Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಸರ್ಕಾರ `ಭೂಸ್ವಾಧೀನ’ ಪ್ರಕರಣಗಳಲ್ಲಿ ಭೂಮಿಯ ಬೆಲೆ ನಿಗದಿಪಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

BREAKING : ಷೇರುಪೇಟೆಯಲ್ಲಿ ಸೆನ್ಸೆಕ್ಸ್ 800 ಅಂಕ ಕುಸಿತ , 23,100 ಕ್ಕಿಂತ ಕೆಳಗಿಳಿದ ನಿಫ್ಟಿ |Share Market

Shocking: ​ಅಂಗನವಾಡಿ ಪೌಷ್ಟಿಕ ಆಹಾರದ ಪ್ಯಾಕೆಟ್‌ನಲ್ಲಿ ಸತ್ತ ಹಾವಿನ ಮರಿ ಪತ್ತೆ !

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಸವದತ್ತಿ ಯಲ್ಲಮ್ಮನ ಭಕ್ತ’ರಿಗೆ ಗುಡ್ ನ್ಯೂಸ್: ಸಮಗ್ರ ಅಭಿವೃದ್ಧಿಗೆ ‘ಸಚಿವ ರಾಮಲಿಂಗಾರೆಡ್ಡಿ’ ಮಾಸ್ಟ‌ರ್ ಫ್ಲ್ಯಾನ್
KARNATAKA

‘ಸವದತ್ತಿ ಯಲ್ಲಮ್ಮನ ಭಕ್ತ’ರಿಗೆ ಗುಡ್ ನ್ಯೂಸ್: ಸಮಗ್ರ ಅಭಿವೃದ್ಧಿಗೆ ‘ಸಚಿವ ರಾಮಲಿಂಗಾರೆಡ್ಡಿ’ ಮಾಸ್ಟ‌ರ್ ಫ್ಲ್ಯಾನ್

By ವಸಂತ ಬಿ ಈಶ್ವರಗೆರೆ

ಬೆಳಗಾವಿ: ಪ್ರತಿವರ್ಷ ಕೋಟ್ಯಂತರ ಜನರು ಭೇಟಿ ನೀಡುವ ಸವದತ್ತಿ ಯಲ್ಲಮ್ಮ ದೇವಸ್ಥಾನ ಹಾಗೂ ಯಲ್ಲಮ್ಮ ಗುಡ್ಡದ ಸಮಗ್ರ ಅಭಿವೃದ್ಧಿಗೆ ಮಾಸ್ಟ‌ರ್ ಫ್ಲ್ಯಾನ್ ರೂಪಿಸಲಾಗುವುದು ಎಂದು ಸಾರಿಗೆ ಹಾಗೂ ಮುಜರಾಯಿ ಇಲಾಖೆಯ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದರು.

ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಇಂದು ಭೇಟಿ ನೀಡಿ ದೇವಿ ದರ್ಶನ ಪಡೆದು ಅಧಿಕಾರಿಗಳ ಸಭೆಯನ್ನು ನಡೆಸಿದರು. ಉತ್ತರ ಕರ್ನಾಟಕದ ಅತ್ಯಂತ ಪ್ರಸಿದ್ದ ಧಾರ್ಮಿಕ ಸ್ಥಳವಾಗಿರುವ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಕೋಟ್ಯಂತರ ಜನರು ಭೇಟಿ ನೀಡುತ್ತಾರೆ.

