ಬೆಂಗಳೂರು: 2023-24 ಮತ್ತು 2024-25ನೇ ಸಾಲಿನ ಶೈಕ್ಷಣಿಕ ಧನಸಹಾಯಕ್ಕಾಗಿ ಅರ್ಹ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ಅರ್ಜಿಗಳನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (ಎಸ್.ಎಸ್.ಪಿ) ಮೂಲಕ ಸಲ್ಲಿಸುವ ಅವಧಿಯನ್ನು ದಿನಾಂಕ: 31-12-2024ರ ವರೆಗೆ ವಿಸ್ತರಿಸಲಾಗಿದೆ.
ಇ-ಕಾರ್ಡ್ ಪಡೆಯಲು ಡಿಸೆಂಬರ್ 31 ರೊಳಗೆ ಆಧಾರ್ ಕಾರ್ಡ್ ಸಂಖ್ಯೆಯನ್ನು ಲಿಂಕ್ ಮಾಡಲು ಸೂಚಿಸಲಾಗಿದೆ. ಬ್ಯಾಂಕ್ ಖಾತೆಯೊಂದಿಗೆ ಜೋಡಣೆ ಮಾಡಿ ಎನ್.ಪಿ.ಸಿ.ಐ ಮ್ಯಾಪಿಂಗ್ (NPCI Mapping) ಮಾಡಿಸುವುದು ಕಡ್ಡಾಯ.
2023-24 ಮತ್ತು 2024-25ನೇ ಸಾಲಿನ ಶೈಕ್ಷಣಿಕ ಧನ ಸಹಾಯ ಪಡೆಯಲು ಅರ್ಹ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ತಮ್ಮ ಮಕ್ಕಳ ಅರ್ಜಿಗಳನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (ಎಸ್.ಎಸ್.ಪಿ) ಮೂಲಕ ಅರ್ಜಿಯನ್ನು ಸಲ್ಲಿಸಲು ದಿನಾಂಕ: 31-12-2024ರ ವರೆಗೆ ವಿಸ್ತರಿಸಿದೆ.
ಎಲ್ಲಾ ನೋಂದಾಯಿತ ಕಟ್ಟಡ ಕಾರ್ಮಿಕರು ಇ-ಕಾರ್ಡ್ https://kbocwwb. karnataka.gov.in 30ជ ជ ខ្ញុំ (Registration Number) ಮತ್ತು ಉಲ್ಲೇಖ ಸಂಖ್ಯೆ (Reference Number) ಯನ್ನು ನಮೂದಿಸಿ ಕಡ್ಡಾಯವಾಗಿ ದಿನಾಂಕ: 31-12-2024 ರೊಳಗೆ ಆಧಾರ್ ಕಾರ್ಡ್ ಸಂಖ್ಯೆಯನ್ನು ಲಿಂಕ್ ಮಾಡಲು ಸೂಚಿಸಿದೆ. ಅಲ್ಲದೇ ಎಲ್ಲಾ ನೋಂದಾಯಿತ ಕಟ್ಟಡ ಕಾರ್ಮಿಕರು ತಮ್ಮ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಯೊಂದಿಗೆ ಜೋಡಣೆ ಮಾಡಿ ಎನ್.ಪಿ.ಸಿ.ಐ ಮ್ಯಾಪಿಂಗ್ (NPCI Mapping) ಮಾಡಿಸುವುದು ಕಡ್ಡಾಯವಾಗಿರುತ್ತದೆ.
ಈ ಹಿಂದೆ ಫ್ರೀ ಮೆಟ್ರಿಕ್ (1 ರಿಂದ 10ನೇ ತರಗತಿ) ತರಗತಿಗಳಲ್ಲಿ ಶೈಕ್ಷಣಿಕ ಧನಸಹಾಯಕ್ಕಾಗಿ ಎಸ್.ಎಸ್.ಪಿ ತಂತ್ರಾಂಶದ ಮೂಲಕ ಕರ್ನಾಟಕ ಸರ್ಕಾರದ ಯಾವುದಾದರೂ ಇಲಾಖೆಗೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ವಿದ್ಯಾರ್ಥಿವೇತನ ಪಡೆದಿದ್ದಲ್ಲಿ ಅಂತಹ ವಿದ್ಯಾರ್ಥಿಗಳ ಅರ್ಜಿಗಳನ್ನು ಮುಂದಿನ ವರ್ಷ ಸ್ವಯಂ ಚಾಲಿತ ನವೀಕರಣದ (Auto renewal) ಮೂಲಕ ಎಸ್.ಎಸ್.ಪಿ ತಂತ್ರಾಂಶದಲ್ಲಿ ಸ್ವೀಕರಿಸುವುದರಿಂದ ಪುನಃ ಪ್ರಿ ಮೆಟ್ರಿಕ್ ಶೈಕ್ಷಣಿಕ ಧನಸಹಾಯಕ್ಕಾಗಿ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.