ಬೆಂಗಳೂರು: 2024ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್ಎಕ್ಯೂ ಗುಣಮಟ್ಟದ ಉಂಡೆ ಕೊಬ್ಬರಿ ಖರೀದಿಸಲು ರಾಜ್ಯ ಸರ್ಕಾರ ಅನುಮತಿಸಿದೆ. ಈ ಮೂಲಕ ರಾಜ್ಯದ ಕೊಬ್ಬರಿ ಬೆಳೆಗಾರರಿಗೆ ಗುಡ್ ನ್ಯೂಸ್ ನೀಡಿದೆ.
ಈ ಕುರಿತಂತೆ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಿದ್ದು, 2024ನೇ ಸಾಲಿನಲ್ಲಿ ರಾಜ್ಯದಲ್ಲಿ ತೆಂಗು ಬೆಳೆಯನ್ನು 6,50 ಹಕ್ಕೇ ವುದೇಶದಲ್ಲಿ ತುಮಕೂರು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ದಕ್ಷಿಣ ಕನ್ನಡ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಬೆಳೆಯಲಾಗುತ್ತಿದ್ದು, 60,840 ಲಕ್ಷ ತೆಂಗಿನ ಕಾಯಿ ಉತ್ಪಾದನೆಯಾಗುವುದೆಂದು ಅಂದಾಜಿಸಲಾಗಿದೆ. ವಾರ್ಷಿಕ ಒಟ್ಟು ಉತ್ಪಾದನೆಯಲ್ಲಿ ಅಂದಾಜು 2.50 ಲಕ್ಷ ಮೆಟ್ರಿಕ್ ಟನ್ ಉಂಡೆ ಕೊಬ್ಬರಿ ಉತ್ಪಾದನೆಯಾಗುವ ನಿರೀಕ್ಷೆಯಿರುತ್ತದೆ, ಕೇಂದ್ರ ಸರ್ಕಾರವು 2022-23ನೇ ಸಾಲಿಗೆ ಪ್ರತಿ ಕ್ವಿಂಟಾಲ್ ಉಂಡ ಕೊಬ್ಬರಿಗೆ ಬೆಂಬಲ ಬೆಲೆ ರೂ.11,750/-ಗಳನ್ನು ಘೋಷಿಸಿರುತ್ತದೆ. ಪ್ರಸ್ತುತ ಉಂಡ ಕೊಬ್ಬರಿ ಧಾರಣೆಯು ಪ್ರಮುಖ ಮಾರುಕಟ್ಟೆಗಳಲ್ಲಿ ಪ್ರತಿ ಕ್ವಿಂಟಾಲ್‌ಗೆ ರೂ.6,900/- ರಿಂದ ರೂ.9,500/-ಗಳ ಧಾರಣೆಯಲ್ಲಿ ಮಾರಾಟವಾಗುತ್ತಿದ್ದು, ತಂಗು ಬಹು ವಾರ್ಷಿಕ ಬೆಳೆಯಾಗಿದ್ದು, ವಾರ್ಷಿಕ ಬೆಳೆಯಾಗಿರುವುದರಿಂದ ಕೊಬ್ಬರಿ ಉತ್ಪಾದನೆಯು ವರ್ಷವಿಡಿ ನಡೆಯುವ ಪ್ರಕ್ರಿಯೆಯಾಗಿದ್ದು, 2024ನೇ ಸಾಲಿಗೆ ಜನವರಿ ಮಾಹೆಯಲ್ಲಿ ಘೋಷಿಸುವ ಬೆಂಬಲ ಬೆಲೆ ದರದಂತೆ ವರ್ಷಪೂರ್ತಿ ಖರೀದಿ ಪ್ರಕ್ರಿಯೆ ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಕೋರಿರುತ್ತಾರೆ.
ಮೇಲೆ ಓದಲಾದ ಕ್ರಮ ಸಂಖ್ಯೆ (2)ರ ಪತ್ರದಲ್ಲಿ, 2024ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ರಾಜ್ಯದಲ್ಲಿ ಉಂಡೆ ಕೊಬ್ಬರಿ ಖರೀದಿಸಲು ಅನುಮತಿ ನೀಡುವಂತೆ ಕೇಂದ್ರ ಸರ್ಕಾರವನ್ನು ಕೋರಲಾಗಿತ್ತು ಎಂದಿದ್ದಾರೆ.
