ಹೊಸಪೇಟೆ : ನಾನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ್ರೂ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಮುಂದುವರೆಯುತ್ತವೆ ಎಂದ ಸೆಂದು ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದಾರೆ.

ವಿಜಯನಗರ ಜಿಲ್ಲಾ ಕೆಡಿಪಿ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಯಾರೇ ಮುಖ್ಯಮಂತ್ರಿಯಾದ್ರೂ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ. ಪಂಚ ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತವೆ ಎಂದು ತಿಳಿಸಿದ್ದಾರೆ.

ನಾನು ಬದಲಾವಣೆಯಾದ್ರೂ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಮುಂದುವರೆಯುತ್ತವೆ. ಯಾರೇ ಮುಖ್ಯಮಂತ್ರಿ ಆದ್ರೂ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಶಕ್ತಿ ಯೋಜನೆ, ಗೃಹಜ್ಯೋತಿ, ಗೃಹಲಕ್ಷ್ಮಿ, ಯುವನಿಧಿ ಯೋಜನೆಗಳು ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Share.
Exit mobile version