Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
nitish kumar

ಬಿಹಾರದಲ್ಲಿ ನಿತೀಶ್ ಯುಗಾಂತ್ಯ: ಏಪ್ರಿಲ್ 13ಕ್ಕೆ ಸಿಎಂ ಸ್ಥಾನಕ್ಕೆ ರಾಜೀನಾಮೆ; ಹೊಸ ನಾಯಕನ ಆಯ್ಕೆಗೆ ಕ್ಷಣಗಣನೆ!

11/04/2026 8:29 PM

​ವಾಹನ ಸವಾರರ ಗಮನಕ್ಕೆ: ಹುಲಿಕಲ್ ಘಾಟ್ ರಸ್ತೆ ಸಂಚಾರ ಬಂದ್ – ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

11/04/2026 8:25 PM
liver

ವಿಶ್ವ ಯಕೃತ್ತು ದಿನ 2026: ‘ಲಿವರ್ ಡಿಟಾಕ್ಸ್’ ಕೇವಲ ಭ್ರಮೆಯೇ? ಯಕೃತ್ತಿನ ಆರೋಗ್ಯಕ್ಕೆ ಬೇಕಿರುವುದು ಶುದ್ಧೀಕರಣವಲ್ಲ, ಉತ್ತಮ ಜೀವನಶೈಲಿ!

11/04/2026 8:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ರಾಜ್ಯದ ಗೃಹ ಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: 26ನೇ ಕಂತಿನ ಹಣ ಬಿಡುಗಡೆ, ಖಾತೆಗೆ ಜಮಾ
KARNATAKA

GOOD NEWS: ರಾಜ್ಯದ ಗೃಹ ಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: 26ನೇ ಕಂತಿನ ಹಣ ಬಿಡುಗಡೆ, ಖಾತೆಗೆ ಜಮಾ

By kannadanewsnow0928/02/2026 5:36 AM

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯ 26ನೇ ಕಂತಿನ ತಲಾ 2000 ರೂ. ಹಣ ಫಲಾನುಭವಿಗಳ ಖಾತೆಗೆ ಯಶಸ್ವಿಯಾಗಿ ಜಮೆಯಾಗಿದ್ದು, ಇದರೊಂದಿಗೆ ಪ್ರತಿ ಮನೆಯ ಯಜಮಾನಿಗೆ ಈವರೆಗೆ ಒಟ್ಟು 52,000 ರೂ. ಪಾವತಿಯಾದಂತಾಗಿದೆ ಎಂದು ವಿಧಾನ ಪರಿಷತ್‌ ಶಾಸಕ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ದಿನೇಶ್‌ ಗೂಳಿಗೌಡ ತಿಳಿಸಿದ್ದಾರೆ.

ಕಳೆದ ಎರಡೂವರೆ ವರ್ಷಗಳಲ್ಲಿ ರಾಜ್ಯ ಸರ್ಕಾರವು ತನ್ನ ಐದೂ ಗ್ಯಾರಂಟಿ ಯೋಜನೆಗಳ ಮೂಲಕ ಬರೋಬ್ಬರಿ 1 ಲಕ್ಷದ 20 ಸಾವಿರದ 433 ಕೋಟಿ ರೂಪಾಯಿಗೂ ಅಧಿಕ ಹಣವನ್ನು ನೇರವಾಗಿ ಮತ್ತು ಪಾರದರ್ಶಕವಾಗಿ ಜನರ ಖಾತೆಗೆ ವರ್ಗಾಯಿಸುವ ಮೂಲಕ ನುಡಿದಂತೆ ನಡೆದಿದೆ ಎಂದು ಶಾಸಕ ದಿನೇಶ್‌ ಗೂಳಿಗೌಡ ಮಾಹಿತಿ ನೀಡಿದ್ದಾರೆ.

ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯದಲ್ಲಿ ಒಟ್ಟು 1,24,10,629 ಮಹಿಳೆಯರು ನೋಂದಣಿಯಾಗಿದ್ದಾರೆ. ಈ ಯೋಜನೆಗಾಗಿ ಸರ್ಕಾರವು ಇದುವರೆಗೆ ಒಟ್ಟು 62,345.34 ಕೋಟಿ ರೂ. ವೆಚ್ಚ ಮಾಡಿದೆ. 26 ಕಂತುಗಳ ಹಣ ಯಶಸ್ವಿಯಾಗಿ ಪಾವತಿಯಾಗಿದ್ದು, 27ನೇ ಕಂತಿನ ಅನುದಾನವನ್ನು ಸಹ ಈಗಾಗಲೇ ಖಜಾನೆಯಿಂದ ಬಿಡುಗಡೆಗೊಳಿಸಲಾಗಿದೆ. ಶೀಘ್ರದಲ್ಲೇ 31 ಜಿಲ್ಲೆಗಳ ಫಲಾನುಭವಿಗಳಿಗೆ ಇದು ತಲುಪಲಿದೆ ಎಂದು ಅವರು ವಿವರಿಸಿದ್ದಾರೆ.

“ಪ್ರತಿ ತಿಂಗಳು 2,000 ರೂ. ನೇರವಾಗಿ ಬ್ಯಾಂಕ್ ಖಾತೆಗೆ ಜಮೆಯಾಗುತ್ತಿರುವುದರಿಂದ, ಕುಟುಂಬದ ಆರ್ಥಿಕ ನಿರ್ಧಾರಗಳಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚಾಗಿದೆ. ಗ್ಯಾರಂಟಿ ಯೋಜನೆಗಳು ಕೇವಲ ಹಣದ ಸಹಾಯವಲ್ಲ, ಗೌರವದ ಭರವಸೆ. ಪಕ್ಷಭೇದವಿಲ್ಲದೆ ಎಲ್ಲರಿಗೂ ಗ್ಯಾರಂಟಿ ಯೋಜನೆಗಳನ್ನು ತಲುಪಿಸಲಾಗುತ್ತಿದೆ” ಎಂದು ದಿನೇಶ್ ಗೂಳಿಗೌಡ ಹೇಳಿದ್ದಾರೆ.

ವಿರೋಧ ಪಕ್ಷಗಳು ಈ ಯೋಜನೆಗಳು ನಿಲ್ಲುತ್ತವೆ ಎಂದು ಅಸೂಯೆಯಿಂದ ಅಪಪ್ರಚಾರ ಮಾಡುತ್ತಿವೆ. ಆದರೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ಸ್ಪಷ್ಟಪಡಿಸಿರುವಂತೆ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ, ನಿರಂತರವಾಗಿ ಮುಂದುವರಿಯಲಿವೆ ಎಂದು ಅವರು ಭರವಸೆ ನೀಡಿದ್ದಾರೆ.

5 ಗ್ಯಾರಂಟಿ ಯೋಜನೆಗಳ ಸಮಗ್ರ ಪ್ರಗತಿ

• ಗೃಹಲಕ್ಷ್ಮಿ ಯೋಜನೆ: 1,24,10,629 ಮಹಿಳಾ ಫಲಾನುಭವಿಗಳಿಗೆ ತಲಾ 2000 ರೂ. ನಂತೆ ಈವರೆಗೆ ಒಟ್ಟು ₹62,345.34 ಕೋಟಿ ವೆಚ್ಚ ಮಾಡಲಾಗಿದೆ.

• ಗೃಹಜ್ಯೋತಿ ಯೋಜನೆ: ರಾಜ್ಯದ 1,65,65,000 ಮನೆಗಳಿಗೆ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ಒದಗಿಸಲಾಗುತ್ತಿದ್ದು, ಈವರೆಗೆ ಒಟ್ಟು ₹22,839 ಕೋಟಿ ವೆಚ್ಚವಾಗಿದೆ.

