ಬೆಂಗಳೂರು: ಕ್ರಿಕೆಟ್ ಪ್ರೇಮಿಗಳಿಗೆ ಸಿಹಿಸುದ್ದಿ ಎನ್ನುವಂತೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯಾವಳಿ ನಿಮಿತ್ತ ವೀಕ್ಷಕರ ಅನುಕೂಲಕ್ಕಾಗಿ ನಮ್ಮ ಮೆಟ್ರೋ ಸಂಚಾರ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.
ಈ ಕುರಿತಂತೆ ಬಿಎಂಆರ್ ಸಿಎಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರಿನಲ್ಲಿ ನಡೆಯಲಿರುವ TATA IPL T-20 ಕ್ರಿಕೆಟ್ ಪಂದ್ಯಗಳ ವೀಕ್ಷಣೆಗಾಗಿ, ನಮ್ಮ ಮೆಟ್ರೋ ದಿನಾಂಕ 02, 10, 18, ಹಾಗೂ 24ನೇ ಏಪ್ರಿಲ್ ಮತ್ತು 03, 13 ಹಾಗೂ 17ನೇ ಮೇ, 2025 ರಂದು ಎಲ್ಲಾ ನಾಲ್ಕು ಟರ್ಮಿನಲ್ ಅಂದರೆ ವೈಟ್‌ಫೀಲ್ಡ್ (ಕಾಡುಗೋಡಿ), ಚಲ್ಲಘಟ್ಟ, ರೇಷ್ಮೆ ಸಂಸ್ಥೆ ಮತ್ತು ಮಾದವರ ಮೆಟ್ರೋ ನಿಲ್ದಾಣಗಳಿಂದ ಕೊನೆಯ ಮೆಟ್ರೋ ರೈಲು ಸೇವೆಯನ್ನು ಮರುದಿನ ಮುಂಜಾನೆ 12.30ರ ವರೆಗೆ ವಿಸ್ತರಿಸಿದೆ.
ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ನಿಂದ ಎಲ್ಲಾ ನಾಲ್ಕು ದಿಕ್ಕುಗಳ ಕಡೆಗೆ ಕೊನೆಯ ರೈಲು ಮಧ್ಯರಾತ್ರಿ 01.15 ಕ್ಕೆ ಹೊರಡಲಿದೆ ಎಂಬುದಾಗಿ ಬಿ ಎಂ ಆರ್ ಸಿ ಎಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯಗಳ ವೀಕ್ಷಣೆಗಾಗಿ ನಮ್ಮ ಮೆಟ್ರೋ ಏಪ್ರಿಲ್ 02, 10, 18, 24 ಹಾಗೂ ಮೇ 03, 13, 17 ರಂದು ಎಲ್ಲಾ ನಾಲ್ಕು ಟರ್ಮಿನಲ್ ಅಂದರೆ ವೈಟ್‌ಫೀಲ್ಡ್ (ಕಾಡುಗೋಡಿ), ಚಲ್ಲಘಟ್ಟ, ರೇಷ್ಮೆ ಸಂಸ್ಥೆ ಮತ್ತು ಮಾದವರ ಮೆಟ್ರೋ ರೈಲು ಸೇವೆಯನ್ನು ರಾತ್ರಿ 12.30ರ… pic.twitter.com/zz6kyTDaEH
— DIPR Karnataka (@KarnatakaVarthe) April 1, 2025
‘ಚಿತ್ರದುರ್ಗ ಜಿಲ್ಲಾ ಪೊಲೀಸ’ರ ಭರ್ಜರಿ ಬೇಟೆ: ಇಸ್ಪಿಟ್ ಜೂಜಾಟ ಸಂಬಂಧ ‘154 ಕೇಸ್’ ದಾಖಲು, 10.80 ಲಕ್ಷ ಜಪ್ತಿ
ಚಿತ್ರದುರ್ಗ: ಯಲ್ಲದಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ‘ಶುಶ್ರೂಷಾಧಿಕಾರಿ ಎಸ್.ಜೆ ಸೋಮಶೇಖರ್’ ಅಮಾನತು