ಮೇಲೆ ಓದಲಾದ ಕ್ರಮ ಸಂಖ್ಯೆ(3)ರ ಪತ್ರದಲ್ಲಿ, ಕೇಂದ್ರ ಸರ್ಕಾರವು 2024ನೇ ಹಂಗಾಮಿನಲ್ಲಿ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಗರಿಷ್ಠ 62,500 ಮೆಟ್ರಿಕ್ ಟನ್ ಉಂಡ ಕೊಬ್ಬರಿಯನ್ನು ಬೆಂಬಲ ಬೆಲೆ ಯೋಜನೆಯ ಮಾರ್ಗಸೂಚಿಗಳನುಸಾರ ರಾಜ್ಯ ಸರ್ಕಾರವು 03 ತಿಂಗಳ ಅವಧಿಯಲ್ಲಿ ಖರೀದಿಸಲು ಅನುಮತಿ ನೀಡಿರುತ್ತದೆ.
ಮೇಲ್ಕಂಡ ಅಂಶಗಳ ಹಿನ್ನೆಲೆಯಲ್ಲಿ, ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿದ ಸರ್ಕಾರವು 2024ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಉಂಡೆ ಕೊಬ್ಬರಿಯನ್ನು ರಾಜ್ಯದಲ್ಲಿ ಖರೀದಿಸಲು ತೀರ್ಮಾನಿಸಿದೆ ಎಂದಿದ್ದಾರೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, 2024ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರವು ನಿಗದಿಪಡಿಸಿರುವ ಎಫ್.ಎ.ಕ್ಯೂ. ಗುಣಮಟ್ಟದ ಉಂಡೆ ಕೊಬ್ಬರಿಗೆ ಪ್ರತಿ ಕ್ವಿಂಟಾಲ್‌ಗೆ ರೂ.12,000/- (ಹನ್ನೆರಡು ಸಾವಿರ ರೂಪಾಯಿಗಳು ಮಾತ್ರ ರಂತೆ ಗರಿಷ್ಠ 62,500 ಮೆಟ್ರಿಕ್ ಟನ್ ಉಂಡ ಕೊಬ್ಬರಿಯನ್ನು ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನಗಳ ಮಾರ್ಗಸೂಚಿಗಳನ್ವಯ ತುಮಕೂರು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ದಕ್ಷಿಣ ಕನ್ನಡ ಮತ್ತು ಚಾಮರಾಜನಗರ ಜಿಲ್ಲೆಗಳ ರೈತರಿಂದ ಖರೀದಿಸಲು ಈ ಕೆಳಕಂಡ ಷರತ್ತುಗಳಿಗೊಳಪಟ್ಟು ಅನುಮತಿ ನೀಡಿ ಆದೇಶಿಸಿದ್ದಾರೆ.
1) ಉಂಡೆ ಕೊಬ್ಬರಿಯನ್ನು ಖರೀದಿಸಲು ನಾಥಡ್ ಸಂಖ್ಯೆಯನ್ನು ಕೇಂದ್ರ ಸರ್ಕಾರದ ಖರೀದಿ ಸಂಸ್ಥೆಯನ್ನಾಗಿ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ, ಬೆಂಗಳೂರು ಸಂಸ್ಥೆಯನ್ನು ರಾಜ್ಯದ ವತಿಯಿಂದ ಖರೀದಿ ಸಂಸ್ಥೆಯನ್ನಾಗಿ
ನೇಮಿಸಿದೆ.
