ಬೆಂಗಳೂರು : ರಾಜ್ಯ ತೆಂಗು ಬೆಳಗಾರರ ಹಿತದೃಷ್ಟಿಯಿಂದ ಬೆಂಬಲ ಬೆಲೆ ಯೋಜನೆಯಡಿ ಕೊಬ್ಬರಿ ಖರೀದಿ ಪ್ರಕ್ರಿಯೆಯನ್ನು ಬುಧವಾರದಿಂದ ಪುನಾರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ.
ಈ ಬಗ್ಗೆ ಮಂಗಳವಾರ ಸದಸ್ಯರಾದ ಕೆ.ಎ ತಿಪ್ಪೇಸ್ವಾಮಿ, ಟಿ.ಎ ಶರವಣ ಸೇರಿದಂತೆ ಇತರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಶಿವಾನಂದ ಎಸ್. ಪಾಟೀಲ್ ಬುಧವಾರದಿಂದ ಕೊಬ್ಬರಿ ಖರೀದಿ ಮತ್ತು ನೋಂದಣಿ ಪ್ರಾರಂಭವಾಗಲಿದೆ. ಹಾಸನ ಜಿಲ್ಲೆಯಲ್ಲಿ ತೆಂಗು ಬೆಳೆ ವಿಸ್ತೀರ್ಣ ಮತ್ತು ಬೆಳೆಗಾರರ ಸಂಖ್ಯೆ ಕಡಿಮೆ ಇದ್ದರೂ, ಹೆಚ್ಚು ಮಂದಿ ಹೆಸರು ನೋಂದಾಯಿಸಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಜಾಸ್ತಿಯಿದ್ದರೂ, ಕಡಿಮೆ ರೈತರು ನೋಂದಾಯಿಸಿಕೊಂಡಿದ್ದಾರೆ. ಹಾಗಾಗಿ, ಅಕ್ರಮ ನೋಂದಣಿಯ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ತಿಳಿಸಿದರು. ಇನ್ನೂ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದರು.
BREAKING:ಭಾರತದ ಮೊದಲ ‘ಎಐ ಭಾಷಾ ಮಾದರಿ’ ‘ಹನೂಮಾನ್’ ಭಾರತ್‌ಜಿಪಿಟಿ ಮುಂದಿನ ತಿಂಗಳು ಪ್ರಾರಂಭ
ರಾಜ್ಯದ ಜನತೆಗೆ ಮತ್ತೊಂದು ಗುಡ್‌ನ್ಯೂಸ್: ನಿಮ್ಮ ಮನೆ ಬಾಗಿಲಿಗೆ ಬರಲಿದೆ ಈ ಸೇವೆ!