ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ದಿನಾಂಕ 27ನೇ ಫೆಬ್ರವರಿ 2026 ಯಿಂದ ಹಳದಿ ಮಾರ್ಗದಲ್ಲಿ 8ನೇ ರೈಲನ್ನು ಪ್ರಯಾಣಿಕರ ಸೇವೆಗೆ ಸೇರಿಸಲಾಗುತ್ತಿದೆ.
ಹೆಚ್ಚುವರಿ ರೈಲು ಸೇರ್ಪಡೆಯೊಂದಿಗೆ, ಸೋಮವಾರದಿಂದ ಶನಿವಾರದವರೆಗೆ ಹಳದಿ ಮಾರ್ಗದಲ್ಲಿ ಪೀಕ್ ಅವಧಿಯ ವೇಳೆಯಲ್ಲಿ 10 ನಿಮಿಷಗಳ ಬದಲಿಗೆ 9 ನಿಮಿಷಗಳ ಅಂತರದಲ್ಲಿ ಹಾಗೂ ನಾನ್-ಪೀಕ್ ಅವಧಿಯಲ್ಲಿ 18 ನಿಮಿಷಗಳ ಬದಲಿಗೆ 14 ನಿಮಿಷಗಳ ಅಂತರದಲ್ಲಿ ಮೆಟ್ರೋ ಸೇವೆಗಳು ಸಂಚರಿಸಲಿವೆ. ಭಾನುವಾರದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.
ಎಲ್ಲಾ ದಿನಗಳಲ್ಲಿಆರ್.ವಿ. ರಸ್ತೆ ಹಾಗೂ ಬೊಮ್ಮಸಂದ್ರ ಟರ್ಮಿನಲ್ ನಿಲ್ದಾಣಗಳಿಂದ ಮೊದಲ ಮತ್ತು ಕೊನೆಯ ರೈಲುಗಳ ಸಮಯದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.
ಪ್ರಯಾಣಿಕರು ಮೇಲ್ಕಂಡ ಬದಲಾವಣೆಗಳನ್ನು ಗಮನಿಸಿ, ಸುಧಾರಿತ ಮೆಟ್ರೋ ಸೇವೆಯನ್ನು ಸದುಪಯೋಗಪಡಿಸಿಕೊಳ್ಳುವಂತೆ ವಿನಂತಿಸಿಕೊಳ್ಳಲಾಗಿದೆ.
ಸಾರ್ವಜನಿಕರು ಹಾಗೂ ಮೆಟ್ರೋ ಪ್ರಯಾಣಿಕರ ಮಾಹಿತಿಗಾಗಿ ಈ ವಿಷಯವನ್ನು ತಮ್ಮ ಗೌರವಾನ್ವಿತ ಮಾಧ್ಯಮಗಳ ಮೂಲಕ ವ್ಯಾಪಕ ಪ್ರಚಾರವನ್ನು ನೀಡಲು ಕೋರಿದೆ.
ಯಡಿಯೂರಪ್ಪ, ಬೊಮ್ಮಾಯಿಯವರೇ ನೀವು ಉರ್ದು ಜಾಹೀರಾತು ನೀಡಿಲ್ವ?: ಸಾಕ್ಷಿ ಸಹಿತ ಸಿಎಂ ಪ್ರಶ್ನೆ
Watch Video: ಕೇರಳದಲ್ಲಿ ವ್ಯಕ್ತಿಯನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಆನೆ: ಮೈ ಜುಂ ಎನ್ನುವ ವೀಡಿಯೊ ವೈರಲ್








