ಬೆಂಗಳೂರು : ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮ 2012 ರನ್ವಯ ಅಧಿಸೂಚಿಸಲ್ಪಟ್ಟ ಅರ್ಹ ದಿನಗೂಲಿ ನೌಕರರಿಗೆ 2024 ಪರಿಷ್ಕೃತ ವೇತನ ಶ್ರೇಣಿಗಳನ್ವಯ ಆರ್ಥಿಕ ಸೌಲಭ್ಯಗಳನ್ನು ಮಂಜೂರು ಮಾಡುವ ಬಗ್ಗೆ ರಾಜ್ಯ ಸರ್ಕಾರವು ಗೆಜೆಟ್ ಅಧಿಸೂಚನೆ ಹೊರಡಿಸಿದೆ.
ಮೇಲೆ (1)ರಲ್ಲಿ ಓದಲಾದ ಅಧಿಸೂಚನೆಯನ್ವಯ ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮ 2012ನ್ನು ಜಾರಿಗೆ ತರಲಾಗಿದೆ. ಮೇಲೆ (2)ರಲ್ಲಿ ಓದಲಾದ ದಿನಾಂಕ: 19.09.2014ರ ಸರ್ಕಾರದ ಆದೇಶದಲ್ಲಿ ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮ 2012ರಡಿ ಸೇವಾ ಮುಂದುವರಿಕೆಗೆ ಅರ್ಹರಾದ ದಿನಗೂಲಿ ನೌಕರರಿಗೆ ಇವರುಗಳನ್ನು ಅಧಿಸೂಚಿಸಿದ ದಿನಾಂಕದಿಂದ ಅವರನ್ನು ಮುಂದುವರೆಸಿದ ಹುದ್ದೆಯ ಕಾಲಿಕ ವೇತನ ಶ್ರೇಣಿಯ ಕನಿಷ್ಠ ವೇತನ, ರಾಜ್ಯ ಸರ್ಕಾರಿ ನೌಕರರಿಗೆ ಕಾಲಕಾಲಕ್ಕೆ ನೀಡಲಾಗುವ ತುಟ್ಟಿಭತ್ಯೆಯ ಶೇಕಡ 75ರಷ್ಟು, ರಾಜ್ಯ ಸರ್ಕಾರಿ ನೌಕರರಿಗೆ ಕಾಲಕಾಲಕ್ಕೆ ನೀಡಲಾಗುವ ಅವರುಗಳು ಕರ್ತವ್ಯ ನಿರ್ವಹಿಸುವ ಸ್ಥಳಕ್ಕೆ ಅನ್ವಯವಾಗುವ ಮನೆ ಬಾಡಿಗೆ ಭತ್ಯೆಯ ಸಾಮಾನ್ಯ ದರಗಳ ಶೇಕಡ 75ರಷ್ಟನ್ನು ಅರ್ಹ ದಿನಗೂಲಿ ನೌಕರರಿಗೆ, ಅವರನ್ನು ಮುಂದುವರೆಸುವ ಹುದ್ದೆಯ ಕಾಲಿಕ ವೇತನ ಶ್ರೇಣಿಯ ಕನಿಷ್ಠ ವೇತನದ ಮೇಲೆ ಮನೆ ಬಾಡಿಗೆ ಭತ್ಯೆಯಾಗಿ ಮಂಜೂರು ಮಾಡುವಂತೆ ಆದೇಶಿಸಲಾಗಿದೆ ಹಾಗೂ ಇವರುಗಳು ಅರ್ಹರಿರುವ ಇತರ ಸೌಲಭ್ಯಗಳ ಕುರಿತು ಆದೇಶ ಮಾಡಲಾಗಿದೆ.
ಮೇಲೆ (3)ರಲ್ಲಿ ಓದಲಾದ ಸರ್ಕಾರದ ಆದೇಶದಲ್ಲಿ ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮ 2012ರಡಿ ಅಧಿಸೂಚಿಸಲ್ಪಟ್ಟ ದಿನಗೂಲಿ ನೌಕರರಿಗೆ ದಿನಾಂಕ: 1.8.2018ರಿಂದ ಜಾರಿಗೆ ಬರುವಂತೆ 2018ರ ಪರಿಷ್ಕೃತ ವೇತನ ಶ್ರೇಣಿಗಳನ್ವಯ ಅವರುಗಳನ್ನು ಮುದುವರೆಸಿದ ಹುದ್ದೆಯ ಕಾಲಿಕ ವೇತನ ಶ್ರೇಣಿಯ ಕನಿಷ್ಠ ವೇತನವನ್ನು ದಿನಾಂಕ: 1.8.2018ರಿಂದ ಜಾರಿಗೆ ಬರುವಂತೆ ನಿಗದಿಗೊಳಿಸಿ ಆದೇಶಿಸಲಾಗಿದೆ.
