ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದೆ. ಡೆಂಗ್ಯೂ ನಿಯಂತ್ರಣ ಕ್ರಮವಾಗಿ ರಾಜ್ಯ ಸರ್ಕಾರದಿಂದ ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ಸೊಳ್ಳೆ ಪರದೆ ವಿತರಣೆ ಮಾಡಲಿದೆ.
ಈ ಸಂಬಂಧ ರಾಜ್ಯ ಆರೋಗ್ಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಅವರು ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ ಡೆಂಘಿ ಜ್ವರ ಪರಿಸ್ಥಿತಿಯ ಸೂಕ್ಷ್ಮ ಮೇಲ್ವಿಚಾರಣೆಗೆ ವಾರ್ ರೂಮ್ ಪ್ರಾರಂಭಿಸಿ, ಡೆಂಘಿ ಪೀಡಿತರ ಮೇಲೆ 14 ದಿನಗಳು ನಿಗಾ ವಹಿಸಬೇಕೆಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಆರೋಗ್ಯ ಸೌಧದಲ್ಲಿರುವ ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮ ವಿಭಾಗವು ರಾಜ್ಯಮಟ್ಟದ ವಾರ್ ರೂಮ್ ಉಸ್ತುವಾರಿ ಹೊಂದಿರಲಿದೆ.
ಬಿಬಿಎಂಪಿ ಹಾಗೂ ಜಿಲ್ಲಾಡಳಿತಗಳು ಅಧಿಕ ಪ್ರಕರಣಗಳು ವರದಿಯಾದ ಪ್ರದೇಶ ಗುರುತಿಸಿ, ವಿವರವನ್ನು ರಾಜ್ಯಮಟ್ಟದ ವಾರ್ ರೂಮ್‌ಗೆ ಸಲ್ಲಿಸಬೇಕು. ಹೆಚ್ಚು ಪ್ರಕರಣಗಳು ವರದಿಯಾದ ಪ್ರದೇಶಗಳಲ್ಲಿ ಲಾರ್ವಾ ನಾಶ ಚಟುವಟಿಕೆಗಳನ್ನು ತೀವ್ರಗೊಳಿಸಬೇಕು. ಜ್ವರ ಕ್ಲಿನಿಕ್‌ಗಳನ್ನು ತುರ್ತಾಗಿ ಪ್ರಾರಂಭಿಸಬೇಕು. ಬಿಪಿಎಲ್ ಕುಟುಂಬಗಳಿಗೆ ಸೊಳ್ಳೆ ಪರದೆ ವಿತರಣೆ ಮಾಡಬೇಕು ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಸುತ್ತೋಲೆ ಹೊರಡಿಸಿದ್ದಾರೆ.
ರಾಜ್ಯದಲ್ಲಿ ಡೆಂಘಿ ಜ್ವರ ಪರಿಸ್ಥಿತಿಯ ಸೂಕ್ಷ್ಮ ಮೇಲ್ವಿಚಾರಣೆಗೆ ವಾರ್ ರೂಮ್ ಪ್ರಾರಂಭಿಸಿ, ಡೆಂಘಿ ಪೀಡಿತರ ಮೇಲೆ 14 ದಿನಗಳು ನಿಗಾ ವಹಿಸಬೇಕೆಂದು ಆರೋಗ್ಯ ಇಲಾಖೆಯು ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ.
ಆರೋಗ್ಯ ಸೌಧದಲ್ಲಿರುವ ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮ ವಿಭಾಗವು ರಾಜ್ಯಮಟ್ಟದ ವಾರ್ ರೂಮ್ ಉಸ್ತುವಾರಿ… pic.twitter.com/flkC6LTd35
— DIPR Karnataka (@KarnatakaVarthe) July 12, 2024
ಮಹಾರಾಷ್ಟ್ರ ಎಂಎಲ್ಸಿ ಚುನಾವಣೆಯಲ್ಲಿ ಮಹಾಯುತಿ ಮೈತ್ರಿಕೂಟಕ್ಕೆ ಭರ್ಜರಿ ಜಯ | Maharashtra MLC Polls
ಇಲ್ಲಿದೆ ‘KPSC’ಯಿಂದ ಅಧಿಸೂಚಿಸಲಾದ ವಿವಿಧ ಹುದ್ದೆಗಳ ನೇಮಕಾತಿ ‘ಪರೀಕ್ಷಾ ವೇಳಾಪಟ್ಟಿ’ | KPSC Exam