2) ಈ ಆದೇಶ ಹೊರಡಿಸಿದ ದಿನಾಂಕದಿಂದ ಖರೀದಿ ಪ್ರಕ್ರಿಯೆಗೆ ನಿಯಮಾನುಸಾರ ಅವಶ್ಯವಿರುವ ಪ್ರಾಯಗಳನ್ನು ಜಿಲ್ಲಾಡಳಿತ ಹಾಗೂ ಖರೀದಿ ಏಜನ್ನಿಯು ಪೂರ್ವಭಾವಿ ಸಿದ್ಧತೆ ಕೈಗೊಂಡು, ದಿನಾಂಕ:20.01.2024ರಿಂದ ಅನ್ವಯವಾಗುವಂತೆ 45 ದಿನಗಳವರೆಗೆ ರೈತರ ನೋಂದಣಿ ಹಾಗೂ ಖರೀದಿ ಅವಧಿಯನ್ನು 03 ತಿಂಗಳವರೆಗೆ ನಿಗದಿಪಡಿಸಿದೆ. ನೋಂದಣಿ ಕಾರ್ಯದ ಜೊತೆಗೆ ಖರೀದಿ ಪ್ರಕ್ರಿಯೆಯನ್ನು ಸಹ ಪ್ರಾರಂಭಿಸತಕ್ಕದ್ದು,
3) .ಪ್ರತಿ ಎಕರೆಗೆ 6 (ಆರು) ಕ್ವಿಂಟಾಲ್ ಗರಿಷ್ಟ ಪ್ರಮಾಣ ಹಾಗೂ ಪ್ರತಿ ರೈತರಿಂದ ಗರಿಷ್ಟ 20 (ಇಪ್ಪತ್ತು) ಕ್ವಿಂಟಾಲ್ ಖರೀದಿ ಪ್ರಮಾಣ ನಿಗದಿಪಡಿಸಿ ಖರೀದಿಸತಕ್ಕದ್ದು,
4) ಖರೀದಿ ಕೇಂದ್ರಗಳಲ್ಲಿ, ಉಂಡು ಕೊಬ್ಬರಿಯನ್ನು ಖರೀದಿಸುವ ಪೂರ್ವದಲ್ಲಿ ರೈತರ ನೋಂದಣಿಯನ್ನು NIC ಸಂಸ್ಥೆಯು ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ರಾಗಿ ಬೆಳೆಗಳ ಉತ್ಪನ್ನವನ್ನು ಖರೀದಿಸಲು ಸಿದಪಡಿಸಿರುವ ತಂತ್ರಾಂಶವನ್ನು ಸೂಕ್ತವಾಗಿ ಉನ್ನತೀಕರಿಸಿ ಉಂಡೆ ಕೊಬ್ಬರಿಯನ್ನು ಬೆಂಬಲ ಬೆಲೆ ಯೋಜನೆಯಡಿ ನೋಂದಾಯಿಸಲು ಬಳಸುವುದು. NIC ಸಂಸ್ಥೆಯು ಅಭಿವೃದ್ಧಿ ಪಡಿಸಿರುವ ಸದರಿ ನೋಂದಣಿ ತಂತ್ರಾಂಶವನ್ನು ಈಗಾಗಲೇ FRUITS ತಂತ್ರಾಂಶದೊಂದಿಗೆ ಸಂಯೋಜಿಸಲಾಗಿದೆ. FRUITS ದತ್ತಾಂಶದಲ್ಲಿ ರೈತರಿಗೆ ಸಂಬಂಧಿಸಿದ ವಿವರಗಳನ್ನು ಭೂಮಿ UIDAI ಮತ್ತು ಬೆಳೆ ಸಮೀಕ್ಷೆ ದತ್ತಾಂಶದೊಂದಿಗೆ ತಾಳೆ ಮಾಡಿ ವಿವರಗಳನ್ನು ಇಂದೀಕರಿಸಲಾಗಿದೆ. ಸದರಿ ವಿವರಗಳನ್ನು ಬೆಂಬಲ ಬೆಲೆ ಯೋಜನೆಯಡಿ ನೋಂದಣಿ ಮಾಡಲು ಸಿದ್ಧಪಡಿಸಿದ ತಂತ್ರಾಂಶಕ್ಕೆ ವಿದ್ಯುನ್ಮಾನ ರೀತಿಯಲ್ಲಿ ಒದಗಿಸಲಾಗುತ್ತದೆ. ಬೆಂಬಲ ಬೆಲೆ ಯೋಜನೆಯಡಿ ನೋಂದಣಿ ಮಾಡಿದ ನಂತರ NIC ತಂತ್ರಾಂಶದಿಂದ ನಾವೆಡ್ ಸಂಸ್ಥೆಯ ತಂತ್ರಾಂಶಕ್ಕೆ ರೈತರ ನೋಂದಣಿ ಮಾಹಿತಿಯನ್ನು ಒದಗಿಸಲಾಗುವುದು, ನಾಫೆಡ್ ಸಂಸ್ಥೆಯು ತಮ್ಮ ತಂತ್ರಾಂಶದಲ್ಲಿ ಈ ಮಾಹಿತಿಯನ್ನು ಬಳಸಿ ರೈತರಿಂದ ಉಂಡೆ ಕೊಬ್ಬರಿಯನ್ನು ಖರೀದಿ ಕೇಂದ್ರಗಳಿಂದ ಖರೀದಿಸುವುದು.
