ಬೆಂಗಳೂರು : ನೋಂದಾಯಿತ ಕಾರ್ಮಿಕರ ಇಬ್ಬರು ಮಕ್ಕಳ ವಿದ್ಯಾಭ್ಯಾಸಕ್ಕೆ ಮಂಡಳಿಯು ಕಲಿಕೆ ಭಾಗ್ಯ ಯೋಜನೆಯಡಿ ವಿದ್ಯಾರ್ಥಿ ವೇತನವನ್ನು ನೀಡುತ್ತದೆ. ಫಲಾನುಭವಿಯು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವ ಮೂಲಕ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು.
ಮಂಡಳಿಯು ನೋಂದಾಯಿತ ಕಾರ್ಮಿಕರ ಇಬ್ಬರು ಮಕ್ಕಳ ವಿದ್ಯಾಭ್ಯಾಸಕ್ಕೆ ಕಲಿಕೆ ಭಾಗ್ಯ ಯೋಜನೆಯಡಿ ವಿದ್ಯಾರ್ಥಿ ವೇತನವನ್ನು ನೀಡುತ್ತದೆ
ಅರ್ಹತೆ ಮತ್ತು ಮಾನದಂಡಗಳು
* ವಿದ್ಯಾರ್ಥಿಯ ತಂದೆ ಅಥವಾ ತಾಯಿ ಮ೦ಡಳಿಯಲ್ಲಿ ನೋಂದಾಯಿತ ಕಾರ್ಮಿಕರಾಗಿರಬೇಕು
* ವಿದ್ಯಾರ್ಥಿಯು ಹಿಂದಿನ ತರಗತಿಯಲ್ಲಿ ಉತ್ತೀರ್ಣರಾಗಿ ಮುಂದಿನ ತರಗತಿಗೆ ದಾಖಲಾಗಿರಬೇಕು
* ನೋ೦ದಾಯಿತ ಕಾರ್ಮಿಕರ ಇಬ್ಬರು ಮಕ್ಕಳು ಮಾತ್ರ ವಿದ್ಯಾರ್ಥಿ ವೇತನವನ್ನು ಪಡೆಯಬಹುದು
* ಇಬ್ಬರು ಪೋಷಕರು ನೋಂದಾಯಿತ ಕಾರ್ಮಿಕರರಾಗಿದ್ದಲ್ಲಿ ಅವರ ಮಕ್ಕಳು ಒಂದು ಬಾರಿ ಮಾತ್ರ ಈ ಪ್ರಯೋಜನವನ್ನು ಪಡೆದುಕೊಳ್ಳಬಹುದು
ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಸಹಾಯವಾಣಿ 155214 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.