• ಶಕ್ತಿ ಯೋಜನೆ: ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಲಾಗಿದ್ದು, ಈವರೆಗೆ 679.20 ಕೋಟಿ ಉಚಿತ ಟಿಕೆಟ್‌ಗಳನ್ನು ವಿತರಿಸಲಾಗಿದೆ. ಇದಕ್ಕಾಗಿ ₹17,606.49 ಕೋಟಿ ವೆಚ್ಚವಾಗಿದೆ.
• ಅನ್ನಭಾಗ್ಯ ಯೋಜನೆ: ಬಡ ಕುಟುಂಬಗಳಿಗೆ ಉಚಿತ ಅಕ್ಕಿ/ಹಣ ವಿತರಿಸುವ ಈ ಯೋಜನೆಗೆ ಒಟ್ಟು ₹16,000 ಕೋಟಿ ವ್ಯಯಿಸಲಾಗಿದೆ.

• ಯುವನಿಧಿ ಯೋಜನೆ: 3,08,267 ನಿರುದ್ಯೋಗಿ ಪದವೀಧರರಿಗೆ ಪ್ರತಿ ತಿಂಗಳು ಆರ್ಥಿಕ ನೆರವು ನೀಡಲಾಗುತ್ತಿದ್ದು, ಇದುವರೆಗೆ ಒಟ್ಟು ₹915 ಕೋಟಿ ಹಣವನ್ನು ನೇರವಾಗಿ ಅವರ ಖಾತೆಗೆ ವರ್ಗಾಯಿಸಲಾಗಿದೆ.

ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಮನೆಯ ಯಜಮಾನಿಗೆ ತಿಂಗಳಿಗೆ 2000 ರೂ.ಗಳಂತೆ ಒಬ್ಬ ಮಹಿಳೆ ಗೆ ಒಟ್ಟು 52 ಸಾವಿರ ಹಣವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ತಲುಪಿಸಿದೆ. ಗೃಹಲಕ್ಷ್ಮಿ ಯೋಜನೆ ಕುಟುಂಬದ ಆರ್ಥಿಕ ನಿರ್ಧಾರಗಳಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸಿದೆ. ಗ್ಯಾರಂಟಿ ಯೋಜನೆಗಳು ಕೇವಲ ಹಣದ ಸಹಾಯವಲ್ಲ, ಗೌರವದ ಭರವಸೆ. ಪಕ್ಷಬೇಧವಿಲ್ಲದೆ ಎಲ್ಲರಿಗೂ ಗ್ಯಾರಂಟಿ ಯೋಜನೆಗಳನ್ನು ತಲುಪಿಸಲಾಗುತ್ತಿದೆ ಎಂಬುದಾಗಿ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ತಿಳಿಸಿದ್ದಾರೆ.

Share. Facebook Twitter LinkedIn WhatsApp Email

Related Posts

​ವಾಹನ ಸವಾರರ ಗಮನಕ್ಕೆ: ಹುಲಿಕಲ್ ಘಾಟ್ ರಸ್ತೆ ಸಂಚಾರ ಬಂದ್ – ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

11/04/2026 8:25 PM2 Mins Read

ರಾಷ್ಟ್ರ ಮಟ್ಟದಲ್ಲಿ ಕೆಎಸ್‌ಆರ್‌ಟಿಸಿ ಮಿಂಚು: ಪ್ರತಿಷ್ಠಿತ ‘AdWorld Showdown’ನ 3 ಪ್ರಶಸ್ತಿಗಳು ನಿಗಮದ ಪಾಲು

11/04/2026 8:14 PM2 Mins Read

ಅನ್ಯ ಧರ್ಮೀಯರು ಕೂಡ ದೇವರ ದರ್ಶನ ಪಡೆಯಲು ಮುಚ್ಚಳಿಕೆ ನೀಡುವ ವಾಡಿಕೆ ಇದೆ: ಟಿಟಿಡಿ ಸದಸ್ಯ ನರೇಶ್ ಕುಮಾರ್

