ಬೆಂಗಳೂರು: ಬೆಸ್ಕಾಂನ ( BESCOM ) ಬೆಂಗಳೂರು ಮೆಟ್ರೋಪಾಲಿಟನ್ ಪ್ರದೇಶ ವಲದಯದಲ್ಲಿನ (BMAZ) ಗ್ರಾಹಕರಿಗೆ ತಾವು ಬಳಸುವ ವಿದ್ಯುತ್ ಪ್ರಮಾಣದ ನಿಖರ ಮಾಹಿತಿ ತಿಳಿದುಕೊಳ್ಳಲು ಅನುಕುಲವಾಗುವ ಡಿಎಲ್ಎಮ್ಎಸ್ ಸ್ಟ್ಯಾಟಿಕ್ (ಡಿವೈಸ್ ಲ್ಯಾಂಗ್ವೇಜ್ ಮೆಸೇಜ್ ಸ್ಪೆಸಿಫಿಕೇಷನ್) ಡಿಜಿಟಲ್ ಮಾಪನಗಳನ್ನು ನೀಡಲಾಗುತ್ತಿದೆ.

ಬೆಂಗಳೂರು ಮೆಟ್ರೋಪಾಲಿಟನ್ ಪ್ರದೇಶ ವ್ಯಾಪ್ತಿಯಲ್ಲಿರುವ (BMAZ) 17,68,000 ಇಲೆಕ್ಟ್ರೊ ಮೆಕಾನಿಕಲ್ ಮೀಟರ್ ಗಳನ್ನು ಡಿಎಲ್ಎಮ್ಎಸ್ ಸ್ಟ್ಯಾಟಿಕ್ ಡಿಜಿಟಲ್ ಮೀಟರ್ ಗೆ ಬದಲಾವಣೆ ಮಾಡುವ ಕಾರ್ಯ ಜುಲೈ ತಿಂಗಳಲ್ಲಿ ಆರಂಭಗೊಂಡಿದೆ.

BIG NEWS: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಫಾರೂಕ್ ಅಬ್ದುಲ್ಲಾ ವಿರುದ್ಧ ED ಚಾರ್ಜ್ ಶೀಟ್ ಸಲ್ಲಿಕೆ

ರಾಜಾಜಿನಗರ, ರಾಜರಾಜೇಶ್ವರಿನಗರ, ಇಂದಿರಾನಗರ ಮತ್ತು ವೈಟ್ ಫೀಲ್ಡ್ ವಿಭಾಗಗಳಲ್ಲಿ ಈಗಾಗಲೇ 16,000 ಸಿಂಗಲ್ ಫೇಸ್ ಮತ್ತು 3 ಫೇಸ್ ಡಿಜಿಟಲ್ ಮಾಪನಗಳನ್ನು ಅಳವಡಿಸಲಾಗಿದೆ. ಡಿಜಿಟಲ್ ಮೀಟರ್ ಬದಲಾವಣೆ ಕಾರ್ಯ ಭರದಿಂದ ಸಾಗಿದ್ದು ಪ್ರತಿನಿತ್ಯ 700 ರಿಂದ 900 ಮೀಟರ್ ಗಳನ್ನು ಅಳವಡಿಸಲಾಗುತ್ತಿದೆ. ಬೆಸ್ಕಾಂ ಒಂದು ವಿಭಾಗದಲ್ಲಿ ಮೀಟರ್ ಅಳವಡಿಕೆ ಕಾರ್ಯ ಪೂರ್ಣಗೊಂಡ ನಂತರವೇ ಇನ್ನೊಂದು ವಿಭಾಗದಲ್ಲಿ ಅಳವಡಿಕೆ ಕಾರ್ಯ ಕೈಗೆತ್ತಿಕೊಳ್ಳಲಾಗುವುದು ಎಂದು ಬೆಸ್ಕಾಂ ತಿಳಿಸಿದೆ.