ಮೇಲೆ (4)ರಲ್ಲಿ ಓದಲಾದ ಸರ್ಕಾರದ ಆದೇಶದಲ್ಲಿ ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮ 2012ರಡಿ ಅಧಿಸೂಚಿಸಲ್ಪಟ್ಟ ದಿನಗೂಲಿ ನೌಕರರಿಗೆ ದಿನಾಂಕ: 19.9.2014ರ ಆದೇಶದಂತೆ ನೀಡಲಾಗುತ್ತಿದ್ದ ಶೇಕಡ 75ರಷ್ಟು ತುಟ್ಟಿಭತ್ಯೆಯನ್ನು ಶೇಕಡ 90ಕ್ಕೆ ಹಾಗೂ ಶೇಕಡ 75ರಷ್ಟು ನೀಡುತ್ತಿದ್ದ ಮನೆ ಬಾಡಿಗೆ ಭತ್ಯೆಯನ್ನು ಶೇಕಡ 90ಕ್ಕೆ ನಿಗದಿಪಡಿಸಿ ಆದೇಶಿಸಲಾಗಿದೆ.
ಮೇಲೆ (5)ರಲ್ಲಿ ಓದಲಾದ ಅಧಿಸೂಚನೆಯಲ್ಲಿ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಿ ರಾಜ್ಯ ಸರ್ಕಾರಿ ನೌಕರರಿಗೆ ಪರಿಷ್ಕೃತ ವೇತನ ಶ್ರೇಣಿಗಳನ್ನು ಸರ್ಕಾರವು ಮಂಜೂರು ಮಾಡಿರುತ್ತದೆ. ಮೇಲೆ (1) ಹಾಗೂ (2)ರಲ್ಲಿ ಓದಲಾದ ಅಧಿನಿಯಮ ಹಾಗೂ ಸರ್ಕಾರದ ಆದೇಶಗಳಲ್ಲಿ ಕಲ್ಪಿಸಲಾಗಿರುವ ಅವಕಾಶಗಳಂತೆ ಈ ಪರಿಷ್ಕೃತ ವೇತನಗಳನ್ನಯ ಅರ್ಹ ದಿನಗೂಲಿ ನೌಕರರ ಆರ್ಥಿಕ ಸೌಲಭ್ಯಗಳನ್ನು ಕೂಡ ಪರಿಷ್ಕರಿಸಿ ಮಂಜೂರು ಮಾಡಲು ಸರ್ಕಾರವು ತೀರ್ಮಾನಿಸಿ, ಈ ಕೆಳಕಂಡಂತೆ ಆದೇಶಿಸಿದೆ.
ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 56 ಸೇಸ್ತ ಅ 2024, ದಿನಾಂಕ: 20.09.2024,
ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮ, 2012ರನ್ನಯ ಅಧಿಸೂಚಿಸಲ್ಪಟ್ಟ ಅರ್ಹ ದಿನಗೂಲಿ ನೌಕರರಿಗೆ ದಿನಾಂಕ: 01.09.2024ರಿಂದ ಜಾರಿಗೆ ಬರುವಂತೆ ಈ ಕೆಳಕಂಡ ಸೌಲಭ್ಯಗಳನ್ನು ಮಂಜೂರು ಮಾಡಲಾಗಿದೆ.
1. 2024ರ ಪರಿಷ್ಕೃತ ವೇತನ ಶ್ರೇಣಿಗಳನ್ನಯ ಅವರುಗಳನ್ನು ಸೇವೆಯಲ್ಲಿ ಮುಂದುವರೆಸಿದ ಹುದ್ದೆಯ ಕಾಲಿಕ ಶ್ರೇಣಿಯ ಕನಿಷ್ಠ ವೇತನವನ್ನು ನಿಗದಿಗೊಳಿಸತಕ್ಕದ್ದು;
2. ರಾಜ್ಯ ಸರ್ಕಾರಿ ನೌಕರರಿಗೆ ಕಾಲಕಾಲಕ್ಕೆ ನೀಡಲಾಗುವ ತುಟ್ಟಿಭತ್ಯೆಯ ಶೇಕಡ 90ರಷ್ಟು
ಅರ್ಹ ದಿನಗೂಲಿ ನೌಕರರಿಗೆ ಅವರನ್ನು ಮುಂದುವರೆಸಿದ ಹುದ್ದೆಯ ಕಾಲಿಕ ವೇತನ ಶ್ರೇಣಿಯ ಕನಿಷ್ಠ ವೇತನದ ಮೇಲೆ ತುಟ್ಟಿಭತ್ಯೆಯಾಗಿ ಮಂಜೂರು ಮಾಡತಕ್ಕದ್ದು;
3. ರಾಜ್ಯ ಸರ್ಕಾರಿ ನೌಕರರಿಗೆ ಕಾಲಕಾಲಕ್ಕೆ ನೀಡಲಾಗುವ, ಅವರುಗಳು ಕರ್ತವ್ಯ ನಿರ್ವಹಿಸುವ ಸ್ಥಳಕ್ಕೆ ಅನ್ವಯವಾಗುವ ಮನೆ ಬಾಡಿಗೆ ಭತ್ಯೆ ಸಾಮಾನ್ಯ ದರಗಳ ಶೇಕಡ 90ರಷ್ಟು, ಅರ್ಹ ದಿನಗೂಲಿ ನೌಕರರಿಗೆ ಅವರನ್ನು ಮುಂದುವರೆಸಿದ ಹುದ್ದೆಯ ಕಾಲಿಕ ವೇತನ ಶ್ರೇಣಿಯ ಕನಿಷ್ಠ ವೇತನದ ಮೇಲೆ ಮನೆ ಬಾಡಿಗೆ ಭತ್ಯೆಯಾಗಿ ಮಂಜೂರು ಮಾಡತಕ್ಕದ್ದು.