ಬೆಂಗಳೂರು: ರಾಜ್ಯ ಸರ್ಕಾರದಿಂದ ಕೊಬ್ಬರಿ ಬೆಳೆಗಾರರಿಗೆ ಸಿಹಿಸುದ್ದಿ ಎನ್ನುವಂತೆ 2024ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ಉಂಡೆ ಕೊಬ್ಬರಿಗೆ ಪ್ರೋತ್ಸಾಹಧನ ಹೆಚ್ಚಳ ಮಾಡಿ ಆದೇಶಿಸಿದೆ.
ಈ ಕುರಿತಂತೆ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಿದ್ದು, 2024ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರವು ನಿಗದಿಪಡಿಸಿರುವ ಎಫ್.ಎ.ಕ್ಯೂ ಗುಣಮಟ್ಟದ ಉಂಡೆ ಕೊಬ್ಬರಿಗೆ ಪ್ರತಿ ಕ್ವಿಂಟಾಲ್ಗೆ ರೂ.12,KKI (ಹನ್ನೆರಡು ಸಾವಿರ ರೂಪಾಯಿಗಳು ಮಾತ್ರ) ರಂತ ಗರಿಷ್ಠ 62,500 ಮೆಟ್ರಿಕ್ ಟನ್ ಉಂಡ ಕೊಬ್ಬರಿಯನ್ನು ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನಗಳ ಮಾರ್ಗಸೂಚಿಗಳನ್ವಯ ತುಮಕೂರು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ದಕ್ಷಿಣ ಕನ್ನಡ, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳ ರೈತರಿಂದ ಖರೀದಿಸಲು ಅನುಮತಿ ನೀಡಿ ಆದೇಶಿಸಿದೆ.
ಮೇಲೆ ಓದಲಾದ ಕ್ರಮ ಸಂಖ್ಯೆ (2)ರ, ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ, ಬೆಂಗಳೂರು ಇವರ ಏಕ ಕಡತದ ಪ್ರಸ್ತಾವನೆಯಲ್ಲಿ, 2024ನೇ ಸಾಲಿನ ಉಂಡ ಕೊಬ್ಬರಿ ಖರೀದಿ ಪ್ರಕ್ರಿಯೆ ಕೈಗೊಂಡ ನಂತರವು ರಾಜ್ಯದ ಮಾರುಕಟ್ಟೆಗಳಲ್ಲಿ ಕೊಬ್ಬರಿ ಧಾರಣೆಯು ಸುಧಾರಣೆ ಆಗದ ಹಿನ್ನೆಲೆಯಲ್ಲಿ ದಿನಾಂಕ:04,12.2023ರಿಂದ 15.12.2022ರವರೆಗೆ ಜರುಗಿದ ಅಧಿವೇಶನದ ಸಂದರ್ಭದಲ್ಲಿ ತಂಗು ಬೆಳೆಯುವ ಜಿಲ್ಲೆ ವ್ಯಾಪ್ತಿಯ ಮಾನ್ಯ ವಿಧಾನಸಭಾ ಸದಸ್ಯರು 59ನೇ ನಿಯಮದ ಮೇರೆಗೆ ಶೂನ್ಯ ವೇಳೆಯ ಸೂಚನೆಗಳಡಿಯಲ್ಲಿ ಹಾಗೂ ಮತ್ತು ಇತರ ವಿಧಾನ ಸಭಾ ಸದಸ್ಯರು ಸದನದಲ್ಲಿ ಪುಸ್ತಾಪಿಸಿರುವ ಸಂದರ್ಭದಲ್ಲಿ ಸನ್ಮಾನ್ಯ ಮುಖ್ಯ ಮಂತ್ರಿಯವರ ಮೌಖಿಕ ಅನುಮೋದನೆಯ ಮೇರೆಗೆ ಕನಿಷ್ಠ ಬೆಂಬಲ ಬೆಲೆಯ ಜೊತೆಗೆ ರಾಜ್ಯ ಸರ್ಕಾರದ ವತಿಯಿಂದ 2022- 23ನೇ ಸಾಲಿಗೆ ಘೋಷಿಸಲಾದ ರಾಜ್ಯ ಸರ್ಕಾರದ ಪ್ರೋತ್ಸಾಹಧನ ಪ್ರತಿ ಕ್ವಿಂಟಾಲ್ ಕೊಬ್ಬರಿಗೆ ರೂ.1,250/-ರ ಜೊತೆಗೆ ಪ್ರತಿ ಕ್ವಿಂಟಾಲಿಗೆ ರೂ.250/- ಸೇರಿ ಒಟ್ಟು ರೂ.1,500/- ರಂತೆ ಪ್ರೋತ್ಸಾಹಧನ ನೀಡಲು, ಮಾನ ಜವಳಿ, ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಸಚಿವರು. ಸದನದಲ್ಲಿ ಘೋಷಿಸಿರುವುದರಿಂದ, ಕೇಂದ್ರ ಸರ್ಕಾರವು ಘೋಷಿಸಿರುವ ಎಫ್.ಎ.ಕ್ಯೂ, ಗುಣಮಟ್ಟದ ಉಂಡ ಕೊಬ್ಬರಿ ಪ್ರತಿ ಕ್ವಿಂಟಾಲಿಗೆ ರೂ.12,000/- ಬೆಂಬಲ ಬೆಲೆಯ ಜೊತೆಗೆ ರಾಜ್ಯ ಸರ್ಕಾರದ ವತಿಯಿಂದ 2022-23ನೇ ಸಾಲಿಗೆ ಘೋಷಿಸಲಾದ ರಾಜ್ಯ ಸರ್ಕಾರದ ಪ್ರೋತ್ಸಾಹಧನ ಪ್ರತಿ ಕ್ವಿಂಟಾಲ್ ಕೊಬ್ಬರಿಗೆ ರೂ.1,250/-ರ ಜೊತೆಗೆ ಪ್ರತಿ ಕ್ವಿಂಟಾಲಿಗೆ ರೂ.250/- ಸೇರಿ ಒಟ್ಟು ರೂ.1.500/- ರಂತೆ ಕೇಂದ್ರ ಸರ್ಕಾರವು ನೀಡಿರುವ ಗರಿಷ್ಕ ಪುಮಾಣ 62,500 ಮೆಟ್ರಿಕ್ ಟನ್ ಕೊಬ್ಬರಿಗೆ (ಅಂದಾಜು ರೂ.93,75 ಕೋಟಿಗಳ ಪ್ರೋತ್ಸಾಹಧನ) ಪ್ರೋತ್ಸಾಹಧನ ನೀಡುವ ಕುರಿತು ಆದೇಶ ಹೊರಡಿಸುವಂತೆ ಕೋರಲಾಗಿದೆ.
ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ ಇವರ ಏಕ ಕಡತದ ಪ್ರಸ್ತಾವನೆಯನ್ನು ಪರಿಶೀಲಿಸಿದ ಸರ್ಕಾರವು, 2022-23ನೇ ಸಾಲಿಗೆ ಘೋಷಿಸಲಾದ ರಾಜ್ಯ ಸರ್ಕಾರದ ಪ್ರೋತ್ಸಾಹಧನ ಪ್ರತಿ ಕ್ವಿಂಟಾಲ್ ಕೊಬ್ಬರಿಗೆ ರೂ.1,250/-ರ ಜೊತೆಗೆ ಪ್ರತಿ ಕ್ವಿಂಟಾಲಿಗೆ ರೂ.250/- ಸೇರಿ ಒಟ್ಟು ರೂ.1,500/-ಗಳ (ಒಂದು ಸಾವಿರದ ಐದು ನೂರು ರೂಪಾಯಿಗಳು ಮಾತ್ರು ಗಳ ಪ್ರೋತ್ಸಾಹ ಧನ ನೀಡಲು ಹಾಗೂ ಇದಕ, ಅವಶ್ಯವಿರುವ ರೂ.93,75 ಕೋಟಿಗಳ ಅನುದಾನವನ್ನು ಆವರ್ತ ನಿಧಿಯಲ್ಲಿ ಲಭ್ಯವಿರುವ ಮೊತ್ತದಿಂದ ಬಿಡುಗಡೆ ಮಾಡಲುನಿರ್ಧರಿಸಿದೆ. ಅದರಂತೆ ಈ ಆದೇಶ,
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, 2024ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಖರೀದಿಸಲಾಗಿರುವ ಎಫ್.ಎ.ಕ್ಕೂ ಗುಣಮಟ್ಟದ ಕೊಬ್ಬರಿಗೆ, 2022-23ನೇ ಸಾಲಿಗೆ ಘೋಷಿಸಲಾದ ರಾಜ್ಯ ಸರ್ಕಾರದ ಪ್ರೋತ್ಸಾಹಧನ ಪತಿ ಕ್ವಿಂಟಾಲ್ ಕೊಬ್ಬರಿಗೆ ರೂ.1,250/-ರ ಜೊತೆಗೆ 2024ನೇ ಸಾಲಿಗೆ ಪ್ರತಿ ಕ್ವಿಂಟಾಲಿಗೆ ರೂ.250/- ಸೇರಿ ಒಟ್ಟು ರೂ.1,500/-ಗಳ (ಒಂದು ಸಾವಿರದ ಐದು ನೂರು ರೂಪಾಯಿಗಳು ಮಾತು ಗಳ, ಪ್ರೋತ್ಸಾಹ ಧನವನ್ನು ರಾಜ್ಯ ಸರ್ಕಾರದ ವತಿಯಿಂದ ನೀಡಲು ಹಾಗೂ ಇದಕೆ, ಅವಶ್ಯವಿರುವ ರೂ.93,75 ಕೋಟಿಗಳ ಅನುದಾನವನ್ನು ಆವರ್ತ ನಿಧಿಯಲ್ಲಿ ಲಭ್ಯವಿರುವ ಮೊತ್ತದಿಂದ ವರಿಸಲು ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ, ಬೆಂಗಳೂರು ಇವರಿಗೆ ಮಂಜೂರಾತಿ ನೀಡಿ ಆದೇಶಿಸಿದೆ.
ಈ ಆದೇಶವನ್ನು ಆರ್ಥಿಕ ಇಲಾಖೆಯ ಟಿಪ್ಪಣಿ ಸಂಖ್ಯೆ : 64 ವಜ್ರ-2/2023, ದಿನಾಂಕ:25.01.2024ರಂದು ನೀಡಿರುವ ಸಹಮತಿಯನ್ನಯ ಹೊರಡಿಸಲಾಗಿದೆ ಎಂದು ತಿಳಿಸಿದೆ.
‘ರಾಜ್ಯ ಸರ್ಕಾರ’ದಿಂದ 2028ರ ವೇಳೆಗೆ ’30 ಸಾವಿರ ಉದ್ಯೋಗ’ ಸೃಷ್ಟಿ – ಸಿಎಂ ಸಿದ್ಧರಾಮಯ್ಯ
BREAKING: ಮಂಡ್ಯದಲ್ಲಿ ಉದ್ರಿಕ್ತರಿಂದ ಕಲ್ಲು ತೂರಾಟ: ಸಿಎಂ ಸಿದ್ಧರಾಮಯ್ಯ, ಶಾಸಕ ಗಣಿಗ ರವಿ ಬ್ಯಾನರ್ ಹರಿದು ಆಕ್ರೋಶ