ಬೆಂಗಳೂರು: ರಾಜ್ಯದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಲ್ಪಸಂಖ್ಯಾತರ ನಿರ್ದೇಶನಾಲಯವು 2025-26ನೇ ಸಾಲಿನ ಪೊಲೀಸ್ ಕಾನ್ಸ್ಟೇಬಲ್ (Police Constable) ನೇಮಕಾತಿ ಪರೀಕ್ಷೆಗೆ ಹಾಜರಾಗಲಿರುವ ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಗೆ ‘ವಸತಿಯುತ ಪರೀಕ್ಷಾ ಪೂರ್ವ ತರಬೇತಿ’ ನೀಡಲು ಅರ್ಜಿ ಆಹ್ವಾನಿಸಿದೆ.
ರಾಜ್ಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಪಾರ್ಸಿ ಸಮುದಾಯಕ್ಕೆ ಸೇರಿದ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬಹುದು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 26-03-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-03-2026
ಅರ್ಜಿ ಸಲ್ಲಿಸಲು ಇರಬೇಕಾದ ಪ್ರಮುಖ ಅರ್ಹತೆಗಳು:
ಅಭ್ಯರ್ಥಿಯು ಕಡ್ಡಾಯವಾಗಿ ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
ಅಲ್ಪಸಂಖ್ಯಾತ ಸಮುದಾಯಕ್ಕೆ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ) ಸೇರಿರಬೇಕು.
ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯವು ರೂ. 8 ಲಕ್ಷಗಳಿಗಿಂತ ಮೀರಿರಬಾರದು.
ಶೈಕ್ಷಣಿಕ ಅರ್ಹತೆ: ದ್ವಿತೀಯ ಪಿಯುಸಿ (PUC) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ: ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 27 ವರ್ಷ ಮೀರಿರಬಾರದು.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ನೌಕರಿಯಲ್ಲಿರುವ ಅಭ್ಯರ್ಥಿಗಳು ಈ ತರಬೇತಿಗೆ ಅರ್ಹರಿರುವುದಿಲ್ಲ.
ಅರ್ಜಿ ಸಲ್ಲಿಕೆ ಹೇಗೆ?
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ಜಾಲತಾಣ https://dom.karnataka.gov.in ಗೆ ಭೇಟಿ ನೀಡಿ, ಅಲ್ಲಿ ಲಭ್ಯವಿರುವ ಅರ್ಜಿ ನಮೂನೆಯಲ್ಲಿ ಮಾರ್ಗಸೂಚಿಗಳನ್ವಯ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ತಮ್ಮ ಸಂಬಂಧಪಟ್ಟ ಜಿಲ್ಲಾ ಕಛೇರಿ (ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ) ಅಥವಾ ಇಲಾಖೆಯ ಸಹಾಯವಾಣಿ ಸಂಖ್ಯೆ 8277799990 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








