ಭಾರತೀಯ ಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಹೊಸ ಸೌಲಭ್ಯವನ್ನು ಆಯೋಜಿಸಲಾಗಿದೆ. ಈ ಸೌಲಭ್ಯದಿಂದ ನಾಗರಿಕರು ತಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಬಳಸಿ ಸ್ಪೀಡ್ ಪೊಸ್ಟ್ , ಪಾರ್ಸಲ್ ಸೇರಿದಂತೆ ವಿವಿಧ ಅಂಚೆ ಸೇವೆಗಳನ್ನು ಮನೆಯಿಂದಲೇ ಬುಕ್ ಮಾಡುವ ಅವಕಾಶವನ್ನು ಪಡೆಯಬಹುದು. ಇದರ ಮೂಲಕ ಅಂಚೆ ಕಚೇರಿಯಲ್ಲಿ ಸಾಲಿನಲ್ಲಿ ನಿಲುವ ಅನಿವಾರ್ಯತೆ ಕಡಿಮೆಯಾಗುತ್ತದೆ ಹಾಗೂ ಸಮಯದ ಉಳಿತಾಯವಾಗುತ್ತದೆ.
ಸೇವೆಯನ್ನುಮೂಲಕ https://app.indiapost.gov.in/customer.selfservice/home ಪೂರ್ಣಗೊಳಿಸಿದ ನಂತರ ಸೃಷ್ಟಿಯಾಗುವ ಲೇಬಲ್, ಕ್ಯೂಆರ್ ಅನ್ನು ಮುದ್ರಿಸಿ ಹತ್ತಿರದ ಯಾವುದೇ ಅಂಚೆ ಕಚೇರಿಯಲ್ಲಿ ಸ್ಪೀಡ್ ಫೆÇೀಸ್ಟ್, ಪಾರ್ಸೆಲ್ ಅನ್ನು ಬುಕ್ಕಿಂಗ್ ಸಂಖ್ಯೆಯ ಮೂಲಕ ಹಸ್ತಾಂತರಿಸಬಹುದು. ಸಾರ್ವಜನಿಕರು ಈ ನವೀನ ಡಿಜಿಟಲ್ ಸೌಲಭ್ಯವನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಳಸಿಕೊಳ್ಳಬೇಕೆಂದು ಅಂಚೆ ಅಧೀಕ್ಷಕರಾದ ಚಂದ್ರಶೇಖರ ತಿಳಿಸಿದ್ದಾರೆ.