ಜಾತ್ರೆ ಸಂದರ್ಭದಲ್ಲಿ ಸಮರ್ಪಕ ಪಾರ್ಕಿಂಗ್ ವ್ಯವಸ್ಥೆ ಒದಗಿಸುವುದರ ಜತೆಗೆ ಲಕ್ಷಾಂತರ ಜನರಿಗೆ ಸುಗಮ ದರ್ಶನಕ್ಕೆ ಅನುಕೂಲವಾಗುವಂತೆ ಮಾಸ್ಟರ್ ಪ್ಲಾನ್ ರೂಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ನಾಲೈದು ಗಂಟೆಗಳ ಕಾಲ ಸರತಿ ಸಾಲಿನಲ್ಲಿ ನಿಲ್ಲುವ ಭಕ್ತಾದಿಗಳಿಗೆ ಅನುಕೂಲವಾಗುವಂತೆ ಕುಡಿಯುವ ನೀರು, ನೆರಳು, ಶೌಚಾಲಯ ವ್ಯವಸ್ಥೆ ಮತ್ತಿತರ ಮೂಲಸೌಕರ್ಯಗಳನ್ನು ಒದಗಿಸಬೇಕಾಗುತ್ತದೆ. ಇವೆಲ್ಲವುಗಳನ್ನು ಗಮನದಲ್ಲಿಟ್ಟುಕೊಂಡು ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ದೇವಸ್ಥಾನವು ಪ್ರತಿವರ್ಷ ಅಂದಾಜು ರೂ. 20 ಕೋಟಿ ಆದಾಯ ಹೊಂದಿದೆ. ಈ ಆದಾಯದಲ್ಲಿ ದೇವಸ್ಥಾನ ನಿರ್ವಹಣೆ ಬಳಿಕ ಉಳಿಯುವ ಹಣವನ್ನು ಮಾಸ್ಟ‌ರ್ ಪ್ಲಾನ್ ಅನುಷ್ಠಾನಕ್ಕೆ ಬಳಸಬಹುದಾಗಿದೆ. ಇದಲ್ಲದೇ ಸರಕಾರದಿಂದಲೂ ಹೆಚ್ಚಿನ ಅನುದಾನ ಬಿಡುಗಡೆ ಮಾಡಬಹುದು ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಇದಲ್ಲದೇ ಪ್ರವಾಸೋದ್ಯಮ ಇಲಾಖೆಯ ವತಿಯಿಂದಲೂ ಪ್ರತ್ಯೇಕ ಯೋಜನೆಯನ್ನು ಕೂಡ ರೂಪಿಸುವ ಮೂಲಕ ಒಟ್ಟಾರೆ ಸವದತ್ತಿ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿಗೆ ಕಾಲಮಿತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಮುಜರಾಯಿ ಹಾಗೂ ಪ್ರವಾಸೋದ್ಯಮ ಇಲಾಖೆಗಳ ವತಿಯಿಂದ ಅಭಿವೃದ್ಧಿ ಕಾಮಗಾರಿಗಳಳನ್ನು ಕೈಗೊಳ್ಳಲು ಉದ್ದೇಶಿಸಲಾಗಿದೆ. ಮುಜರಾಯಿ ಇಲಾಖೆಗೆ ಸಂಬಂಧಿಸಿದಂತೆ ಲಭ್ಯವಿರುವ 87 ಎಕರೆ ಪ್ರದೇಶದಲ್ಲಿ ಮುಂದಿನ ಹತ್ತು ವರ್ಷಗಳ ಅವಧಿಯಲ್ಲಿ ಹಂತ ಹಂತವಾಗಿ ಅನುಷ್ಠಾನಗೊಳಿಸಬಹುದಾದ ಸಮಗ್ರ ಯೋಜನೆ ರೂಪಿಸಲಾಗುವುದು ಎಂದು ಹೇಳಿದರು.

ಸವದತ್ತಿ ಶಾಸಕರಾದ ಶ್ರೀ ವಿಶ್ವಾಸ್ ವೈದ್ಯ, ಮಾಜಿ ಶಾಸಕರಾದ ಶ್ರೀ ಆರ್ ವಿ ಪಾಟೀಲ್, ಧಾರ್ಮಿಕ ದತ್ತಿ ಆಯುಕ್ತರಾದ ಶ್ರೀ ಬಸವರಾಜೇಂದ್ರ, ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಮಹೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಮಲ್ಲು ಜಕಾತಿ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

BIG Alert: ‘ವಾಹನ ಸವಾರ’ರ ಗಮನಕ್ಕೆ: ಜ.16ರಿಂದ ಮತ್ತೆ 4 ದಿನ ಬೆಂಗಳೂರಿನ ‘ಪೀಣ್ಯ ಫ್ಲೈ ಓವರ್ ಕ್ಲೋಸ್’

BREAKING: ‘ಸ್ವಂತ ಮಗ’ನನ್ನೇ ಕೊಂದ ಪ್ರಕರಣ: ‘ಸಿಇಓ ಸುಚನಾ’ 6 ದಿನ ಗೋಪಾ ಪೊಲೀಸರ ಕಸ್ಟಡಿಗೆ

Share. Facebook Twitter LinkedIn WhatsApp Email

Related Posts

BIG NEWS : ಸರ್ಕಾರ `ಭೂಸ್ವಾಧೀನ’ ಪ್ರಕರಣಗಳಲ್ಲಿ ಭೂಮಿಯ ಬೆಲೆ ನಿಗದಿಪಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Mins Read