2024ರ ವೇಳೆಗೆ 17,68,000 ಇಲೆಕ್ಟ್ರೋ ಮೆಕಾನಿಕಲ್ ಮೀಟರ್ ಗಳನ್ನು ಡಿಜಿಟಲ್ ಮೀಟರ್ ಗೆ ಬದಲಿಸುವ ಕಾರ್ಯ ಪೂರ್ಣಗೊಳಲ್ಲಿದೆ ಎಂದು ಬೆಸ್ಕಾಂನ ಪ್ರಧಾನ ವ್ಯವಸ್ಥಾಪಕ (ಮಾಪಕ ಮತ್ತು ವಾಣಿಜ್ಯ) ಪಿ.ರಂಗಸ್ವಾಮಿ ತಿಳಿಸಿದ್ದಾರೆ.

ಸಿದ್ದರಾಮಯ್ಯ ಮತ್ತೊಂದು ಅವಧಿಗೆ ಸಿಎಂ ಮಾಡಲೇ ಬೇಕು: ಮುಸ್ಲೀಂ ಮುಖಂಡರಿಗೆ ಕಾಂಗ್ರೆಸ್ ಗೆ ಮತ ಹಾಕುವಂತೆ ಮಾಜಿ ಸಚಿವ ಜಮೀರ್ ಅಹ್ಮದ್ ಕರೆ

ಡಿಎಲ್ಎಮ್ಎಸ್ ಸ್ಟ್ಯಾಟಿಕ್ ಮೀಟರ್ ಗ್ರಾಹಕ ಸ್ನೇಹಿಯಾಗಿದ್ದು ಸಿಂಗಲ್ ಫೇಸ್ ಅಥವ 3 ಫೇಸ್ ಮೀಟರ್ ಅಳವಡಿಸಿಕೊಂಡಿರುವ ಗ್ರಾಹಕರಿಗೆ ವಿದ್ಯುತ್ ವೊಲ್ಟೇಜ್ ಮತ್ತು ಬಳಕೆ ಕುರಿತು ಮಾಹಿತಿ ಪಡೆಯಬಹುದಾಗಿದೆ. ಈ ಡಿಜಿಟಲ್ ಮೀಟರ್‌ ಗಳನ್ನು ಉಚಿತವಾಗಿ ಅಳವಡಿಸಲಾಗುತ್ತಿದ್ದು ಗ್ರಾಹಕರಿಂದ ಯಾವುದೇ ಶುಲ್ಕವನ್ನು ಪಡೆಯುವುದಿಲ್ಲವೆಂದು ಬೆಸ್ಕಾಂ ಸ್ಪಷ್ಟಪಡಿಸಿದೆ.

ಹತ್ತು ವರ್ಷಗಳ ಹಿಂದೆ ಅಳವಡಿಸಿರುವ ಇಲೆಕ್ಟ್ರೋ ಮೆಕಾನಿಕಲ್ ಮೀಟರ್ ಗಳನ್ನು ಡಿಜಿಟಲ್ ಮೀಟರ್ ಗೆ ಬದಲಿಸಲಾಗುತ್ತಿದೆ ಎಂದು ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

ಯಾರು ಬೇಕಾದರೂ ‘ಶ್ರೀಮಂತ’ರಾಗಬಹುದು: ಅದೇಗೆ ಎನ್ನುವ ‘ಸಿಂಪಲ್ ಮಾಹಿತಿ’ ಇಲ್ಲಿದೆ.!

