ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಬಿಇಡಿ ಮತ್ತು ಡಿಇಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ ನೀಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ತಿಳಿಸಿದ್ದಾರೆ.
ಅಲ್ಪಸಂಖ್ಯಾತ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ಖ ಮತ್ತು ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ ನೀಡಲಾಗುತ್ತಿದ್ದು, ಅಭ್ಯರ್ಥಿಗಳು ಸೇವಾಸಿಂಧು ಪೋರ್ಟಲ್ https://sevasindu.karnataka.gov.in ಮೂಲಕ ಡಿ.25 ರೊಳಗಾಗಿ ಅರ್ಜಿ ಸಲ್ಲಿಸಿ, ಅಗತ್ಯ ದಾಖಲಾತಿಗಳೊಂದಿಗೆ ವಿದ್ಯಾರ್ಥಿ ವ್ಯಾಸಂಗ ಮಾಡುತ್ತಿರುವ ಕಾಲೇಜು ಇರುವ ತಾಲ್ಲೂಕಿನ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಸಲ್ಲಿಸಬೇಕು.
ಜಿಲ್ಲಾ ಮತ್ತು ತಾಲ್ಲೂಕುವಾರು ಮಾಹಿತಿ ಕೇಂದ್ರದ ವಿವರ:
ಬಳ್ಳಾರಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮAದಿರ ಹತ್ತಿರದ ಮೌಲಾನ ಅಜಾದ ಭವನದ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ (ಮೊ.8310321101), ಸಂಡೂರು ತೋಟಗಾರಿಕೆ ಇಲಾಖೆಯಲ್ಲಿನ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ (ಮೊ.9036925966, 8660575061), ಸಿರುಗುಪ್ಪದ ಬಳ್ಳಾರಿ ರಸ್ತೆಯ ನಗರಸಭೆ ಆವರಣದ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ(ಮೊ.9148889975) ಗೆ ಸಂಪರ್ಕಿಸಬಹುದು.
ಷರತ್ತುಗಳು:
ಅಭ್ಯರ್ಥಿಯು ಕರ್ನಾಟಕ ರಾಜ್ಯಕ್ಕೆ ಸೇರಿದವರಾಗಿರಬೇಕು. ಅಭ್ಯರ್ಥಿಯು ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಬೌದ್ದ, ಸಿಖ್ ಮತ್ತು ಪಾರ್ಸಿ ಸಮುದಾಯಕ್ಕೆ ಸೇರಿದವರಾಗಿರಬೇಕು. ಕೋರ್ಸ್ಗಳ ಅವಧಿಗೆ ತಕ್ಕಂತೆ ಪ್ರತಿ ವರ್ಷ (ಗರಿಷ್ಠ 2 ವರ್ಷ) ರೂ.25,000 ಗಳಂತೆ ಅನುದಾನ ನೀಡಲಾಗುತ್ತದೆ. ಅಭ್ಯರ್ಥಿಗಳು National Council for teacher Education ಹಾಗೂ Department of State Education Research and Training ಇದರಡಿ ಮಾನ್ಯತೆ ಪಡೆದ ಸರ್ಕಾರಿ/ಅರೆ ಸರ್ಕಾರಿ/ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರಬೇಕು. ಅಭ್ಯರ್ಥಿ ಪೋಷಕರ ವಾರ್ಷಿಕ ಆದಾಯ ಗರಿಷ್ಠ ರೂ.6 ಲಕ್ಷ ಮೀರಿರಬಾರದು.
ವಿದ್ಯಾರ್ಥಿಗಳು ಬಿ.ಎಡ್ ಹಾಗೂ ಡಿ.ಎಡ್ ಕೋರ್ಸ್ಗಳಲ್ಲಿ ದಾಖಲಾಗಿರುವ ಹಾಗೂ ಶುಲ್ಕವನ್ನು ಭರಿಸಿರುವ ಬಗ್ಗೆ ಎಲ್ಲಾ ಅಧಿಕೃತ ದಾಖಲಾತಿಗಳನ್ನು ಸಲ್ಲಿಸಬೇಕು. ಅಭ್ಯರ್ಥಿಗಳು ಹಿಂದಿನ ಸಾಲಿನಲ್ಲಿ ಕನಿಷ್ಟ ಶೇ.50ರಷ್ಟು ಅಂಕ ಪಡೆದು ಉತ್ತೀರ್ಣರಾಗಿರಬೇಕು. ಸುಳ್ಳು ಮಾಹಿತಿ, ದಾಖಲಾತಿ/ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನೀಡಿ ಪ್ರೋತ್ಸಾಹಧನ ಪಡೆದಿದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ನೀಡಲಾದ ಪ್ರೋತ್ಸಾಹ ಧನ ಮೊತ್ತವನ್ನು ವಸೂಲಿ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮAದಿರ ಹತ್ತಿರದ ಮೌಲಾನ ಅಜಾದ ಭವನದ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಸಹಾಯವಾಣಿ ಸಂಖ್ಯೆ ಮೊ.8277799990 (24*7) ಗೆ ಸಂಪರ್ಕಿಸಬಹುದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.