ಬೆಂಗಳೂರು: ರಾಜ್ಯದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಗುಡ್ ನ್ಯೂಸ್ ನೀಡಿದ್ದಾರೆ. ಅದೇ ನಿಗಮ ಮಂಡಳಿ ನೇಮಕದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಆದ್ಯತೆ ನೀಡುವುದಾಗಿ ತಿಳಿಸಿದ್ದಾರೆ.
ನಿಗಮ ಮಂಡಳಿ ನೇಮಕದಲ್ಲಿ ಪಟ್ಟಿ ಬಿಡುಗಡೆಯಾಗಿಲ್ಲ ಎಂದು ಕೇಳಿದಾಗ, “ನಾನು ಪಟ್ಟಿ ತರಿಸಿಕೊಂಡಿದ್ದು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಆದ್ಯತೆ ನೀಡಬೇಕು ಎಂಬ ಉದ್ದೇಶ ನನ್ನದು. ಬ್ಲಾಕ್ ಅಧ್ಯಕ್ಷರು ಹಾಗೂ ಜಿಲ್ಲಾಧ್ಯಕ್ಷರುಗಳಿಗೆ ಸ್ಥಾನಮಾನ ನೀಡಬೇಕು ಎಂದು ಎಲ್ಲಾ ಶಾಸಕರಿಗೆ ಹೇಳಿದ್ದೇನೆ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿಗಳು ಬಜೆಟ್ ತಯಾರಿಯಲ್ಲಿ ನಿರತರಾಗಿದ್ದು, ನನ್ನ ಹಾಗೂ ಸಣ್ಣ ನೀರಾವರಿ ಇಲಾಖೆ ಜತೆ ಸಭೆ ಮಾತ್ರ ಬಾಕಿ ಇದೆ. ನಮ್ಮ ಅಧಿಕಾರಿಗಳು ದೆಹಲಿಯಲ್ಲಿದ್ದ ಕಾರಣ ಸಭೆ ಮಾಡಲು ಆಗಿರಲಿಲ್ಲ ಎಂದು ತಿಳಿಸಿದರು.
BIG NEWS : ಫೆ.28ರಿಂದ 3 ದಿನ `ಹಂಪಿ ಉತ್ಸವ’ : CM ಸಿದ್ದರಾಮಯ್ಯ ಚಾಲನೆ.!
BREAKING : ಮೈಸೂರಲ್ಲಿ ಮತ್ತೊಂದು ಅಗ್ನಿ ದುರಂತ : ಆಕಸ್ಮಿಕ ಬೆಂಕಿಯಿಂದ ಹೊತ್ತಿ ಉರಿದ 12 ಬಾಯ್ಲರ್ ಗಳು!