ಬೆಂಗಳೂರು: ಕೇಂದ್ರ ಸರ್ಕಾರದಿಂದ ಕರ್ನಾಟಕದ ಕೊಬ್ಬರಿ ಬೆಳೆಗಾರರಿಗೆ ಸಿಹಿಸುದ್ದಿಯೊಂದು ಹೊರಬಿದ್ದಿದೆ. ಅದೇ ಹೆಚ್ಚುವರಿಯಾಗಿ 7500 ಮೆಟ್ರಿಕ್ ಟನ್ ಕೊಬ್ಬರಿ ಖರೀದಿಸೋದಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.
ಈ ಬಗ್ಗೆ ಮಾಹಿತಿಯನ್ನು ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ವಿ.ಸೋಮಣ್ಣ ಹಂಚಿಕೊಂಡಿದ್ದು, ಕರ್ನಾಟಕದಿಂದ ಹೆಚ್ಚುವರಿ ಕೊಬ್ಬರಿಯನ್ನು ಖರೀದಿಸುವಂತೆ ಕೇಂದ್ರ ಕೃಷಿ ಇಲಾಖೆ ಸಚಿವರನ್ನು ಭೇಟಿಯಾಗಿ ಮನವಿ ಮಾಡಲಾಗಿ್ತತು. ಇದಕ್ಕೆ ಅವರು ಒಪ್ಪಿಗೆ ಸೂಚಿಸಿದ್ದಾರೆ ಅಂತ ತಿಳಿಸಿದ್ದಾರೆ.
ಈ ವರ್ಷ 2999 ಮೆಟ್ರಿಕ್ ಟನ್ ಕೊಬ್ಬರಿ ಖರೀದಿ ಮಾಡಲಾಗಿದೆ. ಹೆಚ್ಚುವರಿಯಾಗಿ ಕೊಬ್ಬರಿ ಖರೀದಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. 10,000 ಮೆಟ್ರಿಕ್ ಟನ್ ಖರೀದಿಸುವಂತೆ ಮನವಿ ಮಾಡಲಾಗಿತ್ತು. ಈ ಮನವಿಗೆ ಕೇಂದ್ರ ಕೃಷಿ ಸಚಿವರು ಹೆಚ್ಚುವರಿ ಕೊಬ್ಬರಿ ಖರೀದಿಗೆ ಒಪ್ಪಿಗೆ ಸೂಚಿಸಿದ್ದಾರೆ ಎಂದಿದ್ದಾರೆ.
ಕರ್ನಾಟಕದಿಂದ ಹೆಚ್ಚುವರಿಯಾಗಿ 7500 ಮೆಟ್ರಿಕ್ ಟನ್ ಕೊಬ್ಬರಿ ಖರೀದಿಸಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ. ಇದರಿಂದ ಮಂಡ್ಯ, ಹಾಸನ, ತುಮಕೂರು, ದಕ್ಷಿಣ ಕನ್ನಡ ಹಾಗೂ ರಾಮನಗರ ಜಿಲ್ಲೆಯ ಕೊಬ್ಬರಿ ಬೆಳೆಗಾರರಿಗೆ ಅನುಕೂಲವಾಗಲಿದೆ. ಒಟ್ಟು 10,500 ಮೆಟ್ರಿಕ್ ಟನ್ ಕೊಬ್ಬರಿಯನ್ನು ಕೇಂದ್ರ ಸರ್ಕಾರ ಖರೀದಿಸಲಿದೆ ಅಂತ ಮಾಹಿತಿಯನ್ನು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹಂಚಿಕೊಂಡಿದ್ದಾರೆ.
ಭ್ರಷ್ಟ ‘ಕಾಂಗ್ರೆಸ್ ಸರ್ಕಾರ’ ಕಿತ್ತೊಗೆಯಲು, ಸಿಎಂ ರಾಜೀನಾಮೆ ಕೊಡುವವರೆಗೆ BJP ಹೋರಾಟ: ಬಿ.ವೈ.ವಿಜಯೇಂದ್ರ
BREAKING: ಬೆಂಗಳೂರಲ್ಲಿ ಠಾಣೆಯಲ್ಲಿ ‘ಪೊಲೀಸ್ ಸಿಬ್ಬಂದಿ’ಗಳ ನಡುವೆ ಗಲಾಟೆ: ‘ASI’ ಮೇಲೆ ‘HC’ ಹಲ್ಲೆಗೆ ಯತ್ನ.?