ಈ ಡಿಜಿಟಲ್ ಮೀಟರ್ ನ ಇನ್ನೊಂದು ಉಪಯೋಗವೇನೆಂದೆರೆ ಗ್ರಾಹಕರು ತಾವು ಎರಡು ವರ್ಷಗಳ ಹಿಂದಿನ ಅವಧಿಯವರೆಗೂ ಬಳಸಿದ ವಿದ್ಯುತ್ ಪ್ರಮಾಣದ ವಿವರಗಳನ್ನು ಬೆಸ್ಕಾಂ ಕಛೇರಿಯಿಂದ ಪಡೆದು ಅದನ್ನು ವಿದ್ಯುತ್ ಬಿಲ್ ಜೊತೆ ತುಲನೆ ಮಾಡಿ ತಾವು ಬಳಸಿರುವ ವಿದ್ಯುತ್ ಪ್ರಮಾಣ ಸರಿಯಾಗಿದೆಯೇ ಎಂದು ತಿಳಿಯಬಹುದಾಗಿದೆ. ಬೆಂಗಳೂರು ನಗರದಲ್ಲಿ ಡಿಜಿಟಲ್ ಮೀಟರ್ ನ ಅಳವಡಿಕೆ ಪೂರ್ಣಗೊಂಡ ನಂತರ ಬೆಂಗಳೂರು ಗ್ರಾಮಾಂತರ ಪ್ರದೇಶ ಮತ್ತು ಚಿತ್ರದುರ್ಗ-ದಾವಣಗೆರೆ ಪ್ರದೇಶ ವಲಯದಲ್ಲಿ ಡಿಜಿಟಲ್ ಮೀಟರ್ ಗಳ ಅಳವಡಿಕೆ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಡಿಜಿಟಲ್ ಮೀಟರ್ ಅಳವಡಿಕೆ ಕಾರ್ಯವನ್ನು 2 ಖಾಸಗಿ ಕಂಪನಿಗಳಿಗೆ ಗುತ್ತಿಗೆ ನೀಡಲಾಗಿದ್ದು ಎಲ್ಲಾ ವಿಭಾಗಳಲ್ಲಿ ಹಂತ ಹಂತವಾಗಿ ಅಳವಡಿಸಲಾಗುವುದು. ಈ ಯೋಜನೆಯ ಒಟ್ಟು ಮೊತ್ತ 285.16 ಕೋಟಿ ರೂಪಾಯಿಗಳಾಗಿದ್ದು, ಸಿಂಗಲ್ ಫೇಸ್ ಡಿಜಿಟಲ್ ಮೀಟರ್ ಗೆ 934 ರೂಪಾಯಿ ಮತ್ತು 3 ಫೇಸ್ ಮೀಟರ್ ಗೆ 2312 ರೂಪಾಯಿಗಳಾಗಿದ್ದು ಈ ವೆಚ್ಚವನ್ನು ಬೆಸ್ಕಾಂ ಭರಿಸಲಿದೆ.

ಡಿಜಿಟಲ್ ಮೀಟರ್ ಮಾರಾಟ ಮಳಿಗೆ

ಹೊಸ ವಿದ್ಯುತ್ ಸಂಪರ್ಕ ಪಡೆಯುವ ಗ್ರಾಹಕರಿಗೆ ಅನುಕುಲವಾಗಲು ಬೆಸ್ಕಾಂನ ಎಲ್ಲಾ ವಿಭಾಗಗಳಲ್ಲಿ ಸಿಂಗಲ್ ಫೇಸ್ ಮತ್ತು 3 ಫೇಸ್ ಡಿಜಿಟಲ್ ಮೀಟರ್ ಗಳ ಮಾರಾಟ ಮಳಿಗೆಗಳನ್ನು ತೆರೆಯಲು ನಿರ್ಧರಿಸಲಾಗಿದೆ. ಬೆಸ್ಕಾಂ ನಿಗದಿ ಪಡಿಸಿರುವ ದರದಲ್ಲಿ ವೆಂಡರ್‌ಗಳು ಗ್ರಾಹಕರಿಗೆ ಈ ಡಿಜಿಟಲ್ ಮೀಟರ್ ಗಳನ್ನು ಮಾರಾಟ ಮಾಡಲಿದ್ದಾರೆ ಎಂದು ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ. ಈ ಮಾರಾಟ ಮಳಿಗೆಗಳ ಸ್ಥಾಪನೆಯಿಂದ ಗ್ರಾಹಕರು ಮೀಟರ್ ಖರೀದಿಗೆ ಅಲೆದಾಡುವುದು ತಪ್ಪಿದಂತ್ತಾಗುತ್ತದೆ.

Share.
Exit mobile version