ಶಿವಮೊಗ್ಗ: ಸಾಗರ ತಾಲ್ಲೂಕಿನ ಕಟ್ಟ ನಿರ್ಮಾಣ ಸೇರಿದಂತೆ ಇತರೆ ಕಾರ್ಮಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಸೇಫ್ಟಿ ಕಿಟ್ ವಿತರಣೆ ಮಾಡಲು ಅರ್ಹ ಫಲಾನುಭವಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ಕುರಿತು ಕಾರ್ಮಿಕ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸಾಗರ ತಾಲ್ಲೂಕಿನಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸದಲ್ಲಿ ತೊಡಗಿರೋರು, ಕಾರ್ಪೆಂಟರ್, ಪೇಂಟರ್, ಎಲೆಕ್ಟ್ರೀಷಿಯನ್, ವೇಲ್ಡರ್, ಪ್ಲಂಬರ್, ನೋಂದಾಯಿತ ಫಲಾನುಭವಿಗಳಿಗೆ ಸೇಫ್ಟಿ ಕಿಟ್ ವಿತರಣೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಎಂದಿದೆ.
ಅರ್ಹ ಫಲಾನುಭವಿಗಳು ತಮ್ಮ ಕಾರ್ಮಿಕ ಕಾರ್ಡ್ ಚೆರಾಕ್ಸ್ ಪ್ರತಿ, ಆಧಾರ್ ಕಾರ್ಡ್ ಪ್ರತಿಯನ್ನು ಸಾಗರದ ಸೊರಬ ರಸ್ತೆಯಲ್ಲಿರುವಂತ ಕಾರ್ಮಿಕ ಇಲಾಖೆಯ ಕಾರ್ಮಿಕ ನಿರೀಕ್ಷಕರ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸುವಂತೆ ತಿಳಿಸಿದೆ.
ಸೇಫ್ಟಿ ಕಿಟ್ ವಿತರಣೆಗಾಗಿ ಅರ್ಜಿ ಸಲ್ಲಿಕೆಯು ನಾಳೆಯಿಂದ ಆರಂಭಗೊಳ್ಳಲಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 03-11-2025 ಆಗಿರುತ್ತದೆ. ಫಲಾನುಭವಿಗಳು ಕಚೇರಿಗೆ ಸ್ವತಹ ಭೇಟಿ ನೀಡಿ, ಅರ್ಜಿ ಸಲ್ಲಿಸುವಂತೆ ಕೋರಿದೆ.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು
ಶಿವಮೊಗ್ಗ: ಸೊರಬದ ಕಾನಹಳ್ಳಿಯ ಅಂಗನವಾಡಿ ಕಾರ್ಯಕರ್ತೆ ಗೋಪಾಲಮ್ಮ ನಿವೃತ್ತಿ, ಆತ್ಮೀಯವಾಗಿ ಬೀಳ್ಕೊಡುಗೆ
ಸಾರ್ವಜನಿಕರೇ ಗಮನಿಸಿ : ನವೆಂಬರ್ 1 ರಿಂದ `ಆಧಾರ್ ಕಾರ್ಡ್ ಅಪ್ ಡೇಟ್’ ನಿಯಮಗಳಲ್ಲಿ ಮಹತ್ವದ ಬದಲಾವಣೆ








