‘BBMP’ ಪೌರ ಕಾರ್ಮಿಕರಿಗೆ ಗುಡ್ ನ್ಯೂಸ್ : 42 ಸ್ಥಳಗಳಲ್ಲಿ ವಿಶ್ರಾಂತಿ ಕೊಠಡಿ ನಿರ್ಮಾಣ.!

ಬೆಂಗಳೂರು : ಪೌರ ಕಾರ್ಮಿಕರಿಗೆ ಬಿಬಿಎಂಪಿ ಸಿಹಿಸುದ್ದಿಯೊಂದು ನೀಡಿದ್ದು, ನಗರದ 42 ಸ್ಥಳಗಳಲ್ಲಿ ವಿಶ್ರಾಂತಿ ಕೊಠಡಿ ನಿರ್ಮಾಣ ಮಾಡಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಪೌರಕಾರ್ಮಿಕರು ವಿಶ್ರಾಂತಿ ಪಡೆಯಲು 42 ಸ್ಥಳಗಳಲ್ಲಿ ಶಾಶ್ವತ ಕೊಠಡಿಗಳ ನಿರ್ಮಾಣವನ್ನು ಶೀಘ್ರ ಪೂರ್ಣಗೊಳಿಸಲು ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.