ಬೆಂಗಳೂರು: ರಾಜ್ಯ ಸರ್ಕಾರದಿಂದ ಈಗಾಗಲೇ ಬಡವರು, ರೈತರ ಮಕ್ಕಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವಿದ್ಯಾನಿಧಿ ವಿದ್ಯಾರ್ಥಿ ವೇತನ ಯೋಜನೆಯನ್ನು ಜಾರಿಗೆ ತಂದಿತ್ತು. ಈಗ ಮುಂದುವರೆದು ಈ ಯೋಜನೆಯನ್ನು ರಾಜ್ಯದ ಟ್ಯಾಕ್ಸಿ, ಆಟೋ ಚಾಲಕರ ಮಕ್ಕಳಿಗೂ ವಿಸ್ತರಿಸಿದೆ. ಈ ಮೂಲಕ ರಾಜ್ಯದ ಹಳದಿ ಬೋರ್ಡ್ ಟ್ಯಾಕ್ಸಿ, ಆಟೋ ಚಾಲಕರ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.
ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಹಳದಿ ಬೋರ್ಡ್ ಟ್ಯಾಕ್ಸಿ ಮತ್ತು ಆಟೋ ಚಾಲಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ, ಮೆಟ್ರಿಕ್ ನಂತರದ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾನಿಧಿ ಯೋಜನೆ ಜಾರಿಗೊಳಿಸಲಾಗಿದೆ ಎಂದಿದೆ.
ಆಟೋ, ಟ್ಯಾಕ್ಸಿ ಚಾಲಕ ಮೆಟ್ರಿಕ್ ನಂತ್ರದ ಉನ್ನತ ವ್ಯಾಸಂಗಕ್ಕೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ನೋಂದಾಯಿತ ಶಿಕ್ಷಣ ಸಂಸ್ಥೆಗಳಲ್ಲಿ ಪಿಯು, ಡಿಪ್ಲೋಮಾ, ಐಟಿಐ, ಪದವಿ, ನರ್ಸಿಂಗ್, ಬಿಇ, ಬಿ.ಟೆಕ್, ಬಿ.ಫಾರ್ಮ್, ಪ್ಯಾರಾ ಮೆಡಿಕಲ್, ಎಲ್ ಎಲ್ ಬಿ ಸೇರಿದಂತೆ ಎಲ್ಲಾ ಸ್ನಾತಕೋತ್ತರ ಕೋರ್ಸ್ ಪ್ರವೇಶ ಪಡೆದಂತ ವಿದ್ಯಾರ್ಥಿಗಳು ಈ ವಿದ್ಯಾನಿಧಿ ವಿದ್ಯಾರ್ಥಿ ವೇತನ ಯೋಜನೆಗೆ ಅರ್ಹರಾಗಿರುತ್ತಾರೆ ಎಂದು ತಿಳಿಸಿದೆ.
ಯಾವ ಕೋರ್ಸ್ ಗೆ ಎಷ್ಟು ವಿದ್ಯಾರ್ಥಿ ವೇತನ?
- ರೂ.2,500 ಪದವಿ ಪೂರ್ವ, ಪಿಯುಸಿ, ಐಟಿಐ ಹಾಗೂ ಡಿಪ್ಲೋ ಕೋರ್ಸ್ ಸೇರಿದಂತ ವಿದ್ಯಾರ್ಥಿಗಳಿಗೆ ಆದ್ರೇ, ರೂ.3,000 ವಿದ್ಯಾರ್ಥಿನಿಯರಿಗೆ ಆಗಿದೆ.
- ರೂ.5,000 ಎಲ್ಲಾ ಪದವಿಯ ವಿದ್ಯಾರ್ಥಿಗಳಿಗೆ, ರೂ.5,500 ವಿದ್ಯಾರ್ಥಿನಿಯರಿಗೆ
- ರೂ.7,500 ಎಲ್ ಎಲ್ ಬಿ, ಬಿ.ಫಾರ್ಮ್, ನರ್ಸಿಂಗ್ ಹಾಗೂ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳಿಗೆ, ರೂ.8,000 ವಿದ್ಯಾರ್ಥಿನಿಯರಿಗೆ.
- ರೂ.10,000 ಬಿಇ, ಬಿಟೆಕ್ ಹಾಗೂ ಎಂ.ಬಿ.ಬಿ.ಎಸ್ ವಿದ್ಯಾರ್ಥಿಗಳಿಗೆ ಆದ್ರೇ ರೂ.11,000 ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತದೆ.
ಯಾರು ವಿದ್ಯಾನಿಧಿ ವಿದ್ಯಾರ್ಥಿವೇತನ ಪಡೆಯಲು ಅರ್ಹರು?
ರಾಜ್ಯ ಸರ್ಕಾರ ನೀಡಲಾಗುತ್ತಿರುವಂತ ವಿದ್ಯಾನಿಧಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕರ್ನಾಟಕದಲ್ಲಿ ಹಳದಿ ಬೋರ್ಡ್ ಆಟೋ ಮತ್ತು ಕ್ಯಾಬ್ ಚಾಲಕರ ಮಕ್ಕಳು ಅರ್ಹರಾಗಿರುತ್ತಾರೆ.
BIG NEWS: 11,000 ಸಿಬ್ಬಂದಿಯನ್ನು ಕಡಿತಗೊಳಿಸಿದ ಫೇಸ್ ಬುಕ್ ಒಡೆತನದ ಮೆಟಾ | Facebook cut staff
ಅರ್ಜಿ ಸಲ್ಲಿಸುವುದು ಹೇಗೆ?
ರಾಜ್ಯದ ಪ್ರಾದೇಶಿಕ, ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ಕ್ಯಾಬ್, ಆಟೋರಿಕ್ಷಾ ಕ್ಯಾಬ್ ವರ್ಗಗಳ ವಾಹನಗಳನ್ನು ಚಲಾಯಿಸುವ, ಸಾರಧಿ ತಂತ್ರಾಂಶದಲ್ಲಿ ಚಾಲ್ತಿಯಲ್ಲಿರುವ ಚಾಲನಾ ಅನುಜ್ಞಾಪತ್ರ ಹೊಂದಿರುವಂತ ಯೆಲ್ಲೋ ಬೋರ್ಟ್ ಚಾಲಕರು, ತಮ್ಮ ಮಕ್ಕಳಿಗಾಗಿ ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು.
ಅರ್ಜಿಯನ್ನು http://sevasindhu.karnataka.gov.in ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದು. ಇಲ್ಲವೇ ಗ್ರಾಮ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಲ್ಲಿಯೂ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.