5), ಖರೀದಿ ಸಂಸ್ಥೆಗಳು ಗ್ರಾಮೀಣ ಭಾಗದ ರೈತರಿಗೆ ಅನುಕೂಲವಾಗುವಂತೆ ನಾನಡ್ ಮಾರ್ಗಸೂಚಿಯನ್ವಯ ಹಾಗೂ ತಾಂತ್ರಿಕ ಮತ್ತು ವೈಜ್ಞಾನಿಕ ಸೌಲಭ್ಯದಿಂದ ಕೂಡಿರುವ ಗೋದಾಮುಗಳನ್ನು ಹೊಂದಿರುವ ಸದೃಡ PACS/VSSN/FPO/TAPCMS ಸಂಸ್ಥೆಗಳ ಮುಖಾಂತರ ಹೊಂದಾಣಿಕೆ ಮಾಡಿಕೊಂಡು ಖರೀದಿ ಕೇಂದ್ರಗಳನ್ನು ತೆರೆಯುವುದು.
6) ರೈತ ನೋಂದಣಿ ಕಾರ್ಯಕ್ಕೆ ಸಿಬ್ಬಂದಿ ಕೊರತೆ ಕಂಡುಬಂದಲ್ಲಿ ಕಂದಾಯ ಇಲಾಖೆ ಸಿಬ್ಬಂದಿ ಹಾಗೂ ಮತ್ತಿತರ ಇಲಾಖೆಗಳಲ್ಲಿ ಲಭ್ಯವಿರುವ ಸಿಬ್ಬಂದಿಗಳನ್ನು ಬಳಸಿಕೊಳ್ಳುವುದು ಮತ್ತು ಅಂತಹ ಸಿಬ್ಬಂದಿಗಳಿಗೆ ಸೂಕ್ತ ಗ್ರೇಡಿಂಗ್ ತರಬೇತಿ ನೀಡಲು ಸಂಬಂಧಪಟ್ಟ ಖರೀದಿ ಸಂಸ್ಥೆಗಳು ಕ್ರಮವಹಿಸತಕ್ಕದ್ದು, 1000
7) ಖರೀದಿ, ಸಂಸ್ಥೆಗಳು, ಬೆಂಬಲ ಬೆಲೆ ಯೋಜನೆಯ ಮಾರ್ಗಸೂಚಿಗಳನ್ವಯ ಉಂಡ ಕೊಬ್ಬರಿಯ ಎಫ್.ಎ.ಕ್ಕೂ, ಗುಣಮಟ್ಟವನ್ನು ಖರೀದಿ ಕೇಂದ್ರದ ಹಂತದಲ್ಲಿಯೇ ಖಾತರಿಪಡಿಸಿಕೊಂಡು ಖರೀದಿ ಪ್ರಕ್ರಿಯೆ ಕೈಗೊಳ್ಳತಕ್ಕದ್ದು ಹಾಗೂ ಖರೀದಿಸಿದ ಉಂಡ ಕೊಬ್ಬರಿಯನ್ನು ಬೆಂಬಲ ಬೆಲೆ ಯೋಜನೆಯ ಮಾರ್ಗಸೂಚಿಗಳನ್ವಯ ವೈಜ್ಞಾನಿಕ ಗೋದಾಮುಗಳಲ್ಲಿ ದಾಸ್ತಾನು ಮಾಡತಕ್ಕದ್ದು,
8) ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿಯು ಸಂಬಂಧಪಟ್ಟ ಜಿಲ್ಲೆಯಲ್ಲಿ ಅವಶ್ಯಕತೆಗನುಗುಣವಾಗಿ ಖರೀದಿ ಕೇಂದ್ರಗಳ ಸಂಖ್ಯೆಯನ್ನು ತೆರೆಯಲು ನಾಫೆಡ್ ಸಂಸ್ಥೆಯೊಂದಿಗೆ ಸಮಾಲೋಚಿಸಿ ನಿರ್ಧರಿಸತಕ್ಕದ್ದು
9) ರೈತರ ಹೆಸರಿನ ಆಧಾರ್ ಸಂಖ್ಯೆ ಜೋಡಣೆಗೊಂಡ ಬ್ಯಾಂಕ್ ಖಾತೆಗೆ ಮಾತ್ರ ಉತ್ಪನ್ನದ ಮೌಲ್ಯವು DBT ಮೂಲಕ ಜಮಾ ಆಗುವಂತೆ ಪಾವತಿ ಮಾಡತಕ್ಕದ್ದು.
