ಬೆಂಗಳೂರು: ಕಟ್ಟಡ ಕಾರ್ಮಿಕರಿಗೆ ಸೇರಿದಂತ ಅರ್ಜಿ ಸಲ್ಲಿಕೆ ಸೇರಿದಂತೆ ಸೌಲಭ್ಯಗಳಿಗಾಗಿ ಕಾರ್ಮಿಕ ಇಲಾಖೆಗೆ ಅಲೆದಾಡಬೇಕಿತ್ತು. ಶೀಘ್ರವೇ ಇದಕ್ಕೆ ಮುಕ್ತಿ ಹಾಡಲಿದ್ದು, ನಿಮಗಾಗಿ ಅಂಬೇಡ್ಕರ್ ಸೇವಾ ಕೇಂದ್ರವನ್ನು ರಾಜ್ಯ ಸರ್ಕಾರ ಆರಂಭಿಸಲಿದೆ. ಈ ಮೂಲಕ ಕಟ್ಟಡ ಕಾರ್ಮಿಕರಿಗೆ ಗುಡ್ ನ್ಯೂಸ್ ನೀಡಲಾಗಿದೆ.
ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಕಾರ್ಮಿಕರ ನೋಂದಣಿ, ಫಲಾನುಭವಿಗಳ ಆಯ್ಕೆ, ನೈಜತೆ ಪರಿಶೀಲನೆ ಮತ್ತಿತರ ಕೆಲಸಗಳನ್ನು ನಿರ್ವಹಿಸಲು ಪ್ರತ್ಯೇಕವಾಗಿ ʼಅಂಬೇಡ್ಕರ್ ಸೇವಾ ಕೇಂದ್ರʼವನ್ನು ಅಸ್ತಿತ್ವಕ್ಕೆ ತರಲು ನಿರ್ಧರಿಸಲಾಗಿದೆ ಎಂದಿದ್ದಾರೆ.
ಕಾರ್ಮಿಕ ಸಚಿವ ಸಂತೋಷ್ ಲಾಡ್ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಮಂಡಳಿಯ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. “ರಾಜ್ಯದಲ್ಲಿ 58 ಲಕ್ಷ ಮಂದಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಕಾರ್ಮಿಕರು ಎಂಬುದಾಗಿ ನೋಂದಣಿ ಮಾಡಿಕೊಂಡಿದ್ದರು. ನೈಜತೆ ಪರಿಶೀಲನೆ ಬಳಿಕ 20 ಲಕ್ಷ ಮಂದಿಯ ನೋಂದಣಿ ರದ್ದುಗೊಳಿಸಲಾಗಿದೆ. ಉಳಿದಿರುವ 38 ಲಕ್ಷ ಮಂದಿಯ ನೈಜತೆ ಪರಿಶೀಲನೆಯನ್ನೂ ಅಂಬೇಡ್ಕರ್ ಸೇವಾ ಕೇಂದ್ರಗಳಿಗೆ ವಹಿಸಲು ತೀರ್ಮಾನಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಕಾರ್ಮಿಕರ ನೋಂದಣಿ, ಫಲಾನುಭವಿಗಳ ಆಯ್ಕೆ, ನೈಜತೆ ಪರಿಶೀಲನೆ ಮತ್ತಿತರ ಕೆಲಸಗಳನ್ನು ನಿರ್ವಹಿಸಲು ಪ್ರತ್ಯೇಕವಾಗಿ ʼಅಂಬೇಡ್ಕರ್ ಸೇವಾ ಕೇಂದ್ರʼವನ್ನು ಅಸ್ತಿತ್ವಕ್ಕೆ ತರಲು ನಿರ್ಧರಿಸಲಾಗಿದೆ.
ಕಾರ್ಮಿಕ ಸಚಿವ ಸಂತೋಷ್ ಲಾಡ್ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಮಂಡಳಿಯ ಸಭೆಯಲ್ಲಿ… pic.twitter.com/j372VQUDkz
— DIPR Karnataka (@KarnatakaVarthe) August 8, 2024
BIG NEWS: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಈ ಗಂಭೀರ ಆರೋಪ
RBI ನಿಂದ ಮಹತ್ವದ ತೀರ್ಮಾನ: ಈಗ ನಿಮ್ಮ ಚೆಕ್ ಅನ್ನು ಶೀಘ್ರದಲ್ಲೇ ಬ್ಯಾಂಕಿನಿಂದ ಕ್ಲೀಯರ್…!
ಶುಭ ದಿನ, ಗಳಿಗೆ, ನಕ್ಷೆತ್ರ ನೋಡಿ ಕುಮಾರಸ್ವಾಮಿ ಸಹೋದರನ ಆಸ್ತಿ ದಾಖಲೆ ಬಿಡುಗಡೆ: ಡಿಸಿಎಂ ಡಿ.ಕೆ ಶಿವಕುಮಾರ್