರ ತಂಡ (ಸಿಎಂಆರ್‌ಎಸ್) ತಪಾಸಣೆ ಪೂರ್ಣ ಗೊಳಿಸಿದೆ.ಹಾಗಾಗಿ ಇನ್ನೆರಡು ವಾರದಲ್ಲಿ ವರದಿ ನೀಡುವ ನಿರೀಕ್ಷೆಯಿದ್ದು, ಶೀಘ್ರವೇ ಇಲ್ಲಿ ಪ್ರಯಾಣಿಕರ ಸಂಚಾರ ಪ್ರಾರಂಭವಾಗಲಿದೆ ಎಂದು ಹೇಳಲಾಗುತ್ತಿದೆ.
ಮೋಟಾರ್ ಟ್ರಾಲಿ ಮೂಲಕ ಮಾರ್ಗದಲ್ಲಿ ಸಂಚರಿಸಿದ ಸಿಎಂಆರ್ ಎಸ್ ತಂಡದವರು ಪರಿಶೀಲನೆ ನಡೆಸಿದರು. ಮಾರ್ಗದ ತಿರುವು, ಪ್ರಾಯೋಗಿಕ ಸಂಚಾರದ ವೇಳೆಯಲ್ಲಿ ರೈಲಿನ ವೇಗ, ನಿಲ್ದಾಣಗಳಲ್ಲಿ ನಿಲ್ಲಬೇಕಾದಾಗ ನಿಧಾನಗತಿ, ಬ್ರೇಕ್ ಸಿಸ್ಟಂ, ವಿದ್ಯುತ್ ಪೂರೈಕೆ ಸೇರಿ ಇತರೆ ಅಂಕಿ ಅಂಶಗಳನ್ನು ಬೆಂಗಳೂರು ಮೆಟ್ರೋ ರೈಲು ನಿಗ ಮದ ಅಧಿಕಾರಿಗಳಿಂದ ಪಡೆದರು ಎನ್ನಲಾಗಿದೆ.
ಜೊತೆಗೆ ಮಂಜುನಾಥನಗರ, ಚಿಕ್ಕಬಿದ ರಕಲ್ಲು ಹಾಗೂ ಬೆಂಗಳೂರು ಅಂತಾ ರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ ನಿಲ್ದಾಣಗಳನ್ನು ತಪಾಸಣೆ ಮಾಡಿ ದರು. ಸಿಎಂಆರ್‌ಎಸ್ ತಂಡ 15 ದಿನ ಗಳಲ್ಲಿ ವರದಿ ನೀಡುವ ಸಾಧ್ಯತೆಯಿದೆ. ಅವರು ಸೂಚಿಸುವ ಕೆಲ ಬದಲಾವಣೆ ಗಳ ಅನ್ವಯ ರೈಲು ಸಂಚಾರ ಆರಂಭಿಸಲಾಗುವುದು ಎಂದು ಹೇಳಲಾಗುತ್ತಿದೆ.
2017ರಲ್ಲಿ ಹಸಿರು ಮಾರ್ಗದ ವಿಸ್ತರಿತ ಕಾಮಗಾರಿ ಆರಂಭವಾಗಿದ್ದರೂ ಕೋವಿಡ್, ಭೂಸ್ವಾ ಧೀನ ಸೇರಿ ಹಲವು ಕಾರಣದಿಂದ 7 ವರ್ಷ ವಿಳಂಬವಾಗಿದೆ.ಮಾದವಾರದವರೆಗೆ ವಾಣಿಜ್ಯ ಸೇವೆ ಲಭ್ಯವಾಗ ಲಿದ್ದು, ಇದರಿಂದ ನೆಲಮಂಗಲ ಸೇರಿ ಸುತ್ತಮುತ್ತಲ ಜನತೆಗೆ ಅನುಕೂಲವಾಗಲಿದೆ. ಸಿಎಂಆರ್‌ಎಸ್ ತಪಾಸಣೆ ಗಾಗಿ ಹಿನ್ನೆಲೆಯಲ್ಲಿ ನಾಗಸಂದ್ರ- ಪೀಣ್ಯ ಇಂಡಸ್ಟ್ರಿ ನಿಲ್ದಾಣಗಳ ನಡುವೆ ರೈಲ್ವೆ ಸಂಚಾರ ಸ್ಥಗಿತಗೊಂಡಿತ್ತು.