BIG NEWS : ರಾಜ್ಯದಲ್ಲಿ `ರೌಡಿಸಂ’ಗೆ ಬ್ರೇಕ್ ಹಾಕಲು ಮಹತ್ವದ ಕ್ರಮ: ‘ರೌಡಿ ಸ್ಕ್ವಾಡ್’ ರಚನೆಗೆ ಸರ್ಕಾರ ಮಹತ್ವದ ಆದೇಶ

2 Mins Read

ನಿಮ್ಮ ಮನೆಯ `ಸ್ಮಾರ್ಟ್ ಟಿವಿ’ ತಿಂಗಳಿಗೆ ಎಷ್ಟು ಕರೆಂಟ್ ಬಳಸುತ್ತೆ ಗೊತ್ತಾ? ಇಲ್ಲಿದೆ ವಿದ್ಯುತ್ ಉಳಿತಾಯದ ಟಿಪ್ಸ್!

2 Mins Read
Recent News

BIG NEWS : ಸರ್ಕಾರ `ಭೂಸ್ವಾಧೀನ’ ಪ್ರಕರಣಗಳಲ್ಲಿ ಭೂಮಿಯ ಬೆಲೆ ನಿಗದಿಪಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

BREAKING : ಷೇರುಪೇಟೆಯಲ್ಲಿ ಸೆನ್ಸೆಕ್ಸ್ 800 ಅಂಕ ಕುಸಿತ , 23,100 ಕ್ಕಿಂತ ಕೆಳಗಿಳಿದ ನಿಫ್ಟಿ |Share Market

Shocking: ​ಅಂಗನವಾಡಿ ಪೌಷ್ಟಿಕ ಆಹಾರದ ಪ್ಯಾಕೆಟ್‌ನಲ್ಲಿ ಸತ್ತ ಹಾವಿನ ಮರಿ ಪತ್ತೆ !

BIG NEWS : ರಾಜ್ಯದಲ್ಲಿ `ರೌಡಿಸಂ’ಗೆ ಬ್ರೇಕ್ ಹಾಕಲು ಮಹತ್ವದ ಕ್ರಮ: ‘ರೌಡಿ ಸ್ಕ್ವಾಡ್’ ರಚನೆಗೆ ಸರ್ಕಾರ ಮಹತ್ವದ ಆದೇಶ

State News
KARNATAKA

BIG NEWS : ಸರ್ಕಾರ `ಭೂಸ್ವಾಧೀನ’ ಪ್ರಕರಣಗಳಲ್ಲಿ ಭೂಮಿಯ ಬೆಲೆ ನಿಗದಿಪಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

By kannadanewsnow57 KARNATAKA 2 Mins Read

ಬೆಂಗಳೂರು: ರಾಜ್ಯದಲ್ಲಿ ಭೂಸ್ವಾಧೀನ ಪ್ರಕ್ರಿಯೆಗಳಲ್ಲಿ ರೈತರು ಮತ್ತು ಭೂಮಾಲೀಕರಿಗೆ ನ್ಯಾಯಯುತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಹಾಗೂ ಅನಗತ್ಯ ಕೋರ್ಟ್ ವ್ಯಾಜ್ಯಗಳನ್ನು…

BIG NEWS : ರಾಜ್ಯದಲ್ಲಿ `ರೌಡಿಸಂ’ಗೆ ಬ್ರೇಕ್ ಹಾಕಲು ಮಹತ್ವದ ಕ್ರಮ: ‘ರೌಡಿ ಸ್ಕ್ವಾಡ್’ ರಚನೆಗೆ ಸರ್ಕಾರ ಮಹತ್ವದ ಆದೇಶ

ನಿಮ್ಮ ಮನೆಯ `ಸ್ಮಾರ್ಟ್ ಟಿವಿ’ ತಿಂಗಳಿಗೆ ಎಷ್ಟು ಕರೆಂಟ್ ಬಳಸುತ್ತೆ ಗೊತ್ತಾ? ಇಲ್ಲಿದೆ ವಿದ್ಯುತ್ ಉಳಿತಾಯದ ಟಿಪ್ಸ್!

ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್ : ತಿಂಗಳಿಗೆ ಕೇವಲ 55 ರೂ. ಹೂಡಿಕೆ ಮಾಡಿದ್ರೆ ಸಿಗಲಿದೆ 3,000 ರೂ. ಪಿಂಚಣಿ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.