11/04/2026 7:48 PM2 Mins Read
Recent News
nitish kumar

ಬಿಹಾರದಲ್ಲಿ ನಿತೀಶ್ ಯುಗಾಂತ್ಯ: ಏಪ್ರಿಲ್ 13ಕ್ಕೆ ಸಿಎಂ ಸ್ಥಾನಕ್ಕೆ ರಾಜೀನಾಮೆ; ಹೊಸ ನಾಯಕನ ಆಯ್ಕೆಗೆ ಕ್ಷಣಗಣನೆ!

11/04/2026 8:29 PM

​ವಾಹನ ಸವಾರರ ಗಮನಕ್ಕೆ: ಹುಲಿಕಲ್ ಘಾಟ್ ರಸ್ತೆ ಸಂಚಾರ ಬಂದ್ – ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

11/04/2026 8:25 PM
liver

ವಿಶ್ವ ಯಕೃತ್ತು ದಿನ 2026: ‘ಲಿವರ್ ಡಿಟಾಕ್ಸ್’ ಕೇವಲ ಭ್ರಮೆಯೇ? ಯಕೃತ್ತಿನ ಆರೋಗ್ಯಕ್ಕೆ ಬೇಕಿರುವುದು ಶುದ್ಧೀಕರಣವಲ್ಲ, ಉತ್ತಮ ಜೀವನಶೈಲಿ!

11/04/2026 8:21 PM

ರಾಷ್ಟ್ರ ಮಟ್ಟದಲ್ಲಿ ಕೆಎಸ್‌ಆರ್‌ಟಿಸಿ ಮಿಂಚು: ಪ್ರತಿಷ್ಠಿತ ‘AdWorld Showdown’ನ 3 ಪ್ರಶಸ್ತಿಗಳು ನಿಗಮದ ಪಾಲು

11/04/2026 8:14 PM
State News
KARNATAKA

​ವಾಹನ ಸವಾರರ ಗಮನಕ್ಕೆ: ಹುಲಿಕಲ್ ಘಾಟ್ ರಸ್ತೆ ಸಂಚಾರ ಬಂದ್ – ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

By kannadanewsnow0911/04/2026 8:25 PM KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ಮತ್ತು ಕುಂದಾಪುರವನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿ-52 ರ ಬಾಳೆಬರೆ ಘಾಟ್ (ಹುಲಿಕಲ್ ಘಾಟ್) ವ್ಯಾಪ್ತಿಯಲ್ಲಿ ರಸ್ತೆ…

ರಾಷ್ಟ್ರ ಮಟ್ಟದಲ್ಲಿ ಕೆಎಸ್‌ಆರ್‌ಟಿಸಿ ಮಿಂಚು: ಪ್ರತಿಷ್ಠಿತ ‘AdWorld Showdown’ನ 3 ಪ್ರಶಸ್ತಿಗಳು ನಿಗಮದ ಪಾಲು

11/04/2026 8:14 PM

ಅನ್ಯ ಧರ್ಮೀಯರು ಕೂಡ ದೇವರ ದರ್ಶನ ಪಡೆಯಲು ಮುಚ್ಚಳಿಕೆ ನೀಡುವ ವಾಡಿಕೆ ಇದೆ: ಟಿಟಿಡಿ ಸದಸ್ಯ ನರೇಶ್ ಕುಮಾರ್

11/04/2026 7:48 PM

ಪೋಷಕರೇ ಗಮನಿಸಿ: ನಿಮ್ಮ ಮಕ್ಕಳ `SSLC-PUC’ ಬಳಿಕ ಯಾವ ಕೋರ್ಸ್ ಬೆಸ್ಟ್? ಇಲ್ಲಿದೆ ವಿವರ !

11/04/2026 4:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.