10) ರೈತರಿಂದ ಮಾತ್ರ ಉಂಡ ಕೊಬ್ಬರಿಯನ್ನು ಖರೀದಿಸತಕ್ಕದ್ದು ಮತ್ತು ಖರೀದಿ ಕೇಂದ್ರಗಳಲ್ಲಿ ರೈತರ ಹೆಸರಿನಲ್ಲಿ ವರ್ತಕರು ತರುವ ಉಂಡೆ ಕೊಬ್ಬರಿಯನ್ನು ಖರೀದಿಸದಂತೆ ಹಾಗೂ ಖರೀದಿ ಸಂಸ್ಥೆಗಳ ಯಾವುದೇ ರೀತಿಯ ದುರುಪಯೋಗ ಆಗದಂತೆ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸತಕ್ಕದ್ದು.
11) ಬೆಂಬಲ ಬೆಲೆ ಯೋಜನೆ ಮಾರ್ಗಸೂಚಿ: ಹಾಗೂ ಆವರ್ತನಿಧಿ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು.
12) ಈ ಯೋಜನೆಯಡಿಯಲ್ಲಿ, ಖರೀದಿಸುವ ಪ್ರಗತಿಯ ವಿವರವನ್ನು ಪ್ರತಿದಿನ ಸರ್ಕಾರಕ ಹಾಗೂ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಗೆ e-Mail ಮೂಲಕ ಸಲ್ಲಿಸತಕ್ಕದ್ದು.
13) ಜಿಲ್ಲಾಧಿಕಾರಿಗಳು ಉಂಡೆ ಕೊಬ್ಬರಿಯನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿಸುವ ಬಗ್ಗೆ ಕ್ರಮವಹಿಸತಕ್ಕದ್ದು.
14) ಕೋವಿಡ್-19 (ನೋವಲ್ ಕೊರೋನಾ ವೈರಾಣು) ಹರಡುವಿಕ ಹಿನ್ನೆಲೆಯಲ್ಲಿ ನಿಗದಿತ ಸಾಮಾಜಿಕ ಅಂತರ ಮತ್ತು ನೈರ್ಮಲ, ಕಾಪಾಡುವುದು ಹಾಗೂ ವೈರಾಣು ಹರಡುವಿಕ ತಡೆಗಟ್ಟುವ ಬಗ್ಗೆ, ಕೇಂದ್ರ/ರಾಜ್ಯ ಸರ್ಕಾರವು ನೀಡಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು ಎಂದು ತಿಳಿಸಿದ್ದಾರೆ.
ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ20 ಪಂದ್ಯದಿಂದ ‘ವಿರಾಟ್ ಕೊಹ್ಲಿ’ ಔಟ್
BREAKING : ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ‘ಎಲ್.ಕೆ ಅಡ್ವಾಣಿ’ ಭಾಗಿ : ವಿಶ್ವ ಹಿಂದೂ ಪರಿಷತ್